ETV Bharat / state

ಜಗತ್ತನ್ನೇ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದ್ದು : ಕನ್ನಡ ವಿವಿ ಕುಲಪತಿ

author img

By

Published : Jun 6, 2020, 11:48 PM IST

ಕೊರೊನಾ ಸಂದರ್ಭದಲ್ಲಿಯೂ ಕೂಡ ನಾವು ಜೀವನ ಕಟ್ಟಿಕೊಳ್ಳಬೇಕಾಗಿದೆ. ಎಲ್ಲರನ್ನು ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿ ಎಂದು ಕುಲಪತಿಗಳಾದ ಡಾ.ಸ.ಚಿ.ರಮೇಶ್​ ವಿಷಾದ ವ್ಯಕ್ತಪಡಿಸಿದರು.

kannada VC speak abou corona
ಜಗತ್ತನ್ನೇ ರಕ್ಷಿಸುವ ಜವಾಬ್ದಾರಿ ನಮ್ಮೆಲ್ಲರದ್ದು : ಕನ್ನಡ ವಿವಿ ಕುಲಪತಿ

ಬಳ್ಳಾರಿ : ಸಾಮಾಜಿಕ ಪಿಡುಗುಗಳಾದ ಕಾಲರಾ, ಪ್ಲೇಗ್ ಇತರೆ ಮಹಾಮಾರಿಗಳು ಹಿಂದಿನ ಕಾಲದಲ್ಲಿ ಸಾಮಾಜಿಕ ಪಿಡುಗುಗಳಾಗಿ ಜಗತ್ತನ್ನೇ ಬಾಧಿಸಿವೆ. ಇಂದು ಕೋವಿಡ್-19 ಕೊರೊನಾ ವೈರಸ್ ಜಗತ್ತನ್ನೇ ತಲ್ಲಣಗೊಳಿಸಿದೆ. ಇಂತಹ ಸಂದರ್ಭದಲ್ಲಿಯೂ ಕೂಡ ನಾವು ಜೀವನ ಕಟ್ಟಿಕೊಳ್ಳಬೇಕಾಗಿದೆ. ಮುಖ್ಯವಾಗಿ ಎಲ್ಲರನ್ನು ಅನುಮಾನದ ದೃಷ್ಟಿಯಿಂದ ನೋಡುವ ಪರಿಸ್ಥಿತಿ ನಿರ್ಮಾಣವಾಗಿರುವುದು ನೋವಿನ ಸಂಗತಿ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ.ಸ.ಚಿ.ರಮೇಶ್​ ವಿಷಾದ ವ್ಯಕ್ತಪಡಿಸಿದರು.

ಹಂಪಿಯ ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಕಟ್ಟಡದಲ್ಲಿ ಆಂತರಿಕ ಗುಣಮಟ್ಟ ಭರವಸೆ ಕೋಶದ ವತಿಯಿಂದ ಶನಿವಾರ ಸಾಂಕ್ರಾಮಿಕ ರೋಗ ಕೋವಿಡ್-19 ಅರಿವಿನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಮ್ಮ ಕುಟುಂಬದ ಸದಸ್ಯರ ಜೊತೆಯಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಳ್ಳುವ ದುಸ್ಥಿತಿ ಬಂದಿದೆ ಎಂದರು.

ಕನ್ನಡ ವಿಶ್ವವಿದ್ಯಾಲಯದ ವೈದ್ಯರಾದ ಡಾ. ಸಂಪತ್‍ಕುಮಾರ್ ತೆಗ್ಗಿ, ಕೋವಿಡ್-19 ಆರೋಗ್ಯದ ಮುನ್ನೆಚ್ಚರಿಕೆಗಳು ಎನ್ನುವ ವಿಶೇಷ ಉಪನ್ಯಾಸ ನೀಡಿ ಸ್ವಯಂ ರಕ್ಷಣೆ ನಮ್ಮೆಲ್ಲರ ಹೊಣೆ. ನಾವು ಹೆಚ್ಚಿನ ರೀತಿಯಲ್ಲಿ ಸುರಕ್ಷಿತ ಕ್ರಮಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಆಂತರಿಕ ಗುಣಮಟ್ಟ ಭರವಸೆ ಕೋಶದ ನಿರ್ದೇಶಕರಾದ ಡಾ. ಎ. ಮೋಹನ ಕುಂಟಾರ್​ ಮಾತನಾಡಿ ವಿಶ್ವವಿದ್ಯಾಲಯಗಳಲ್ಲಿ ಹಿಂದೆ ಅನೇಕ ಶೈಕ್ಷಣಿಕ ವಿಷಯಗಳಿಗೆ ಸಂಬಂಧಪಟ್ಟಂತೆ, ಕಾರ್ಯಾಗಾರ, ವಿಶೇಷ ಉಪನ್ಯಾಸ, ವಿಚಾರ ಸಂಕಿರಣಗಳನ್ನು ಹಮ್ಮಿಕೊಳ್ಳಲಾಗುತ್ತಿತ್ತು. ಆದರೆ ಈ ಆರೋಗ್ಯದ ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ಕನ್ನಡ ವಿಶ್ವವಿದ್ಯಾಲಯವು ಆಂತರಿಕ ಗುಣಮಟ್ಟ ಭರವಸೆ ಕೋಶದಿಂದ ವಿಶ್ವವಿದ್ಯಾಲಯದ ಎಲ್ಲ ಸಿಬ್ಬಂದಿಗಳ ಆರೋಗ್ಯದ ಕಾಳಜಿ ವಹಿಸಿ ಆರೋಗ್ಯದ ಕುರಿತು ವಿಶೇಷ ಉಪನ್ಯಾಸವನ್ನು ಇಂದು ಹಮ್ಮಿಕೊಳ್ಳಲಾಗಿದೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.