ETV Bharat / state

ಕಂಪ್ಲಿ ಕಾಂಗ್ರೆಸ್ ಮುಖಂಡ ರಾಜು ನಾಯ್ಕ್ ಜೆಡಿಎಸ್​ಗೆ: ಬಳ್ಳಾರಿಯಲ್ಲಿ ಪಕ್ಷ ಸಂಘಟಿಸಲು ಹೆಚ್​ಡಿಕೆ ಸಲಹೆ

ಹೈಕೋರ್ಟ್ ತೀರ್ಪಿನ ಹಿನ್ನೆಲೆ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಗೌರಿಶಂಕರ್ ಸ್ಪರ್ಧಿಸಲು ಆಗದಿದ್ದರೆ ಅವರ ಪತ್ನಿಗೆ ಜೆಡಿಎಸ್​ ಟಿಕೆಟ್: ಸಿ.ಎಂ. ಇಬ್ರಾಹಿಂ

Congress leader Raju Naik joins JDS
ಕಾಂಗ್ರೆಸ್ ಮುಖಂಡ ರಾಜು ನಾಯ್ಕ್ ಜೆಡಿಎಸ್​ಗೆ ಸೇರ್ಪಡೆ
author img

By

Published : Mar 30, 2023, 8:45 PM IST

ಬೆಂಗಳೂರು: ಕಂಪ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಮುಖಂಡ ರಾಜು ನಾಯ್ಕ್ ಅವರು ಗುರುವಾರ ತಮ್ಮ ಬೆಂಬಲಿಗರೊಂದಿಗೆ ಜೆಡಿಎಸ್​ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಪಕ್ಷದ ಕಚೇರಿ ಜೆಪಿ ಭವನದಲ್ಲಿ ಗುರುವಾರ ನಡೆದ ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ. ಇಬ್ರಾಹಿಂ ಸಮ್ಮುಖದಲ್ಲಿ ರಾಜು ನಾಯ್ಕ್ ಅವರು ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು.

ಈ ವೇಳೆ ರಾಜು ನಾಯ್ಕ್ ಮಾತನಾಡಿ, ಹೈದರಾಬಾದ್ ಕರ್ನಾಟಕ ಭಾಗದಲ್ಲಿ ನಾಯಕ ಸಮುದಾಯ ಸಂಘಟಿಸಲು ಪ್ರಯತ್ನ ನಡೆಸಿದ್ದೇನೆ. 15 ವರ್ಷಗಳ ಕಾಲ ಕಾಂಗ್ರೆಸ್​​ನಲ್ಲಿದ್ದು ದುಡಿದಿದ್ದೇನೆ. ಆದರೆ, ಆ ಪಕ್ಷಕ್ಕೆ ವಿದ್ಯಾವಂತರು, ಪ್ರಜ್ಞಾವಂತರು ಬೇಡವಾಗಿದೆ. ಮುಂಬರುವ ದಿನಗಳಲ್ಲಿ ಕಲ್ಯಾಣ ಕರ್ನಾಟಕ ಭಾಗದಲ್ಲಿ ಜೆಡಿಎಸ್ ಪಕ್ಷವನ್ನು ಸಂಘಟಿಸುವುದಾಗಿ ಹೇಳಿದರು.

ಕಂಪ್ಲಿ ಕ್ಷೇತ್ರದಲ್ಲಿ ರಾಜು ನಾಯ್ಕ್ ಅವರಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾರೆಂದು ಪ್ರತಿಯೊಬ್ಬರು ಹೇಳುತ್ತಾರೆ. ಆದರೆ ಕಾಂಗ್ರೆಸ್‌ ನಾಯಕರು ನನಗೆ ಟಿಕೆಟ್ ನೀಡಲಿಲ್ಲ. ಅದರಿಂದ ಬೇಸತ್ತು ಕುಮಾರಸ್ವಾಮಿ ಅವರ ನಾಯಕತ್ವ ಒಪ್ಪಿ ಜೆಡಿಎಸ್‌ ಸೇರ್ಪಡೆಯಾಗುತ್ತಿದ್ದೇನೆ ಎಂದರು.

ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮಾತನಾಡಿ, ಬಳ್ಳಾರಿ ಜಿಲ್ಲೆಯಲ್ಲಿ ನಾಯಕತ್ವ ಕೊರತೆಯಿಂದ ಪಕ್ಷಕ್ಕೆ ಹಿನ್ನಡೆಯಾಗಿತ್ತು. ರಾಜು ನಾಯ್ಕ್ ಅವರ ಸೇರ್ಪಡೆಯಿಂದ ಈಗ ಶಕ್ತಿ ಬಂದಿದೆ. ಸಂಡೂರಿನಲ್ಲಿ ಪಕ್ಷದ ಸಂಘಟನೆ ಚೆನ್ನಾಗಿದೆ. ನೀವೆಲ್ಲಾ ಮನಸ್ಸು ಮಾಡಿದರೆ ಈ ಬಾರಿ ಬಳ್ಳಾರಿ ಜಿಲ್ಲೆಯಿಂದ ನಾಲ್ಕೈದು ಮಂದಿ ಗೆಲುವು ಸಾಧಿಸಬಹುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಕಂಪ್ಲಿಯಲ್ಲಿರುವ ರೌಡಿಸಂ ರಾಜಕಾರಣ ಕೊನೆಗೊಳ್ಳಬೇಕು- ಸಿ ಎಂ ಇಬ್ರಾಹಿಂ.. ಜೆಡಿಎಸ್ ರಾಜ್ಯಾಧ್ಯಕ್ಷ ಸಿ ಎಂ ಇಬ್ರಾಹಿಂ ಮಾತನಾಡಿ, ಜನತಾದಳಕ್ಕೆ ಮಾಡುವ ಸೇವೆ ಸಕಲ ಮಾನವ ಸೇವೆ ಮಾಡಿದಂತೆ. ಕಂಪ್ಲಿಯಲ್ಲಿರುವ ರೌಡಿಸಂ ರಾಜಕಾರಣ ಕೊನೆಗೊಳ್ಳಬೇಕು. ಈ ನಿಟ್ಟಿನಲ್ಲಿ ಪಕ್ಷದ ಗೆಲುವಿಗೆ ತಾವೆಲ್ಲ ಶ್ರಮಿಸಬೇಕು ಎಂದು ಸಲಹೆ ನೀಡಿದರು. ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಶಾಸಕ ರಾಜಾ ವೆಂಕಟಪ್ಪ ನಾಯಕ್, ವಿಧಾನಪರಿಷತ್ ಸದಸ್ಯ ತಿಪ್ಪೇಸ್ವಾಮಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

ಶಾಸಕ ಗೌರಿಶಂಕರ್ ಪತ್ನಿಗೆ ಟಿಕೆಟ್ : ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಿ.ಎಂ.ಇಬ್ರಾಹಿಂ ಅವರು, ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ತುಮಕೂರು ಗ್ರಾಮಾಂತರ ಕ್ಷೇತ್ರದಿಂದ ಗೌರಿಶಂಕರ್ ಸ್ಪರ್ಧಿಸಲು ಆಗದಿದ್ದರೆ ಅವರ ಪತ್ನಿಗೆ ಟಿಕೆಟ್ ನೀಡಲಾಗುವುದು ಎಂದು ಹೇಳಿದರು. ಜೆಡಿಎಸ್ ಶಾಸಕ ಗೌರಿಶಂಕರ್ ಅವರು 2018 ರ ವಿಧಾನಸಭೆ ಚುನಾವಣೆಯಲ್ಲಿ ಆಯ್ಕೆಯಾಗಿರುವುದನ್ನು ಹೈಕೋರ್ಟ್ ಅಸಿಂಧುಗೊಳಿಸಿರುವ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ತೀರ್ಪಿಗೆ ಸಂಬಂಧಿಸಿದಂತೆ ಮೇಲ್ಮನವಿ ಸಲ್ಲಿಸುತ್ತೇವೆ. ನಮಗೆ ನ್ಯಾಯ ಸಿಗುತ್ತದೆ ಎಂದು ತಿಳಿಸಿದರು.

ಗೌರಿಶಂಕರ್ ಅವರೇ ತುಮಕೂರು ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ. ಬಹುಮತದಿಂದ ಚುನಾಯಿತರಾಗುತ್ತಾರೆ. ಚುನಾವಣೆ ಹತ್ತಿರವಿದ್ದಾಗ ಈ ರೀತಿ ಆಗುವುದು ಸಹಜ. ಇದಕ್ಕೆ ತಲೆಕೆಡಿಸಿಕೊಳ್ಳುವ ಅವಶ್ಯಕತೆ ಇಲ್ಲ ಎಂದರು.

ಹಾಸನ ವಿಧಾನಸಭಾ ಕ್ಷೇತ್ರದ ಸ್ವರೂಪ್ ಪ್ರಕಾಶ್ ಯಾರು ಎಂಬುದು ನನಗೆ ಗೊತ್ತಿಲ್ಲ ಎಂದು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಅವರು ಹೇಳಿದ್ದಾರೆ ಎಂಬ ವಿಚಾರದ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಾಲ್ಕು ಜನರು ಒಂದೇ, ಅವರಲ್ಲಿ ಯಾವ ರೀತಿಯ ಭಿನ್ನಾಭಿಪ್ರಾಯವಿಲ್ಲ. ಕೆಲವೇ ದಿನಗಳಲ್ಲಿ ನಿಮಗೆ ತಿಳಿಯುತ್ತದೆ. ಈ ಬಗ್ಗೆ ನಾನು ಹೆಚ್ಚು ಮಾತನಾಡುವುದಿಲ್ಲ ಎಂದು ಹೇಳಿದರು.

ಇದನ್ನೂಓದಿ:ಜೆಡಿಎಸ್​​ ಮಾಜಿ ಶಾಸಕ ಗುಬ್ಬಿ ಶ್ರೀನಿವಾಸ್​ ಕಾಂಗ್ರೆಸ್​ ಸೇರ್ಪಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.