ಬೆಂಗಳೂರು : ನಗರ ಪೊಲೀಸ್ ಆಯುಕ್ತರಾಗಿ ಹಿರಿಯ ಐಪಿಎಸ್ ಅಧಿಕಾರಿ ಕಮಲ್ ಪಂತ್ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ರಾಜ್ಯ ಗುಪ್ತಚರ ವಾರ್ತೆ ವಿಭಾಗದ ಎಡಿಜಿಪಿಯಾಗಿದ್ದ ಕಮಲ್ ಪಂತ್ ಅವರು ಆಯುಕ್ತರಾಗಿ ಬಡ್ತಿ ಪಡೆದಿದ್ದಾರೆ. ಇಷ್ಟು ದಿನಗಳ ಕಾಲ ಬೆಂಗಳೂರು ನಗರ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ರಾಜ್ಯ ಆಂತರಿಕ ವಿಭಾಗಕ್ಕೆ ವರ್ಗಾವಣೆ ಮಾಡಲಾಗಿದೆ.
ಸಿಐಡಿ ಆರ್ಥಿಕ ಅಪರಾಧ ವಿಭಾಗದ ಎಡಿಜಿಪಿಯಾಗಿದ್ದ ಬಿ.ದಯಾನಂದ್, ನಗರ ಆಂತರಿಕ ವಿಭಾಗಕ್ಕೆ ವರ್ಗಾವಣೆಯಾಗಿದ್ದಾರೆ.