ETV Bharat / state

ಅಪರಾಧ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ಡಿಸಿಪಿಗಳಿಗೆ ಕಮಲ್ ಪಂಥ್ ಸೂಚನೆ - ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್

ನಗರದಲ್ಲಿನ ಅಪರಾಧ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ.

kamal-pant
ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್
author img

By

Published : Oct 13, 2020, 2:59 PM IST

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಡ್ರಗ್ಸ್​ ಮಾಫಿಯಾ ಪ್ರಕರಣಗಳು ಹೆಚ್ಚುತ್ತಿವೆ. ಈ ಹಿನ್ನೆಲೆಯಲ್ಲಿ ನಗರ ಪೊಲೀಸ್ ಆಯುಕ್ತ ಕಮಲ್ ಪಂಥ್ ಇಂದು ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಹೆಚ್ಚುವರಿ ಪೊಲೀಸ್ ಆಯುಕ್ತರು, ಸಿಸಿಬಿ ಹೆಚ್ಚುವರಿ ಆಯುಕ್ತ, ಟ್ರಾಫಿಕ್ ಇಲಾಖೆಯ ಆಯುಕ್ತರು, ನಗರದ ಎಲ್ಲಾ ವಲಯದ ಡಿಸಿಪಿ, ನಗರದ ಎಸಿಪಿ ಹಾಗೂ ಇನ್ಸ್​​​ಪೆಕ್ಟರ್‌ಗಳೊಂದಿಗೆ ಪೊಲೀಸ್‌ ಆಯುಕ್ತರು ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ಕೊಟ್ಟರು.

ಸಭೆಯಲ್ಲಿ ನಗರ ಭಾಗದಲ್ಲಿ ಈವರೆಗೆ ಗಾಂಜಾ ವಿಚಾರಕ್ಕೆ ಸಂಬಂಧಪಟ್ಟಂತೆ ಎಷ್ಟು ಆರೋಪಿಗಳನ್ನು ಬಂಧನ ಮಾಡಲಾಗಿದೆ. ಎಷ್ಟು ಗಾಂಜಾ ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಶ್ನೆ ಮಾಡಿದ್ದಾರೆ. ಕೇವಲ ಗಾಂಜಾ ಅಲ್ಲದೆ ನಗರದಲ್ಲಿ ಮಹಿಳೆಯರ ಸುರಕ್ಷತೆಗೆ ಆದ್ಯತೆ ಕೊಡಿ. ಸದ್ಯ ಕೊರೊನಾ ಇರುವ ಕಾರಣ ಎಲ್ಲರೂ ಮಾಸ್ಕ್ ಹಾಕಿ, ಅಂತರ ಕಾಯ್ದುಕೊಳ್ಳಿ ಎಂದು ಸೂಚನೆ ನೀಡಿದ್ದು, ನಗರದ ಕ್ರೈಂ ಚಟುವಟಿಕೆಗಳಿಗೆ ಬ್ರೇಕ್ ಹಾಕುವಂತೆ ಎಲ್ಲಾ ವಲಯದ ಡಿಸಿಪಿಗಳಿಗೂ ಸೂಚಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.