ETV Bharat / state

ವಾಣಿಜ್ಯ ಮಳಿಗೆ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ: ಬಿಬಿಎಂಪಿ ಆಯುಕ್ತ

author img

By ETV Bharat Karnataka Team

Published : Dec 26, 2023, 5:56 PM IST

ಬಿಬಿಎಂಪಿ ವ್ಯಾಪ್ತಿಯ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಅನುಷ್ಠಾನಗೊಳಿಸುವ ಕುರಿತು ಬೆಂಗಳೂರಿನಲ್ಲಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಇಂದು ಸಭೆ ನಡೆಯಿತು.

meeting was held in the BBMP hall
ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ನೇತೃತ್ವದಲ್ಲಿ ಸಭೆ ನಡೆಯಿತು

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಬರುವ ಎಲ್ಲ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಲು ಕೂಡಲೇ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ವಲಯ ಆಯುಕ್ತರುಗಳಿಗೆ ಸೂಚನೆ ನೀಡಿದ್ದಾರೆ.

ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿ ಮುಂಗಟ್ಟು, ಹೋಟೆಲ್, ಮಾಲ್​ಗಳು ಸೇರಿದಂತೆ ಇನ್ನಿತರ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಕಡ್ಡಾಯವಾಗಿ ಈ ನಿಯಮವನ್ನು ಅನುಷ್ಠಾನಗೊಳಿಸಬೇಕೆಂದು ಅವರು ಹೇಳಿದರು.

ಪರವಾನಗಿ ರದ್ದುಪಡಿಸುವ ಎಚ್ಚರಿಕೆ: ನಗರದಲ್ಲಿರುವ ಆರ್ಟಿರಿಯಲ್ ಹಾಗೂ ಸಬ್ ಆರ್ಟಿರಿಯಲ್ ರಸ್ತೆಗಳಲ್ಲಿ ಬರುವ ವಾಣಿಜ್ಯ ಮಳಿಗೆಗಳ ಸರ್ವೇ ಕಾರ್ಯ ಪ್ರಾರಂಭಿಸಿ ಕನ್ನಡ ಭಾಷೆಯ ನಾಮಫಲಕಗಳನ್ನು ಬಳಸದಿರುವ ಮಳಿಗೆಗಳಿಗೆ ನೋಟಿಸ್ ಜಾರಿಗೊಳಿಸಬೇಕು. ನಂತರ ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅನುಷ್ಠಾನಗೊಳಿಸಲು ಗಡುವು ನೀಡಬೇಕು. ಆದರೂ ನಾಮಫಲಕ ಬದಲಾಯಿಸದಿದ್ದಲ್ಲಿ ಮೊದಲು ಪರವಾನಗಿಯನ್ನು ಅಮಾನತುಗೊಳಿಸಬೇಕು. ತದನಂತರ ಪರವಾನಗಿಯನ್ನು ರದ್ದುಗೊಳಿಸಬೇಕೆಂದು ಅವರು ತಿಳಿಸಿದರು.

ನಗರದ ಎಲ್ಲ ವಲಯಗಳಲ್ಲಿ 15 ದಿನಗಳಲ್ಲಿ ಸರ್ವೇ ಕಾರ್ಯ ಪೂರ್ಣಗೊಳಿಸಿ ಕನ್ನಡ ಭಾಷೆಯ ನಾಮಫಲಕ ಅಳವಡಿಸುವಂತೆ ನೋಟಿಸ್ ನೀಡಬೇಕು. ಆಯಾ ವಲಯಗಳ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಸಂಕೀರ್ಣಗಳ ಜೊತೆ ಸಭೆ ಮಾಡಿ, ಎಲ್ಲ ಮಳಿಗೆಗಳಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯುಳ್ಳ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದರೆ ಶಿಸ್ತು ಕ್ರಮ ಜರುಗಿಸಲಾಗುವುದೆಂದು ಎಂದು ಮಾಲ್​ಗಳಿಗೆ ಎಚ್ಚರಿಕೆ ನೀಡಿದರು.

ವಾಣಿಜ್ಯ ಮಳಿಗೆಗಳಲ್ಲಿ ಫೆಬ್ರವರಿ 28ರೊಳಗಾಗಿ ಶೇ 60ರಷ್ಟು ಕನ್ನಡ ಭಾಷೆಯ ನಾಮಫಲಕಗಳನ್ನು ಅಳವಡಿಸಿರಬೇಕು. ಈ ಸಂಬಂಧ ಬಿಬಿಎಂಪಿ ವ್ಯಾಪ್ತಿ ಎಲ್ಲ ವಲಯಗಳಲ್ಲೂ ನಿಯಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ಅವರು ಸೂಚಿಸಿದರು.

ಈ ಸಭೆಯಲ್ಲಿ ವಿಶೇಷ ಆಯುಕ್ತರಗಳಾದ ಮುನೀಶ್ ಮೌದ್ಗಿಲ್, ಡಾ.ಹರೀಶ್ ಕುಮಾರ್, ರೆಡ್ಡಿ ಶಂಕರ ಬಾಬು, ಎಲ್ಲಾ ವಲಯ ಆಯುಕ್ತರು, ಎಲ್ಲಾ ವಲಯ ಜಂಟಿ ಆಯುಕ್ತರು, ಆಡಳಿತ ವಿಭಾಗದ ಉಪ ಆಯುಕ್ತರು, ಮುಖ್ಯ ಆರೋಗ್ಯಾಧಿಕಾರಿ, ಜಾಹೀರಾತು ವಿಭಾಗದ ಸಹಾಯಕ ಆಯುಕ್ತರು, ವಲಯ ಆರೋಗ್ಯಾಧಿಕಾರಿಗಳು ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ: ಯಡಿಯೂರಪ್ಪ ಸಿಎಂ ಆಗಿದ್ದ ಸಂದರ್ಭದಲ್ಲಿ ಕೊರೊನಾ ಹೆಸರಲ್ಲಿ ₹40 ಸಾವಿರ ಕೋಟಿ ಅವ್ಯವಹಾರ: ಯತ್ನಾಳ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.