ಬೆಂಗಳೂರು : ಜಯನಗರ ಶಾಸಕಿ ಸೌಮ್ಯಾ ರೆಡ್ಡಿ ವಿರುದ್ಧ ಕನ್ನಡಪರ ಸಂಘಟನೆಗಳು ಪ್ರತಿಭಟಿಸಿವು. ಕುವೆಂಪು ರಚಿತ ನಾಡಗೀತೆ ಸಾಲುಗಳನ್ನ ತಿರುಚಿರುವುದನ್ನ ಖಂಡಿಸಿ ಪ್ರತಿಭಟನೆ ಮಾಡಲಾಗಿದೆ.
"ಬಾರಿಸು ಕನ್ನಡ ಡಿಂಡಿಮವ ಓ ಕರ್ನಾಟಕ ಹೃದಯ ಶಿವ" ಎಂದು ಇರಬೇಕಾದ ಸಾಲಿನಲ್ಲಿ "ಓ ಕರ್ನಾಟಕ ಹೃದಯ ಯೇಸು" ಎಂಬ ಅಕ್ಷರ ಬಳಕೆ ಮಾಡಿದ್ದು, ಇದರ ವಿರುದ್ಧ ಹಿಂದೂಪರ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ. ಸೌಮ್ಯ ರೆಡ್ಡಿ ಬೆಂಬಲಿತ ಸಂಘಟನೆಯನ್ನ ವಿರೋಧಿಸಿ, ಹಿಂದೂಪರ ಸಂಘಟನೆಗಳು ಪ್ರತಿಭಟನೆ ಮಾಡಿದ್ದಾರೆ.
ಸಂಘಟನೆ ಹಾಗೂ ಶಾಸಕಿ ಸೌಮ್ಯ ರೆಡ್ಡಿ ವಿರುದ್ಧ ಪ್ರಕರಣ ದಾಖಲಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದು, ಕಾರ್ಯಕ್ರಮ ನಡೆದಿದ್ದ ಸ್ಥಳದಲ್ಲಿ ಹಾಕಲಾಗಿದ್ದ ಬ್ಯಾನರ್ಗಳನ್ನ ಹರಿದು ಶಾಸಕಿ ವಿರುದ್ಧ ಧಿಕ್ಕಾರ ಕೂಗಿ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.