ETV Bharat / state

ಆಡಳಿತದಲ್ಲಿ ಕನ್ನಡ ಕಡ್ಡಾಯಗೊಳಿಸಿ : ಅರಣ್ಯ ಇಲಾಖೆಗೆ ತಾಕೀತು ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರ - Kannada Development Authority insists to forest department

ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಹಿ ಮತ್ತು ಮೊಹರು ಇರುವ ನಡಾವಳಿಗಳು ಆಂಗ್ಲಭಾಷೆಯಲ್ಲಿವೆ. ಕರ್ನಾಟಕದಲ್ಲಿ ನೆಲೆಸಿರುವ ರೈತರಿಗೆ, ಗ್ರಾಮೀಣ ಭಾಗದ ಜನತೆಗೆ ತಲುಪಿಸುವ ಸಭೆಯ ನಡವಳಿಗಳನ್ನು ಹೀಗೆ ಜನರಿಗೆ ಅರ್ಥವಾಗದ ಭಾಷೆಯಲ್ಲಿ ಬರೆದು ತಲುಪಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು..

Kannada Development Authority insists to mandatory Kannada in forest department
ಅರಣ್ಯ ಇಲಾಖೆಯಲ್ಲಿ ಕನ್ನಡ ಕಡ್ಡಾಯಗೊಳಿಸಲು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಒತ್ತಾಯ
author img

By

Published : Feb 4, 2022, 9:14 PM IST

ಬೆಂಗಳೂರು : ಅರಣ್ಯ ಇಲಾಖೆಯ ಸಾಮಾಜಿಕ ಜಾಲತಾಣ, ಕಡತಗಳಲ್ಲಿ ಹೆಚ್ಚಾಗಿ ಆಂಗ್ಲ ಭಾಷೆಯನ್ನೇ ಬಳಸಿರುವ ಬಗ್ಗೆ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಟಿ.ಎಸ್.ನಾಗಾಭರಣ ಅಸಮಾಧಾನ ವ್ಯಕ್ತಪಡಿಸಿದರು.

ಮಲ್ಲೇಶ್ವರದಲ್ಲಿರುವ ಅರಣ್ಯ ಭವನ ಕನ್ನಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಭೇಟಿ ನೀಡಿ ಕನ್ನಡ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಮಾತನಾಡಿದ ಅವರು, ಕನ್ನಡ ಭಾಷೆ ಕರ್ನಾಟದ ಆಡಳಿತ ಭಾಷೆಯಾಗಿ ಹಲವು ದಶಕಗಳು ಕಳೆದಿದ್ದರೂ ಇನ್ನೂ ಆಂಗ್ಲ ಭಾಷೆಯಲ್ಲಿಯೇ ಅರಣ್ಯ ಇಲಾಖೆಯ ಅಧಿಕಾರಿಗಳು ವ್ಯವಹಾರ ನಡೆಸಿರುತ್ತಿರುವುದು ಆಡಳಿತದಲ್ಲಿ ಕನ್ನಡ ಅನುಷ್ಠಾನದ ಲೋಪವೆಸಗಿದಂತೆ. ಈ ಬಗ್ಗೆ ಪ್ರಾಧಿಕಾರ ಗಂಭೀರ ಕ್ರಮಕೈಗೊಳ್ಳಲಿದೆ ಎಂದು ಎಚ್ಚರಿಸಿದರು.

ರೈತರಿಗೆ, ಹಳ್ಳಿ ಜನರಿಗೆ ಅರ್ಥವಾಗದ ಭಾಷೆ ಇಂಗ್ಲಿಷ್‌ : ಅರಣ್ಯ ಇಲಾಖೆಯ ಉನ್ನತ ಅಧಿಕಾರಿಗಳ ಸಹಿ ಮತ್ತು ಮೊಹರು ಇರುವ ನಡಾವಳಿಗಳು ಆಂಗ್ಲಭಾಷೆಯಲ್ಲಿವೆ. ಕರ್ನಾಟಕದಲ್ಲಿ ನೆಲೆಸಿರುವ ರೈತರಿಗೆ, ಗ್ರಾಮೀಣ ಭಾಗದ ಜನತೆಗೆ ತಲುಪಿಸುವ ಸಭೆಯ ನಡವಳಿಗಳನ್ನು ಹೀಗೆ ಜನರಿಗೆ ಅರ್ಥವಾಗದ ಭಾಷೆಯಲ್ಲಿ ಬರೆದು ತಲುಪಿಸುವುದು ಎಷ್ಟರ ಮಟ್ಟಿಗೆ ಸರಿ ಎಂದು ಪ್ರಶ್ನಿಸಿದರು.

ಇದನ್ನೂ ಓದಿ: ಜಿಗಣೆ ಕಚ್ಚಿದೆ ಎಂದು ಕಣ್ಣನ್ನೇ ಕಿತ್ತು ಹಾಕಿದ ವೃದ್ದ: ಮುಂದೇನಾಯ್ತು..

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.