ಬೆಂಗಳೂರು: ಹಣಕ್ಕಾಗಿ ವೇಲ್‌ನಿಂದ ವೃದ್ಧೆಯೋರ್ವರ ಕತ್ತು ಬಿಗಿದು ಕೊಲೆ ಮಾಡಿರುವ ಘಟನೆ ನಗರದ ಕಾಮಾಕ್ಷಿಪಾಳ್ಯದಲ್ಲಿ ನಡೆದಿದೆ.
ಪಾರ್ವತಮ್ಮ(62) ಕೊಲೆಯಾದವರು. ಇವರು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆ ಮುತ್ತುರಾಯಸ್ವಾಮಿ ಬಡಾವಣೆಯ ನಿವಾಸಿ. ಪಾರ್ವತಮ್ಮ ಮನೆಗೆ ನುಗ್ಗಿರುವ ದುಷ್ಕರ್ಮಿಗಳು ವೇಲ್‌ನಿಂದ ಕತ್ತು ಬಿಗಿದು ಕೊಲೆ ಮಾಡಿದ್ದಾರೆ. ಬಳಿಕ ಮನೆಯಲ್ಲಿರುವ ಹಣ, ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ.
ಈ ಸಂಬಂಧ ಕಾಮಾಕ್ಷಿಪಾಳ್ಯ ಪೊಲೀಸರು ಸ್ಥಳ ಪರಿಶೀಲಿಸಿದ್ದು, ಹಣಕ್ಕಾಗಿ ಕೊಲೆ ಮಾಡಿರಬಹುದು ಎಂಬ ಶಂಕೆ ವ್ಯಕ್ತಪಡಿಸಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.