ETV Bharat / state

ಕೇಂದ್ರ, ರಾಜ್ಯ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಕಡ್ಡಾಯ.. ಆದೇಶ ಹೊರಡಿಸಿದ ಸರ್ಕಾರ

ಕನ್ನಡ ಕಡ್ಡಾಯ: ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಲು ಸರ್ಕಾರ ಆದೇಶ ಹೊರಡಿಸಿದೆ. ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪತ್ರ ಬರೆದ ಬಳಿಕ ಆದೇಶ ಹೊರಡಿಸಿದ ರಾಜ್ಯ ಸರ್ಕಾರ.

author img

By

Published : Sep 6, 2022, 9:05 PM IST

ಕನ್ನಡ ಕಡ್ಡಾಯ
ಕನ್ನಡ ಕಡ್ಡಾಯ

ಬೆಂಗಳೂರು: ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದಂತೆ ರಾಜ್ಯದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಕಡ್ಡಾಯವಾಗಿ ಕನ್ನಡ ಬಳಸಲು ಸರ್ಕಾರ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರದ ಕಾರ್ಯಕ್ರಮಗಳಲ್ಲಿ ಕನ್ನಡ ಭಾಷೆ ಬಳಸದೇ ಇರುವ ಬಗ್ಗೆ ಸಾಕಷ್ಟು ಟೀಕೆ ವ್ಯಕ್ತವಾಗಿತ್ತು.‌ ಇದನ್ನು ಮನಗಂಡು ರಾಜ್ಯ ಸರ್ಕಾರ ಇದೀಗ ಕನ್ನಡ ಕಡ್ಡಾಯಗೊಳಿಸಿ ಆದೇಶ ಹೊರಡಿಸಿದೆ.

ಕನ್ನಡ ಕಡ್ಡಾಯ: ಆದೇಶದಲ್ಲಿ ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯ ಜೊತೆಗೆ ಸಾರ್ವಭೌಮ ಭಾಷೆಯಾಗಿದೆ. ಕನ್ನಡವನ್ನು ರಾಜ್ಯದಲ್ಲಿ ಆಡಳಿತ ಭಾಷೆಯಾಗಿ ಅನುಷ್ಠಾನಗೊಳಿಸುವ ಸಂಬಂಧ ಕನ್ನಡ ಭಾಷೆ ಮತ್ತು ಕನ್ನಡಿಗರ ಹಿತಾಸಕ್ತಿಯನ್ನು ಕಾನೂನಿನ ಅನ್ವಯ ಸಂರಕ್ಷಿಸುವ ಸಲುವಾಗಿ ಕನ್ನಡ ಅಭಿವೃದ್ಧಿ ಪ್ರಾಧಿಕಾರ ರಚನೆಯಾಗಿರುತ್ತದೆ ಎಂದು ವಿವರಿಸಿದೆ.

(ಇದನ್ನೂ ಓದಿ: ಹೇರಿಕೆ ಪ್ರಯತ್ನಕ್ಕೆ ಪ್ರತಿರೋಧ ಬಂದಾಗಲೆಲ್ಲಾ 'ಹಿಂದಿ' ಹಿಂದೆ ಸರಿದಿದೆ: ಬರಗೂರು)

ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪತ್ರ ಬರೆದು ಕೇಂದ್ರ ಮತ್ತು ರಾಜ್ಯ ಸರ್ಕಾರದ ಕಾರ್ಯಕ್ರಮಗಳ ವೇದಿಕೆ ಮೇಲೆ ಅಳವಡಿಸಲಾಗುವ ಪರದೆ, ಫಲಕಗಳಲ್ಲಿ ಹಾಗೂ ಒಟ್ಟಾರೆಯಾಗಿ ಕಾರ್ಯಕ್ರಮದಲ್ಲಿ ಕನ್ನಡವನ್ನು ಕಡ್ಡಾಯವಾಗಿ ಬಳಸುವಂತೆ ಸರ್ಕಾರದ ಎಲ್ಲ ಇಲಾಖೆಗಳ ಮುಖ್ಯಸ್ಥರಿಗೆ ಕಟ್ಟುನಿಟ್ಟಿನ ನಿರ್ದೇಶನ ನೀಡುವಂತೆ ಕೋರಿದ್ದರು.

ಕನ್ನಡ ಭಾಷೆ ನಮಗೆ ಆದ್ಯತೆ ಆಗಬೇಕೇ ಹೊರತು ಆಯ್ಕೆಯಾಗಬಾರದು. ಈ ಹಿನ್ನೆಲೆಯಲ್ಲಿ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರ ಪ್ರಸ್ತಾವನೆಯನ್ವಯ, ಇನ್ನು ಮುಂದೆ ರಾಜ್ಯದಲ್ಲಿ ಜರುಗುವ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳ ಆಯೋಜನೆಯಲ್ಲಿ ಕನ್ನಡ ಕಡ್ಡಾಯವಾಗಿ ಬಳಸಬೇಕು ಎಂದು ಈ ಮೂಲಕ ಸೂಚನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

(ಇದನ್ನೂ ಓದಿ: ಮರಾಠಿ, ಕೊಂಕಣಿಯಲ್ಲಿ ನಾಮಫಲಕ; ಕನ್ನಡಿಗರ ಕೆಂಗಣ್ಣಿಗೆ ಗುರಿಯಾದ ಕಾರವಾರ ನಗರಸಭೆ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.