ETV Bharat / state

ಸಿಬಿಎಸ್​​​​​​ಸಿ, ಸಿಐಎಸ್‌ಸಿಇ ಪಠ್ಯಕ್ರಮಕ್ಕೆ ಕನ್ನಡ ಕಡ್ಡಾಯ ಕಾನೂನು: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ಪೋಷಕರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿತು.

Highcourt
ಹೈಕೋರ್ಟ್​
author img

By

Published : Aug 3, 2023, 1:35 PM IST

ಬೆಂಗಳೂರು: ರಾಜ್ಯದಲ್ಲಿ ಸೆಂಟ್ರಲ್ ಬೋರ್ಡ್ ಆಫ್ ಎಜುಕೇಷನ್ (ಸಿಬಿಎಸ್ಸಿ) ಮತ್ತು ಕೌನ್ಸಿಲ್ ಪಾರ್ ದಿ ಇಂಡಿಯನ್ ಸ್ಕೂಲ್ ಆಫ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ (ಸಿಐಎಸ್‌ಸಿಇ) ಅಧ್ಯಯನ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಕನ್ನಡ ಭಾಷೆಯನ್ನು ಕಡ್ಡಾಯಗೊಳಿಸಿ ಕಾನೂನು ರೂಪಿಸಿರುವ ರಾಜ್ಯ ಸರ್ಕಾರದ ಕ್ರಮ ಪ್ರಶ್ನಿಸಿ ಹಲವು ಮಕ್ಕಳ ಪೋಷಕರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಂಬಂಧ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ ಮಾಡಿದೆ.

ಸಿ. ಸೋಮಸೇಖರ್ ಎಂಬುವರು ಸೇರಿದಂರೆ 19 ಮಂದಿ ಪೋಷಕರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಾಲಚಂದ್ರ ವರಾಳೆ ಮತ್ತು ನ್ಯಾಯಮೂರ್ತಿ ಎಂ.ಜೆ.ಎಸ್.ಕಮಲ್ ಅವರಿದ್ದ ವಿಭಾಗೀಯ ನ್ಯಾಯಪೀಠ ನೋಟಿಸ್ ಜಾರಿ ಮಾಡಿ ವಿಚಾರಣೆಯನ್ನು ಮುಂದೂಡಿದೆ.

ಕನ್ನಡ ಭಾಷಾ ಕಲಿಕೆ (ಕೆಎಲ್‌ಎಲ್) ಕಾಯಿದೆ ಮತ್ತು ನಿಯಮಗಳು ಕನ್ನಡ ಭಾಷೆಯನ್ನು ಪ್ರಥಮ ಅಥವಾ ದ್ವೀತೀಯ ಭಾಷೆಯಾಗಿ ಕಡ್ಡಾಯಗೊಳಿಸುತ್ತವೆ. ಆದರೆ, ಕರ್ನಾಟಕ ಶಿಕ್ಷಣ ಸಂಸ್ಥೆಗಳು (ನಿರಾಕ್ಷೇಪಣಾ ಪ್ರಮಾಣ ಪತ್ರ ಮತ್ತು ನಿಯಂತ್ರಣ) ನಿಯಮ 2022ರ ಪ್ರಕಾರ ಎರಡನೇ ಅಥವಾ ಮೂರನೇ ಭಾಷೆಯಾಗಿ ಕಡ್ಡಾಯ ಎಂಬುದಾಗಿ ತಿಳಿಸುತ್ತವೆ. ಈ ಅಂಶಗಳು ಕರ್ನಾಟಕ ಶಿಕ್ಷಣ ಕಾಯಿದೆ 1983ಕ್ಕೆ ತದ್ವಿರುದ್ಧವಾಗಿವೆ. ಅಲ್ಲದೆ, ಈ ಕಾಯಿದೆಗಳು ಸಿಬಿಎಸ್ಸಿ ಮತ್ತು ಸಿಐಎಸ್‌ಸಿಇಯ ವ್ಯಾಪ್ತಿಯಿಂದ ಹೊರಗಡೆ ಇವೆ.

ಅಷ್ಟೇ ಅಲ್ಲದೆ, ಕರ್ನಾಟಕ ಶಿಕ್ಷಣ ಕಾಯಿದೆ 1998ರ ತಿದ್ದುಪಡಿ ಮಾಡುವ ಮೂಲಕ ಸಿಬಿಎಸ್‌ಇ ಮತ್ತು ಸಿಐಎಸ್‌ಸಿಇ ಶಾಲೆಗಳು ಮತ್ತು ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶುಲ್ಕ ನಿಗಧಿ ಮಾಡುವುದಕ್ಕೆ ಅವಕಾಶ ಕಲ್ಪಿಸಿದ್ದ ನಿಯಮಗಳನ್ನು ಅಸಾಂವಿಧಾನಿಕ ಎಂದು ಹೈಕೋರ್ಟ್‌ನ ದ್ವಿಸದಸ್ಯ ಪೀಠ ಇತ್ತೀಚೆಗೆ ಆದೇಶಿಸಿದೆ.

ಆದರೂ ರಾಜ್ಯ ಸರ್ಕಾರ ಕೆಎಲ್‌ಎಲ್ ಕಾಯಿದೆ 2015ರ ನಿಯಮ 2017 ಮತ್ತು ಕರ್ನಾಟಕ ಶಿಕ್ಷಣ ಸಂಸ್ಥೆಗಳು(ನಿರಾಕ್ಷೇಪಣಾ ಪ್ರಮಾಣ ಪತ್ರ ಮತ್ತು ನಿಯಂತ್ರಣ) ನಿಯಮ 2022ರ ಪ್ರಕಾರ ಸಿಬಿಎಸ್ಸಿ ಮತ್ತು ಸಿಐಎಸ್‌ಸಿಇ ಶಾಲೆಗಳು ಸೇರಿದಂತೆ ಎಲ್ಲ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೂ ಕನ್ನಡ ಕಡ್ಡಾಯ ಮಾಡಿವೆ. ಆದ್ದರಿಂದ ಎರಡೂ ಕಾಯಿದೆಗಳನ್ನು ರದ್ದು ಪಡಿಸಬೇಕು ಎಂದು ಅರ್ಜಿಯಲ್ಲಿ ಕೋರಿದ್ದಾರೆ.

ಜತೆಗೆ, ರಾಷ್ಟ್ರೀಯ ಶಿಕ್ಷಣ ನೀತಿಯ ಅಡಿಯಲ್ಲಿ ಪದವಿ ವಿದ್ಯಾರ್ಥಿಗಳಿಗೂ ಕನ್ನಡ ಕಡ್ಡಾಯಗೊಳಿಸಿ ಆದೇಶಿಸಿದ್ದ ರಾಜ್ಯ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ತಡೆ ನೀಡಿತ್ತು. ಈ ನಡುವೆ ರಾಷ್ಟ್ರೀಯ ಶಿಕ್ಷಣ ನೀತಿಯ ಪ್ರಕಾರ ಯಾವುದೇ ಭಾಷೆ ಕಡ್ಡಾಯಗೊಳಿಸಲು ಅವಕಾಶವಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ನ್ಯಾಯಾಲಯಕ್ಕೆ ಸ್ಪಷ್ಟ ಪಡಿಸಿತ್ತು.

ಅಲ್ಲದೇ, ಕನ್ನಡ ಮಾತೃಭಾಷೆಯಲ್ಲದ ವಿದ್ಯಾರ್ಥಿಗಳು ಮತ್ತು ಪ್ರಾಥಮಿಕ ಶಿಕ್ಷಣದಲ್ಲಿ ಮಧ್ಯಭಾಗದಲ್ಲಿ ಕರ್ನಾಟಕದ ಶಾಲೆಗಳಿಗೆ ಸೇರುವ ವಿದ್ಯಾರ್ಥಿಗಳಿಗೆ ಕಡ್ಡಾಯ ಮಾಡಿರುವುದರಿಂದ ಕನ್ನಡ ಭಾಷೆ ಅಧ್ಯಯನ ಮಾಡಲು ಕಷ್ಟವಾಗುತ್ತದೆ. ಅಲ್ಲದೆ, ಕನ್ನಡ ಭಾಷೆಯನ್ನು ಕಡ್ಡಾಯ ಮಾಡದಿದ್ದಲ್ಲಿ ಪ್ರಸ್ತುತ ನೀಡಿರುವ ಎನ್‌ಒಸಿಯನ್ನು ಹಿಂಪಡೆಯುವುದಾಗಿ ರಾಜ್ಯದ ಅಧಿಕಾರಿಗಳು ಸಿಬಿಎಸ್ಸಿ ಮತ್ತು ಸಿಐಎಸ್‌ಸಿಇ ಶಾಲೆಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂದು ಅರ್ಜಿಯಲ್ಲಿ ವಿವರಿಸಲಾಗಿದೆ.

ಇದನ್ನೂ ಓದಿ: ಕರ್ನಾಟಕ ಶಿಕ್ಷಣ ಕಾಯಿದೆಯ ಕೆಲವು ಸೆಕ್ಷನ್‌ ಅಸಾಂವಿಧಾನಿಕ ಎಂದು ಪ್ರಕಟಿಸಿದ ಹೈಕೋರ್ಟ್: ಸರ್ಕಾರಕ್ಕೆ ತೀವ್ರ ಹಿನ್ನಡೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.