ETV Bharat / state

ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ 'ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ' - ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿ

ಕನ್ನಡ ಸಾಹಿತ್ಯ ಪರಿಷತ್​ ಕೊಡಮಾಡುವ ಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು ಆಯ್ಕೆಯಾಗಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ತಿಳಿಸಿದ್ದಾರೆ.

kannada-sahitya-parishaths-nalwadi-krishnaraja-wodeyar-award-for-former-prime-minister-deve-gowda
ಮಾಜಿ ಪ್ರಧಾನಿ ದೇವೇಗೌಡರಿಗೆ ಕನ್ನಡ ಸಾಹಿತ್ಯ ಪರಿಷತ್ತಿನ ನಾಲ್ವಡಿ ಕೃಷ್ಣರಾಜ ಒಡೆಯರ್‌ ಪ್ರಶಸ್ತಿ
author img

By

Published : Jun 7, 2023, 4:53 PM IST

ಬೆಂಗಳೂರು : ಕನ್ನಡ ಸಾಹಿತ್ಯ ಪರಿಷತ್ತಿನ ಪ್ರತಿಷ್ಠಿತ ದತ್ತಿ ಪ್ರಶಸ್ತಿಗಳಲ್ಲಿ ಒಂದಾಗಿರುವ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼಗೆ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರನ್ನು ಆಯ್ಕೆ ಮಾಡಲಾಗಿದೆ. ಸಾಹಿತ್ಯ ಪರಿಷತ್ ಅಧ್ಯಕ್ಷ ನಾಡೋಜ ಡಾ. ಮಹೇಶ ಜೋಶಿ ಅವರು ಇಂದು 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವ ವಿಚಾರವನ್ನು ದೇವೇಗೌಡರ ನಿವಾಸಕ್ಕೆ ತೆರಳಿ ತಿಳಿಸಿದರು. ಡಾ.ಮಹೇಶ ಜೋಶಿ ಅಧ್ಯಕ್ಷತೆಯಲ್ಲಿ ನಡೆದ ಆಯ್ಕೆ ಸಮಿತಿಯಲ್ಲಿ ಇತಿಹಾಸ ತಜ್ಞ ಹಾಗೂ ಸಂಶೋಧಕ ಡಾ.ತಲಕಾಡು ಚಿಕ್ಕರಂಗೇ ಗೌಡ, ಕನ್ನಡ ಸಾಹಿತ್ಯ ಪರಿಷತ್ತಿನ ಗೌರವ ಕಾರ್ಯದರ್ಶಿ ನೇ.ಭ. ರಾಮಲಿಂಗ ಶೆಟ್ಟಿ, ಡಾ. ಪದ್ಮಿನಿ ನಾಗರಾಜು ಹಾಗೂ ಗೌರವ ಕೋಶಾಧ್ಯಕ್ಷ ಡಾ.ಬಿ.ಎಂ.ಪಟೇಲ್ ಪಾಂಡು ಇದ್ದರು.

"ನಾಡಿನ ಹಿರಿಯ ರಾಜಕೀಯ ಮುತ್ಸದ್ದಿ, ದೇಶದ ಪ್ರಧಾನಿ ಪಟ್ಟಕ್ಕೇರಿದ ಮೊದಲ ಕನ್ನಡಿಗ, ಕನ್ನಡ ನಾಡು ನುಡಿಯ ಕುರಿತು ಸದಾ ತುಡಿತ ಹೊಂದಿರುವ ಅಪ್ಪಟ ಕನ್ನಡದ ಹೆಮ್ಮೆಯ ಮಣ್ಣಿನ ಮಗ ಎಂದು ಕರೆಸಿಕೊಂಡ ಮಾಜಿ ಪ್ರಧಾನಿ ಹೆಚ್‌.ಡಿ.ದೇವೇಗೌಡರು 2022ನೇ ಸಾಲಿನ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼಗೆ ಭಾಜನರಾಗಿದ್ದಾರೆ" ಎಂದು ಡಾ.ಮಹೇಶ ಜೋಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ನಾಲ್ವಡಿಯವರು ನಾಡಿನ ಅಭ್ಯುದಯದ ಕನಸು ಕಂಡವರು. ಅವರ ಆಶಯದಂತೆ ನಾಡಿನಲ್ಲಿ ಕೈಗಾರಿಕಾ ಕ್ಷೇತ್ರ, ಕೃಷಿ, ನೀರಾವರಿ, ವಿದ್ಯುಚ್ಛಕ್ತಿ, ಹಿಂದುಳಿದ ವರ್ಗಗಳ ಕಲ್ಯಾಣ, ಸಾಮಾಜಿಕ ನ್ಯಾಯ, ಮಹಿಳಾ ಸಬಲೀಕರಣ, ಗ್ರಾಮ ನೈರ್ಮಲೀಕರಣ, ವೈದ್ಯಕೀಯ ಕ್ಷೇತ್ರ, ನೀರಿನ ಸೌಕರ್ಯ, ಸಾರಿಗೆ ಸೌಲಭ್ಯ, ವ್ಯಾಪಾರ ಸೇರಿದಂತೆ ನಾಡಿನ ಸರ್ವತೋಮುಖ ಅಭಿವೃದ್ಧಿಯಲ್ಲಿ ಗಣನೀಯ ಸಾಧನೆ ಮಾಡಿರುವ ಗಣ್ಯರೊಬ್ಬರಿಗೆ ಪ್ರತಿ ವರ್ಷ ಪ್ರಸ್ತುತ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼ ನೀಡಬೇಕು ಎನ್ನುವ ಮೂಲ ಆಶಯ ಈ ದತ್ತಿ ಪ್ರಶಸ್ತಿಯದ್ದು. ಪ್ರಶಸ್ತಿಯು 51,000 (ಐವತ್ತೊಂದು ಸಾವಿರ) ರೂ. ನಗದು, ಸ್ಮರಣಿಕೆ, ಫಲ ತಾಂಬೂಲ ಒಳಗೊಂಡಿರುತ್ತದೆ ಎಂದು ತಿಳಿಸಿದ್ದಾರೆ.

ಇದುವರೆಗೂ ನಾಡಿನ 12 ಜನ ಗಣ್ಯರಿಗೆ ಪರಿಷತ್ತಿನ ಪ್ರತಿಷ್ಠಿತ ʻಶ್ರೀ ನಾಲ್ವಡಿ ಕೃಷ್ಣರಾಜ ಒಡೆಯರ್‌ ದತ್ತಿ ಪ್ರಶಸ್ತಿʼ ಪ್ರಧಾನ ಮಾಡಲಾಗಿದೆ. ಈ ಬಾರಿಯ ಆಯ್ಕೆ ಸಮಿತಿಯು ದೇವೇಗೌಡರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದೆ. ನಾಡಿನ ನೀರಾವರಿ ಕ್ಷೇತ್ರ, ಕೃಷಿ ಕ್ಷೇತ್ರ, ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿ ಸೇರಿದಂತೆ ಸಮಗ್ರ ಕನ್ನಡ ನಾಡಿನ ಸರ್ವತೋಮುಖ ಅಭಿವೃದ್ಧಿಗಾಗಿ ಸಂಪೂರ್ಣವಾಗಿ ಗೌಡರು ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ. ಸಮಗ್ರ ಕನ್ನಡ ನಾಡಿನ ಅಭಿವೃದ್ಧಿಯ ಕನಸು ಕಂಡ ಅವರು ಬಡ ರೈತರು, ಸೌಲಭ್ಯ ವಂಚಿತರು ಹಾಗೂ ಸಮಾಜದ ದುರ್ಬಲ ವರ್ಗಗಳ ಒಳಿತಿಗಾಗಿ ಹೋರಾಟ ಮಾಡಿದ್ದಾರೆ. ಈ ಎಲ್ಲಾ ಹಿನ್ನೆಲೆಯಲ್ಲಿ ದೇವೇಗೌಡರನ್ನು ಆಯ್ಕೆ ಸಮಿತಿ ಪ್ರಶಸ್ತಿಗೆ ಆಯ್ಕೆ ಮಾಡಿದೆ ಎಂದು ಪರಿಷತ್ತಿನ ಅಧ್ಯಕ್ಷರು ಹೇಳಿದ್ದಾರೆ.

ದೇವೇಗೌಡರು ನಾಡಿನ ಮುಖ್ಯಮಂತ್ರಿ ಸ್ಥಾನದಲ್ಲಿ ಇರುವಾಗ ಕನ್ನಡ ಸಾಹಿತ್ಯ ಪರಿಷತ್ತಿಗೂ ಅಪಾರ ಕೊಡುಗೆಗಳನ್ನು ನೀಡಿದ್ದರು. ಪರಿಷತ್ತಿನ ಇತಿಹಾಸದಲ್ಲಿ ಮೊದಲ ಬಾರಿಗೆ ಇಲ್ಲಿನ ಸಿಬ್ಬಂದಿಯನ್ನು ಖಾಯಂಮಾತಿ ಮಾಡಿದ್ದರು. ಇದರೊಂದಿಗೆ ಪರಿಷತ್ತಿಗೆ ಸರಕಾರ ಖಾಯಂ ಅನುದಾನ ನೀಡಬೇಕು ಎನ್ನುವ ಸರಕಾರಿ ಆದೇಶ ಹೊರಡಿಸಿದ್ದರು. ಸಾಹಿತ್ಯ ಪರಿಷತ್ತಿನ ಬಗ್ಗೆ ಕಾಳಜಿ ಹೊಂದಿದ್ದ ಅವರು ಕಾಲ ಕಾಲಕ್ಕೆ ಪರಿಷತ್ತಿಗೆ ತಮ್ಮ ಸಲಹೆ ಸೂಚನೆಗಳನ್ನು ನೀಡುವುದರ ಜೊತೆಗೆ ಪರಿಷತ್ತಿನ ಇತ್ತೀಚಿನ ಬೆಳವಣಿಗೆಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು. 2022ನೇ ಸಾಲಿನ ಪ್ರಶಸ್ತಿಗೆ ಆಯ್ಕೆಯಾಗಿರುವುದನ್ನು ಅವರ ನಿವಾಸಕ್ಕೆ ತೆರಳಿ ತಿಳಿಸಿ, ಪ್ರಶಸ್ತಿ ಸ್ವೀಕರಿಸುವಂತೆ ಮನವಿ ಮಾಡಿದಾಗ ತುಂಬು ಮನಸ್ಸಿನಿಂದ ದೇವೇಗೌಡರು ಒಪ್ಪಿಕೊಂಡು ಪ್ರಶಸ್ತಿಗಾಗಿ ಸಂತಸ ವ್ಯಕ್ತಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ : ಜಾತಿವಾರು ಸಮೀಕ್ಷೆ ವರದಿಯನ್ನ ನಮ್ಮ ಸರ್ಕಾರ ಸ್ವೀಕಾರ ಮಾಡುತ್ತೆ: ಸಿದ್ದರಾಮಯ್ಯ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.