ETV Bharat / state

ಬಿಬಿಎಂಪಿ ಸಭೆ-ಸಮಾರಂಭಗಳಲ್ಲಿ ಕಾಣಿಕೆ ಬದಲು ಕನ್ನಡ ಪುಸ್ತಕಗಳ ಬಳಕೆ : ಮುಖ್ಯ ಆಯುಕ್ತರಿಂದ ಸುತ್ತೋಲೆ - Kannada books instead of gift at BBMP meeting-ceremonies

ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿ,ನಿಯಮವನ್ನು ಪಾಲಿಸಲು ತಪ್ಪಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದಾಗಿ ಮುಖ್ಯ ಆಯುಕ್ತರು ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ..

bbmp
ಬಿಬಿಎಂಪಿ
author img

By

Published : Aug 11, 2021, 8:17 PM IST

ಬೆಂಗಳೂರು : ರಾಜ್ಯ ಸರ್ಕಾರ ಹೊರಡಿಸಿರುವ ಸುತ್ತೋಲೆಯನ್ವಯ ಸರ್ಕಾರ ಮತ್ತು ಸರ್ಕಾರದ ಸ್ವಾಮ್ಯಕ್ಕೊಳಪಡುವ ಸಂಸ್ಥೆಗಳು ನಡೆಸುವ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು ಹಾಗೂ ಯಾವುದೇ ರೀತಿಯ ಕಾಣಿಕೆ ನೀಡಬಾರದೆಂದು ಹಾಗೂ ಅದರ ಬದಲಾಗಿ ಕನ್ನಡ ಪುಸ್ತಕಗಳನ್ನು ನೀಡಬಹುದೆಂದು ನಿರ್ದೇಶಿಸಲಾಗಿತ್ತು.

kannada-books-instead-of-flowers-fruits-in-bbmp-functions
ಬಿಬಿಎಂಪಿ ಪಾಲಿಕೆ ಮುಖ್ಯ ಆಯುಕ್ತರಿಂದ ಸುತ್ತೋಲೆ

ಈ ವಿಷಯಕ್ಕೆ ಸಂಬಂಧಿಸಿದಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಮುಂದಿನ ದಿನಗಳಲ್ಲಿ ನಡೆಯುವ ಎಲ್ಲಾ ಸಭೆ-ಸಮಾರಂಭಗಳಲ್ಲಿ ಹೂಗುಚ್ಛ, ಹಾರ-ತುರಾಯಿ, ಹಣ್ಣಿನ ಬುಟ್ಟಿ, ಶಾಲು, ನೆನಪಿನ ಕಾಣಿಕೆ ಸೇರಿ ಯಾವುದೇ ರೀತಿಯ ಕಾಣಿಕೆಗಳು ನೀಡುವ ಶಿಷ್ಟಾಚಾರ ಸಂಪ್ರದಾಯವನ್ನು ಈ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸುತ್ತದೆ ಮತ್ತು ಕಾಣಿಕೆಗಳ ಬದಲಾಗಿ ಆಡಳಿತ ಭಾಷೆಯಾದ ಕನ್ನಡ ಪುಸ್ತಕಗಳನ್ನು ನೀಡಬಹುದಾಗಿದೆ ಎಂದು ತಿಳಿಸಿದ್ದಾರೆ.

ಈ ನಿರ್ದೇಶನವನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಸೂಚಿಸಿ,ನಿಯಮವನ್ನು ಪಾಲಿಸಲು ತಪ್ಪಿದ್ದಲ್ಲಿ ಸಂಬಂಧಪಟ್ಟವರ ವಿರುದ್ಧ ನಿಯಮಾನುಸಾರ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದಾಗಿ ಮುಖ್ಯ ಆಯುಕ್ತರು ಬುಧವಾರ ಸುತ್ತೋಲೆ ಹೊರಡಿಸಿದ್ದಾರೆ.

ಓದಿ: ರಾಜ್ಯದಲ್ಲಿಂದು ಮತ್ತೆ 1,826 ಮಂದಿಗೆ ಕೋವಿಡ್ ದೃಢ: 33 ಮಂದಿ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.