ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿರುವ ಉದ್ದಿಮೆಗಳ ನಾಮಫಲಕಗಳಲ್ಲಿ ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸುವ ಕುರಿತು ಬಿಬಿಎಂಪಿ ಆಯುಕ್ತರಾದ ಬಿ.ಹೆಚ್ ಅನಿಲ್ ಕುಮಾರ್ ಆದೇಶ ಹೊರಡಿಸಿದ್ದಾರೆ.
ಮೇಯರ್ ಗೌತಮ್ ಕುಮಾರ್ ಸೂಚನೆಯಂತೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ ಅಂಗಡಿ ಮುಂಗಟ್ಟುಗಳು, ಹೋಟೆಲ್ಗಳು ಹಾಗೂ ವಿವಿಧ ರೀತಿಯ ಸಂಸ್ಥೆಗಳು ಅಳವಡಿಸುವ ನಾಮಫಲಕಗಳಲ್ಲಿ, ನವೆಂಬರ್ 1 ರಿಂದ ಶೇಕಡಾ 60 ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳಬೇಕು. ಕನ್ನಡ ನಾಮಫಲಕ ಅಳವಡಿಸದಿದ್ದಲ್ಲಿ, ಅಂತಹ ಉದ್ದಿಮೆಗಳ ಪರವಾನಗಿಯನ್ನು ರದ್ದುಪಡಿಸಲಾಗುವುದೆಂದು ಆಯುಕ್ತರು ಕಟ್ಟುನಿಟ್ಟಿನ ಆದೇಶ ಹೊರಡಿಸಿದ್ದಾರೆ. ಹೊಸ ಪರವಾನಗಿ ನೀಡುವಾಗಲೂ ಕನ್ನಡ ನಾಮಫಲಕ ಅಳವಡಿಸುವುದು ಕಡ್ಡಾಯ ಮಾಡಲಾಗಿದೆ.