ಬೆಂಗಳೂರು: ನಾಡೋಜ ಡಾ.ಮನು ಬಳಿಗಾರ್ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಇಬ್ಬರಿಗೆ ದತ್ತಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಹಿರಿಯ ಲೇಖಕಿ ಎ.ಜಿ ರತ್ನಕಾಳೇಗೌಡ ಅವರನ್ನು 2020 ನೇ ಸಾಲಿನ ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿಗೆ ಹಾಗೂ ಸಾಮಾಜಿಕ ಕಾರ್ಯಕರ್ತ ರಾಜಶೇಖರ ಮುಲಾಲಿ ಅವರಿಗೆ 2020 ನೇ ಸಾಲಿನ "ಮಾಹಿತಿ ಹಕ್ಕು ತಜ್ಞ ಜೆ.ಎಂ.ರಾಜಶೇಖರ ದತ್ತಿ ಪ್ರಶಸ್ತಿ' ಗೆ ಆಯ್ಕೆ ಮಾಡಲಾಗಿದೆ.
ಪಂಕಜಶ್ರೀ ಸಾಹಿತ್ಯ ದತ್ತಿ ಪ್ರಶಸ್ತಿ ಹತ್ತು ಸಾವಿರ ನಗದು ಹಾಗೂ ಮಾಹಿತಿ ಹಕ್ಕು ತಜ್ಞ ಜೆ.ಎಂ ರಾಜಶೇಖರ ದತ್ತಿ ಪ್ರಶಸ್ತಿ 5000 ನಗದು ಪುರಸ್ಕಾರ ಒಳಗೊಂಡಿದೆ ಎಂದು ಕ.ಸಾ.ಪ ಪ್ರಕಟಿಸಿದೆ.