ETV Bharat / state

ಶಾಸಕರ ಆಸ್ತಿ ವಿವರ ಸಲ್ಲಿಕೆಗೆ ಜೂನ್ 30 ಗಡುವು: ಸಲ್ಲಿಸದಿದ್ದರೆ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ ಲೋಕಾಯುಕ್ತರು - deadline for MLAs property details submission

ಒಂದು ವೇಳೆ ಶಾಸಕರು ಆಸ್ತಿ ವಿವರ ಸಲ್ಲಿಸದೇ ಇದ್ದಲ್ಲಿ ಶಿಸ್ತು ಕ್ರಮ ಕೈಗೊಳ್ಳುವುದಾಗಿ ಲೋಕಾಯುಕ್ತರು ಎಚ್ಚರಿಕೆ ನೀಡಿದ್ದಾರೆ.

Lokayukta Justice B.S. Patil
ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್
author img

By

Published : Jun 9, 2023, 6:53 PM IST

ಬೆಂಗಳೂರು: ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಮುಗಿದು ಇದೀಗ ಹೊಸ ಸರ್ಕಾರವೂ ರಚನೆಯಾಗಿದೆ. ಈ ಮಧ್ಯೆ ಚುನಾವಣೆಯಲ್ಲಿ ಗೆದ್ದ ರಾಜ್ಯದ ಎಲ್ಲ ಶಾಸಕರು ತಮ್ಮ ಆಸ್ತಿ ವಿವರ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಆದೇಶಿಸಿದ್ದರು. ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಸೇರಿದಂತೆ ಎಲ್ಲ ರಾಜಕೀಯ ಪಕ್ಷಗಳಲ್ಲಿ ಮೊದಲ ಬಾರಿ ಆಯ್ಕೆಯಾದ ಹಾಗೂ ಪುನರ್ ಆಯ್ಕೆಯಾದ ಶಾಸಕರಿಗೆ ಜೂನ್ 30ರೊಳಗೆ ಆಸ್ತಿ ವಿವರ ಸಲ್ಲಿಸುವಂತೆ ಡೆಡ್ ಲೈನ್ ನೀಡಲಾಗಿತ್ತು. ರಾಜ್ಯದ 224 ಶಾಸಕರಿಗೂ ಈ ಡೆಡ್ ಲೈನ್ ಅನ್ವಯವಾಗುತ್ತದೆ. ಆದರೆ ಆದೇಶ ನೀಡಿ ಹದಿನೈದು ದಿನ ಕಳೆದರೂ ಸಹ ಯಾವುದೇ ಶಾಸಕರಿಂದಲೂ ಲೋಕಾಯುಕ್ತಕ್ಕೆ ಆಸ್ತಿ ವಿವರ ಸಲ್ಲಿಕೆಯಾಗಿಲ್ಲ.

ಕಳೆದ ಬಾರಿ ಲೋಕಾಯುಕ್ತ ನೋಟಿಸ್​ಗೆ ಕೆಲವು ಶಾಸಕರು ಪ್ರತಿಕ್ರಿಯಿಸಿರಲಿಲ್ಲ. ಅಲ್ಲದೇ ಪುನರ್ ಆಯ್ಕೆಯಾದ ಶಾಸಕರು ಕಳೆದ ಬಾರಿ ಆಸ್ತಿ ವಿವರ ಸಲ್ಲಿಸಿದ್ದೇವೆ ಎಂದು ಈ ಬಾರಿ ಸುಮ್ಮನಾಗುವಂತಿಲ್ಲ. ದಾಖಲೆಗಳ ಸಮೇತ ಮತ್ತೆ ಆಸ್ತಿ ವಿವರ ಸಲ್ಲಿಸಬೇಕು. ಒಂದು ವೇಳೆ ಜೂನ್ 30 ರೊಳಗೆ ಶಾಸಕರು ಆಸ್ತಿ ವಿವರ ಸಲ್ಲಿಸದೇ ಇದ್ದಲ್ಲಿ ಲೋಕಾಯುಕ್ತ ಕಾಯ್ದೆಯಡಿ ಶಿಸ್ತು ಕ್ರಮ ಜರುಗಿಸುವ ಎಚ್ಚರಿಕೆ ನೀಡಲಾಗಿದ್ದು, ಆಸ್ತಿ ವಿವರ ಸಂಗ್ರಹಿಸಿ ಸಲ್ಲಿಸುವಂತೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಮೌಖಿಕ ಆದೇಶ‌ ರವಾನಿಸಿದ್ದಾರೆ ಎಂದು ತಿಳಿದು ಬಂದಿದೆ.

ಕಳೆದ ಬಾರಿಯೂ ಲೋಕಾಯುಕ್ತ ಆಸ್ತಿ ವಿವರ ಸಲ್ಲಿಸುವಂತೆ ನೀಡಿದ್ದ ನೋಟೀಸ್​ಗೂ ಕೆಲವು ಶಾಸಕರು ಸುಮ್ಮನಿದ್ದರು. ಈ ಬಾರಿ ಶಾಸಕರ ವರ್ತನೆ ಹಾಗೂ ದಾಖಲೆಗಳನ್ನು ಲೋಕಾಯುಕ್ತ ಗಂಭೀರವಾಗಿ ಪರಿಗಣಿಸಿದ್ದು, ನ್ಯಾಯಮೂರ್ತಿಗಳು ಬಿ.ಎಸ್. ಪಾಟೀಲ್ ಅವರಿಂದ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಆದೇಶ‌ ಕಳುಹಿಸಿದೆ. ಮೊದಲ ಬಾರಿ ಆಯ್ಕೆಯಾದ ಶಾಸಕರ ಜೊತೆ ಪುನರ್ ಆಯ್ಕೆಯಾದ ಎಲ್ಲ ಶಾಸಕರ ಆಸ್ತಿ ವಿವರ ನೀಡುವಂತೆ ಸೂಚ‌ನೆ ನೀಡಲಾಗಿದೆ.

ಈ ಮಧ್ಯೆ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಎಲ್ಲ ಶಾಸಕರ ಆಸ್ತಿ ವಿವರ ಪಡೆದು ಸಲ್ಲಿಸುವಂತೆ ಮೌಖಿಕ ಸೂಚನೆ ನೀಡಲಾಗಿತ್ತು. ಒಂದು ವೇಳೆ 30 ನೇ ತಾರೀಖಿನ ಒಳಗೆ ಶಾಸಕರು ಆಸ್ತಿ ವಿವರ ಸಲ್ಲಿಸದಿದ್ದಲ್ಲಿ ಶಿಸ್ತು ಕ್ರಮ ಜರುಗಿಸಲಾಗುವುದು. ಲೋಕಾಯುಕ್ತ ಆ್ಯಕ್ಟ್ ಅಡಿ ಶಾಸಕರ ಪೋಟೋವನ್ನು ಪತ್ರಿಕೆಗಳಲ್ಲಿ ಆಸ್ತಿ ವಿವರ ಸಲ್ಲಿಸಲಿಲ್ಲ ಎಂದು ಮುದ್ರಣ ಮಾಡಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ. ಕಳೆದ ಬಾರಿ ಶಾಸಕರು ಸರಿಯಾದ ಮಾದರಿಯಲ್ಲಿ ಆಸ್ತಿ ವಿವರ ಸಲ್ಲಿಸದೇ ಇರುವ ಕಾರಣ, ಈ ಬಾರಿ ಸಮಸ್ಯೆ ಆಗಬಾರದೆಂದು ಶಾಸಕರ ಕಡ್ಡಾಯ ಆಸ್ತಿ ವಿವರ ಪಡೆಯಲು ಲೋಕಾಯುಕ್ತ ಸೆಕ್ರೆಟರಿಗೆ ಲೋ.ನ್ಯಾ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ವಿಪಕ್ಷ ನಾಯಕ ಸಿದ್ದರಾಮಯ್ಯ ಆಸ್ತಿ ವಿವರ ಘೋಷಣೆ ; ಮಾಜಿ ಸಿಎಂ ಗಿಂತ ಅವರ ಪತ್ನಿಯೇ ಶ್ರೀಮಂತೆ!

ETV Bharat Logo

Copyright © 2025 Ushodaya Enterprises Pvt. Ltd., All Rights Reserved.