ETV Bharat / state

ಮೈಸೂರು ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಕೋಕ್‌: ಮಾತೃಭಾಷೆಗೆ ಅಪಮಾನವೆಂದ ಹೆಚ್​ಡಿಕೆ - kannada book exhibition canceled in mysore dasara

ಮೈಸೂರು ದಸರಾದಲ್ಲಿ ಕನ್ನಡ ಪುಸ್ತಕ ಪ್ರದರ್ಶನ ಅನಾದಿ ಕಾಲದಿಂದ ಅವಿಚ್ಛಿನ್ನವಾಗಿ ನಡೆದುಕೊಂಡು ಬರುತ್ತಿರುವ ಕನ್ನಡ ತಾಯಿಯ ಸೇವಾ ಕೈಂಕರ್ಯ. ಆದರೆ, ಬಿಜೆಪಿ ಸರ್ಕಾರ ಕನ್ನಡ ಪುಸ್ತಕ ಪ್ರದರ್ಶನಕ್ಕೆ ಕೋಕ್ ಕೊಟ್ಟು, ತನ್ನ ಕನ್ನಡ ವಿರೋಧಿ ನೀತಿಯನ್ನು ಮತ್ತೊಮ್ಮೆ ಸಾರಿದೆ. ಪುಸ್ತಕ ಸಂಸ್ಕೃತಿಗೆ ಧಕ್ಕೆ ತಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆರೋಪಿಸಿದ್ದಾರೆ.

hdk
ಹೆಚ್​ಡಿಕೆ
author img

By

Published : Sep 29, 2022, 7:46 AM IST

ಬೆಂಗಳೂರು: ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಉತ್ಸವದಲ್ಲಿ ಈ ವರ್ಷ ಕನ್ನಡ ಪುಸ್ತಕ ಪ್ರದರ್ಶನವನ್ನು ಕೈಬಿಟ್ಟಿರುವ ರಾಜ್ಯ ಬಿಜೆಪಿ ಸರ್ಕಾರದ ವರ್ತನೆಯನ್ನು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಕಟು ಶಬ್ದಗಳಲ್ಲಿ ಖಂಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಹೆಚ್​ಡಿಕೆ, ಸರ್ಕಾರದ ನಡೆಯನ್ನು ಟೀಕಿಸಿದ್ದಾರಲ್ಲದೇ, ಮಾಧ್ಯಮ ಹೇಳಿಕೆಯನ್ನೂ ಬಿಡುಗಡೆ ಮಾಡಿದ್ದಾರೆ. ಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಾಹಿತ್ಯ, ಸಿರಿ ಸಂಪತ್ತಿನ ಹೆಗ್ಗುರುತು ನಾಡಹಬ್ಬ ಮೈಸೂರು ದಸರಾ ಬಗ್ಗೆ ರಾಜ್ಯ ಬಿಜೆಪಿ ಸರ್ಕಾರದ ನೀತಿ ಅತ್ಯಂತ ಖಂಡನೀಯ. ಕನ್ನಡ ಭಾಷೆ, ಸಂಸೃತಿಯ ಕುರಿತು ಆಡಳಿತ ನಡೆಸುವವರ ದಿವ್ಯ ನಿರ್ಲಕ್ಷ್ಯ ಮಾತೃಭಾಷೆಗೆ ಮಾಡಿರುವ ಅಪಮಾನ ಮತ್ತು ದ್ರೋಹ ಎಂದು ಅವರು ಕಿಡಿಕಾರಿದ್ದಾರೆ.

ಇದನ್ನೂ ಓದಿ: ರಾಷ್ಟ್ರಪತಿಗಳಿಗೆ ಚಾಮುಂಡೇಶ್ವರಿ ದೇವಿ ಮೂರ್ತಿ ಉಡುಗೊರೆ; ದಸರಾ ಮೆರಗು ಹೆಚ್ಚಿಸಿದ ಸಚಿವ

ಮೈಸೂರು ಸಾಂಸ್ಕೃತಿಕ ನಗರಿ. ದಸರಾ, ಜಗದ್ವಿಖ್ಯಾತ ಸಾಂಸ್ಕೃತಿಕ ಉತ್ಸವ. ಹೀಗಿದ್ದೂ ರಾಜ್ಯ ಬಿಜೆಪಿ ಸರ್ಕಾರವು ಕನ್ನಡವನ್ನು ಧಿಕ್ಕರಿಸಿ ತನ್ನ ರಹಸ್ಯ ಕಾರ್ಯಸೂಚಿಯನ್ನು ಹೇರಲು ಹೊರಟಿದೆ. ಹಿಂದಿ ಭಾಷೆಯ ವಕ್ತಾರಿಕೆ ಮಾಡುವ ಬಿಜೆಪಿ ಪಕ್ಷದಿಂದ ಇನ್ನೇನು ನಿರೀಕ್ಷೆ ಮಾಡಲು ಸಾಧ್ಯ? ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

  • ಕನ್ನಡ ನಾಡಿನ ಶ್ರೀಮಂತ ಪರಂಪರೆ, ಸಾಹಿತ್ಯ ಸಿರಿ ಸಂಪತ್ತಿನ ಹೆಗ್ಗುರುತು ನಾಡಹಬ್ಬ ಮೈಸೂರು ದಸರಾ ಬಗ್ಗೆ ರಾಜ್ಯ @BJP4Karnataka ಸರಕಾರದ ನೀತಿ ಅತ್ಯಂತ ಖಂಡನೀಯ. ಕನ್ನಡ ಭಾಷೆ, ಸಂಸೃತಿಯ ಕುರಿತು ಆಡಳಿತ ನಡೆಸುವವರ ದಿವ್ಯನಿರ್ಲಕ್ಷ್ಯ ಮಾತೃಭಾಷೆಗೆ ಮಾಡಿರುವ ಅಪಮಾನ ಮತ್ತು ದ್ರೋಹ. 1/5

    — ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) September 28, 2022 " class="align-text-top noRightClick twitterSection" data=" ">

ಕನ್ನಡ ಮುಗಿಸುವುದನ್ನೇ ರಾಜ್ಯ ಬಿಜೆಪಿ ಸರ್ಕಾರ ನಿತ್ಯ ಕಾಯಕ ಮಾಡಿಕೊಂಡಿದೆ. ಸಮಯ ಸಿಕ್ಕಾಗಲೆಲ್ಲಾ ಕನ್ನಡಕ್ಕೆ ಕೊಡಲಿಪೆಟ್ಟು ಕೊಡುವ ಕೆಲಸ ಮಾಡುತ್ತಲೇ ಇದೆ. ಕನ್ನಡಿಗರ ಶಾಂತಿ, ಸಹನೆಯನ್ನು ಬಿಜೆಪಿ ಪರೀಕ್ಷೆ ಮಾಡುತ್ತಿದೆ. ಉದ್ದೇಶಪೂರ್ವಕವಾಗಿ ಕನ್ನಡ ಪುಸ್ತಕ ಪ್ರದರ್ಶನವನ್ನು ಕೈಬಿಟ್ಟಂತೆ ಕಾಣುತ್ತಿದೆ. ರಾಜ್ಯ ಬಿಜೆಪಿ ಸರ್ಕಾರ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನೀಲ್ ಕುಮಾರ್ ಅವರೇ ಈ ಬಗ್ಗೆ ಕನ್ನಡಿಗರಿಗೆ ಉತ್ತರ ಕೊಡಬೇಕು. ತಕ್ಷಣ ಕನ್ನಡ ಪುಸ್ತಕ ಪ್ರದರ್ಶನವನ್ನು ಆಯೋಜನೆ ಮಾಡಬೇಕು ಎಂದು ಒತ್ತಾಯ ಮಾಡಿದ್ದಾರೆ.

ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಣೆ : ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ಸಮ್ಮತವಲ್ಲ. ಬ್ಯಾರಿಯು ಕನ್ನಡದ ನೆರಳಿನಲ್ಲಿ ಅರಳಿರುವ ಭಾಷೆ ಹಾಗೂ ಕರಾವಳಿಯಲ್ಲಿ ಅನೇಕರ ನಿತ್ಯ ನುಡಿ. ಕೇವಲ ಒಂದು ಸಮುದಾಯದವರು ಮಾತನಾಡುತ್ತಾರೆ ಎನ್ನುವ ಕಾರಣಕ್ಕೆ ಬ್ಯಾರಿಯನ್ನು ಬೇಡವೆನ್ನುವುದು ತಪ್ಪು. ಸರ್ಕಾರದ್ದು ಏಕಪಕ್ಷೀಯ ನಡೆ ಎಂದು ಕಿಡಿಕಾರಿದ್ದಾರೆ.

ಈ ವರ್ಷದ ದಸರಾ ಕವಿಗೋಷ್ಠಿಯಲ್ಲಿ ಕನ್ನಡದೊಂದಿಗೆ ತುಳು, ಕೊಂಕಣಿ, ಕೊಡವ, ಅರೆಭಾಷೆ ಮತ್ತು ಎರವ ಭಾಷೆಗಳಿಗೆ ಅವಕಾಶ ನೀಡಿರುವುದು ಸ್ವಾಗತಾರ್ಹ. ಆದರೆ, ಬ್ಯಾರಿ ಭಾಷೆಗೆ ಅವಕಾಶ ನಿರಾಕರಿಸಿರುವುದು ರಾಜ್ಯ ಸರ್ಕಾರದ ಸಂಕುಚಿತ ಮನೋಭಾವಕ್ಕೆ ಸಾಕ್ಷಿ. ಏಕ ಭಾಷೆಯನ್ನು ಮೆರೆಸುವ ರಾಜ್ಯ ಹಾಗೂ ಕೇಂದ್ರದ ಬಿಜೆಪಿ ಪಕ್ಷಕ್ಕೆ ಈ ನೆಲದ ತಾಯಿ ಭಾಷೆ ಕನ್ನಡವೂ ಸೇರಿ ಇತರೆ ಎಲ್ಲಾ ಉಪ ಭಾಷೆಗಳನ್ನು ಅಳಿಸಿಹಾಕಬೇಕೆಂಬ ಕೆಟ್ಟ ಮನಃಸ್ಥಿತಿ ಇರುವಂತಿದೆ. ಇದು ಖಂಡಿತಾ ನಡೆಯುವುದಿಲ್ಲ. ರಾಜ್ಯದಲ್ಲಿ 12 ಲಕ್ಷಕ್ಕೂ ಹೆಚ್ಚು ಜನರು ಬ್ಯಾರಿ ಭಾಷೆ ಮಾತಾಡುತ್ತಾರೆ. 2007ರಲ್ಲಿ ನಾನು ಮುಖ್ಯಮಂತ್ರಿ ಆಗಿದ್ದಾಗ ಬ್ಯಾರಿ ಭಾಷಿಗರ ಬಹುಕಾಲದ ಬೇಡಿಕೆ ಆಗಿದ್ದ ಬ್ಯಾರಿ ಸಾಹಿತ್ಯ ಅಕಾಡೆಮಿ ಸ್ಥಾಪನೆಗೆ ಅನುಮೋದನೆ ನೀಡಿದ್ದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ಜುಗಲ್ ಬಂದಿ ಇದ್ದರೆ ದೇಶಕ್ಕೆ ಶ್ರೇಯಸ್ಸು: ಹೆಚ್​ಡಿಕೆ

ಬ್ಯಾರಿ ಅಕಾಡೆಮಿಯ ಮೂಲಕ ಅತ್ಯುತ್ತಮ ಸಾಹಿತ್ಯಿಕ ಕಾರ್ಯಕ್ರಮಗಳು ನಡೆಯುತ್ತಿವೆ. ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಬ್ಯಾರಿ ಅಧ್ಯಯನ ಪೀಠವನ್ನೂ ಸ್ಥಾಪಿಸಲಾಗಿದೆ. ವಿಶೇಷವೆಂದರೆ, ಬ್ಯಾರಿ ಭಾಷಿಗರು ಕನ್ನಡ ಲಿಪಿಯನ್ನೇ ಬಳಸಿ ಅತ್ಯುತ್ತಮ ಕೃತಿಗಳನ್ನು ರಚಿಸಿದ್ದು, ಅವುಗಳಲ್ಲಿ ಕೆಲ ಕೃತಿಗಳು ಕನ್ನಡಕ್ಕೂ ಅನುವಾದಿಸಲ್ಪಟ್ಟಿವೆ. ವಚನ ಸಾಹಿತ್ಯ ಸೇರಿ ಅನೇಕ ಕನ್ನಡದ ಅಮೂಲ್ಯ ಕೃತಿಗಳು ಬ್ಯಾರಿಗೂ ಅನುವಾದಗೊಂಡಿವೆ. ಕನ್ನಡ ನೆಲದಲ್ಲಿ ಕನ್ನಡ ಲಿಪಿಯೊಂದಿಗೆ ಸಾಮರಸ್ಯದ ಭಾಷೆಯಾಗಿ ಬೆರೆತಿರುವ ಬ್ಯಾರಿಗೆ ಈ ವರ್ಷ ದಸರಾ ಕವಿಗೋಷ್ಠಿಯಲ್ಲಿ ಅವಕಾಶ ನಿರಾಕರಿಸಿರುವುದು ಅಕ್ಷಮ್ಯ ಎಂದಿದ್ದಾರೆ.

ರಾಜ್ಯ ಸರ್ಕಾರ ಮತ್ತು ದಸರಾ ಸಮಿತಿ ಕೂಡಲೇ ಈ ಬಗ್ಗೆ ಪರಿಶೀಲಿಸಿ, ಆಗಿರುವ ಪ್ರಮಾದವನ್ನು ಸರಿಪಡಿಸಿ ದಸರಾ ಕವಿಗೋಷ್ಠಿಯಲ್ಲಿ ಬ್ಯಾರಿ ಭಾಷೆಗೆ ಅವಕಾಶ ಕಲ್ಪಿಸಿಕೊಡಬೇಕು ಎಂದು ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.