ETV Bharat / state

ಕೆಂಪೇಗೌಡ ಏರ್ಪೋರ್ಟ್‌ನಲ್ಲಿ ಏಪ್ರಿಲ್‌ ವೇಳೆಗೆ 'ಕಲಾಲೋಕ' ಮಾರಾಟ ಮಳಿಗೆ: ಎಂ.ಬಿ.ಪಾಟೀಲ್ - ಎಂ ಬಿ ಪಾಟೀಲ್

ದೇವನಹಳ್ಳಿಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಲಾಲೋಕ ಮಾರಾಟ ಮಳಿಗೆಯನ್ನು ಮುಂಬರುವ ಏಪ್ರಿಲ್ ತಿಂಗಳ ವೇಳೆಗೆ ತೆರೆಯಲಾಗುವುದು ಎಂದು ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.

ಸಚಿವ ಎಂ.ಬಿ.ಪಾಟೀಲ್
ಸಚಿವ ಎಂ.ಬಿ.ಪಾಟೀಲ್
author img

By ETV Bharat Karnataka Team

Published : Jan 7, 2024, 7:14 AM IST

ಬೆಂಗಳೂರು: ಕನ್ನಡ ನಾಡಿನ ಅಸ್ಮಿತೆಗೆ ಹೆಸರಾದ ಸರ್ಕಾರಿ ಉದ್ದಿಮೆಗಳು ತಯಾರಿಸುವ ಉತ್ಪನ್ನಗಳ ಎರಡು ಮಾರಾಟ ಮಳಿಗೆಗಳು 'ಕಲಾಲೋಕ' ಎಂಬ ಹೆಸರಿನಲ್ಲಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಏಪ್ರಿಲ್ ಸುಮಾರಿಗೆ ಆರಂಭವಾಗಲಿವೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್​ ಹೇಳಿದರು. ವಿಮಾನ ನಿಲ್ದಾಣದ ಅಧಿಕಾರಿಗಳ (ಬಿಐಎಎಲ್) ಉಪಸ್ಥಿತಿಯಲ್ಲಿ ಶನಿವಾರ ನಡೆದ ಸಭೆಯಲ್ಲಿ ಈ ಬಗ್ಗೆ ಸಚಿವರು ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಸರ್ಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆಎಸ್‌ಡಿಎಲ್), ಕರ್ನಾಟಕ ಕೈಮಗ್ಗ ಅಭಿವೃದ್ಧಿ ನಿಗಮ, ಕೆಎಸ್ಐಸಿ (ಕರ್ನಾಟಕ ರೇಷ್ಮೆ ಉದ್ಯಮ ನಿಗಮ), ಕಾಫಿ ಬೋರ್ಡ್ ಮತ್ತು ಲಿಡ್ಕರ್ ಸಂಸ್ಥೆಗಳು ತಯಾರಿಸುವ ಉತ್ಪನ್ನಗಳನ್ನು ಈ ಮಳಿಗೆಗಳಲ್ಲಿ ಮಾರಾಟ ಮಾಡಲಾಗುವುದು. ಇವುಗಳೊಟ್ಟಿಗೆ ನಾಡಿನಲ್ಲಿ ತಯಾರಾಗುವ ಪಾರಂಪರಿಕ ಆಟಿಕೆಗಳಾದ ಚನ್ನಪಟ್ಟಣ ಆಟಿಕೆ, ಇಳಕಲ್ ಸೀರೆ, ಲಂಬಾಣಿ ಕುಸೂತಿ ಇತ್ಯಾದಿ ಉತ್ಪನ್ನಗಳೂ ಕೂಡ ಮಳಿಗೆಗಳಲ್ಲಿ ಮಾರಾಟಕ್ಕೆ ಲಭ್ಯವಿರಲಿವೆ ಎಂದು ಸಚಿವರು ವಿವರಿಸಿದರು. ಇದಕ್ಕಾಗಿ, ಹೊಸದಾಗಿ ನಿರ್ಮಿಸಿರುವ ಟರ್ಮಿನಲ್-2ರ ದೇಶೀಯ ಮತ್ತು ಅಂತಾರಾಷ್ಟ್ರೀಯ ನಿರ್ಗಮನ ವಲಯದಲ್ಲಿ ತಲಾ 180 ಚದುರ ಮೀಟರ್​ಗಳ ಜಾಗ ಗುರುತಿಸಲಾಗಿದೆ. ಅಲ್ಲಿ ವಿಭಿನ್ನ‌ ಶೈಲಿಯಲ್ಲಿ ವಿನ್ಯಾಸಗೊಳಿಸಿದ ಆಕರ್ಷಕ ಮಳಿಗೆಗಳಲ್ಲಿ ಉತ್ಪನ್ನಗಳನ್ನು ಮಾರಾಟ ಮಾಡಲಾಗುವುದು ಎಂದರು.

ನಮ್ಮ ನಾಡಿನ ಅಸ್ಮಿತೆ ಬಿಂಬಿಸುವ ಈ ಸಂಸ್ಥೆಗಳ ಉತ್ಪನ್ನಗಳನ್ನು ವಿಮಾನ ನಿಲ್ದಾಣದಲ್ಲಿನ ಗ್ರಾಹಕರಿಗೆ ಒಂದೇ ಸೂರಿನಡಿ ಸಿಗುವಂತೆ ಮಾಡುವುದು ಇದರ ಉದ್ದೇಶ. ಕೈಗಾರಿಕಾ ಇಲಾಖೆ ಇದರ ಉಸ್ತುವಾರಿ ವಹಿಸಲಿದೆ. ವಿಮಾನ ನಿಲ್ದಾಣದ ಗ್ರಾಹಕರನ್ನು ಗಮನದಲ್ಲಿ ಇರಿಸಿಕೊಂಡು ಅದಕ್ಕೆ ತಕ್ಕಂತೆ ಉತ್ಪನ್ನಗಳ ಬ್ರ್ಯಾಂಡಿಂಗ್ ಮಾಡಲು ಗಮನಹರಿಸಲಾಗುವುದು ಎಂದು ತಿಳಿಸಿದರು. ಇದೇ ವೇಳೆ, ಕಾಫಿ ಬೋರ್ಡ್, ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುತ್ತಾದರೂ ಸ್ಥಾಪನೆಯಾಗಲಿರುವ ಮಳಿಗೆಗಳಲ್ಲಿ ಕರ್ನಾಟಕ ಮೂಲದ ಕಾಫಿ ಸ್ವಾದಗಳು ಸೇವನೆಗೆ ಲಭ್ಯವಿರುತ್ತವೆ. ಇಲ್ಲಿ ವಿವಿಧ ರೀತಿಯ ಕಾಫಿ ಪುಡಿಯನ್ನು ಗ್ರಾಹಕರು ಖರೀದಿಸಬಹುದು ಎಂದರು.

ಇದನ್ನೂ ಓದಿ: ಹೊಸ ವರ್ಷಕ್ಕೆ ಎಂಎಸ್ಐಎಲ್ ಗಿಫ್ಟ್ ​: ಮೊದಲ ಸರ್ಕಾರಿ ಪ್ರೀಮಿಯಂ ಮದ್ಯ ಮಾರಾಟ ಮಳಿಗೆ ಉದ್ಘಾಟನೆ

ಕೈಗಾರಿಕಾ ಇಲಾಖೆ ಆಯುಕ್ತೆ ಗುಂಜನ್ ಕೃಷ್ಣ, ಕೆಎಸ್​ಡಿಎಲ್ ವ್ಯವಸ್ಥಾಪಕ ನಿರ್ದೇಶಕ ಪ್ರಶಾಂತ್, ವಿಮಾನ ನಿಲ್ದಾಣದ ಉಪಾಧ್ಯಕ್ಷ ವೆಂಕಟರಾಮನ್, ಕೆಎಸ್ಎಂಸಿಎ ವ್ಯವಸ್ಥಾಪಕ ನಿರ್ದೇಶಕ ಸಿದ್ಧಲಿಂಗಪ್ಪ ಪೂಜಾರ್ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.