ETV Bharat / state

ರಾಜ್ಯೋತ್ಸವ ಪ್ರಶಸ್ತಿಗಾಗಿ 65 ಗಣ್ಯರ ಹೆಸರು ಅಂತಿಮ.. ಸಿಎಂ ಅಧ್ಯಕ್ಷತೆಯಲ್ಲಿ ಸಭೆ

ಇಂದು ಕನ್ನಡ ರಾಜೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆಯೂ ಸಿಎಂ ಯಡಿಯೂರಪ್ಪ ಅವರ ನೇತೃತ್ವದಲ್ಲಿ ನಡೆಯಿತು. ಈ ವೇಳೆ 65 ಗಣ್ಯರಿಗೆ ಈ ಬಾರಿ ಪ್ರಶಸ್ತಿ ನೀಡಲು ಸಮಿತಿ ನಿರ್ಧರಿಸಿದೆ..

CM  Meeting
CM Meeting
author img

By

Published : Oct 23, 2020, 7:11 PM IST

ಬೆಂಗಳೂರು : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಇಂದು ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಮಿತಿ ಸಭೆ ನಡೆಯಿತು.

ಸಿಎಂ ಗೃಹ ಕಚೇರಿ ಕೃಷ್ಣಾದಲ್ಲಿ ಯಡಿಯೂರಪ್ಪ ಅವರು ಸಭೆ ನಡೆಸಿದ್ದು, ಈ ಬಾರಿಯ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಸಂಖ್ಯೆ ಕುರಿತು ಚರ್ಚೆ ನಡೆಸಿದರು. ಈ ಬಾರಿ 65ನೇ ವರ್ಷದ ರಾಜ್ಯೋತ್ಸವವಾಗಿದ್ದು, 65 ಗಣ್ಯರ ಆಯ್ಕೆ ಕುರಿತು ಚರ್ಚೆ ನಡೆಸಲಾಯಿತು.

ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಆಯ್ಕೆ ಸಲಹಾ ಸಮಿತಿ ಒಟ್ಟು 130 ಸಾಧಕರ ಹೆಸರುಗಳನ್ನು ಆಯ್ಕೆ ಸಮಿತಿಗೆ ನೀಡಿದ್ದು, ಆ ಹೆಸರುಗಳ ಪರಿಶೀಲನೆ ನಡೆಸಲಾಯಿತು. 65 ಹೆಸರು ಅಂತಿಮಗೊಳಿಸಲು ಸರ್ಕಸ್ ನಡೆಸಲಾಯಿತು. ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ ಟಿ ರವಿ ಹಾಗೂ ಆಯ್ಕೆ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.