ಬೆಂಗಳೂರು: ಕಲಬುರಗಿ ಜಿಲ್ಲಾಧಿಕಾರಿ ಶರತ್ ಅವರ ವರ್ಗಾವಣೆ ಆದೇಶಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಡೆ ನೀಡಿದ್ದು, ಅದೇ ಜಿಲ್ಲೆಯಲ್ಲಿ ಮುಂದುವರೆಯುವಂತೆ ಸೂಚನೆ ನೀಡಿದ್ದಾರೆ.
ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆಗೊಳಿಸಿ ಆದೇಶ ಹೊರ ಬೀಳುತ್ತಿದ್ದಂತೆ ಡಿಸಿ ಶರತ್ ಜೊತೆ ದೂರವಾಣಿ ಮೂಲಕ ಸಿಎಂ ಯಡಿಯೂರಪ್ಪ ಮಾತುಕತೆ ನಡೆಸಿದರು. ಡಿಸಿ ಶರತ್ ಕಾರ್ಯ ವೈಖರಿಗೆ ಫೋನ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದು, ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದೀರಿ, ಅದನ್ನು ಮುಂದುವರಿಸಿ. ಸದ್ಯ ನಿಮ್ಮನ್ನು ವರ್ಗಾವಣೆ ಮಾಡುವುದಿಲ್ಲ ಎಂದು ಸಿಎಂ ಭರವಸೆ ನೀಡಿದ್ದಾರೆ ಎಂದು ಸಿಎಂ ಕಚೇರಿ ಮೂಲಗಳಿಂದ ತಿಳಿದು ಬಂದಿದೆ.
ಕಲಬುರಗಿ ಜಿಲ್ಲಾಧಿಕಾರಿಗಳ ವರ್ಗಾವಣೆಗೆ ಸ್ಥಳೀಯ ಸಂಸದ ಉಮೇಶ್ ಜಾಧವ್ ಹಾಗೂ ಕಲಬುರಗಿ ದಕ್ಷಿಣ ಕ್ಷೇತ್ರದ ಶಾಸಕ ಅಪ್ಪು ಪಾಟೀಲ್ ರೆವೂರ್ ಒತ್ತಡ ಹೇರಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಉತ್ತಮವಾಗಿ ಕೆಲಸ ಮಾಡುತ್ತಿರುವ ಡಿಸಿ ವರ್ಗಾವಣೆ ಈಗ ಯಾಕೆ ಎನ್ನುವ ಚರ್ಚೆ ಆರಂಭವಾಗಿತ್ತು. ಅಷ್ಟರ ನಡುವೆ ಸಿಎಂ ಮಧ್ಯಪ್ರವೇಶ ಮಾಡಿ ವರ್ಗಾವಣೆ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಕಲಬುರಗಿ ಡಿಸಿ ವರ್ಗಾವಣೆ ರದ್ದು: ಸಿಎಂ ಬಿಎಸ್ವೈ ಸೂಚನೆ ..! - ಸಿಎಂ ಬಿಎಸ್ವೈ ಸೂಚನೆ
ಕಲಬುರಗಿ ಜಿಲ್ಲಾಧಿಕಾರಿ ವರ್ಗಾವಣೆಗೊಳಿಸಿ ಆದೇಶ ಹೊರ ಬೀಳುತ್ತಿದ್ದಂತೆ ಸಿಎಂ ಬಿ.ಎಸ್.ಯಡಿಯೂರಪ್ಪ ಮಧ್ಯಪ್ರವೇಶ ಮಾಡಿ ವರ್ಗಾವಣೆ ವಿವಾದಕ್ಕೆ ತೆರೆ ಎಳೆದಿದ್ದಾರೆ.