ETV Bharat / state

ಕಣ್ವ ಸೌಹಾರ್ದ ಸೊಸೈಟಿ ಅವ್ಯವಹಾರ ಪ್ರಕರಣ: ಹೈಕೋರ್ಟ್​ಗೆ ಸರ್ಕಾರದ ಮಾಹಿತಿ - Government Information to the High Court

ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್​ ಸೊಸೈಟಿಯ ಅವ್ಯವಹಾರ ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆಕ್ಷೇಪಿಸಿ ಕೆ. ಎಸ್. ರಮೇಶ್ ಮತ್ತಿತರರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ವೇಳೆ ಕೋರ್ಟ್​ಗೆ ರಾಜ್ಯ ಸರ್ಕಾರ ಆಸ್ತಿ ಮುಟ್ಟುಗೋಲಿಗೆ ಕ್ರಮ ಜರುಗಿಸಲಾಗುತ್ತಿದೆ ಎಂದು ಮಾಹಿತಿ ನೀಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : Aug 6, 2020, 9:09 PM IST

Updated : Aug 6, 2020, 9:22 PM IST

ಬೆಂಗಳೂರು: ಕಣ್ವ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಅವ್ಯವಹಾರ ಪ್ರಕರಣದಲ್ಲಿ ಸೊಸೈಟಿಗೆ ಸೇರಿದ 250 ಕೋಟಿ ರೂ ಮೌಲ್ಯದ ಆಸ್ತಿ ಮುಟ್ಟುಗೋಲಿಗೆ ಕ್ರಮ ಜರುಗಿಸಲಾಗುತ್ತಿದೆ‌ ಎಂದು ರಾಜ್ಯ ಸರ್ಕಾರ ಹೈಕೋರ್ಟ್ ಮಾಹಿತಿ ನೀಡಿದೆ.

ಸೊಸೈಟಿಯ ಅವ್ಯವಹಾರ ಪ್ರಕರಣದ ತನಿಖೆಯನ್ನು ಸರಿಯಾಗಿ ನಡೆಸುತ್ತಿಲ್ಲ ಎಂದು ಆಕ್ಷೇಪಿಸಿ ಕೆ. ಎಸ್. ರಮೇಶ್ ಮತ್ತಿತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರದ ಪರ ವಕೀಲರು ಈ ಮಾಹಿತಿ ನೀಡಿದ್ದಾರೆ.

ವಿಚಾರಣೆ ವೇಳೆ ಸರ್ಕಾರದ ಪರ ವಕೀಲರು ವಾದಿಸಿ, ಪ್ರಕರಣದ ಸಕ್ಷಮ ಪ್ರಾಧಿಕಾರಿಯನ್ನು ಬದಲಿಸಲಾಗಿದೆ. ಈವರೆಗೆ ಸೊಸೈಟಿಯ 172 ಆಸ್ತಿಗಳನ್ನು ಗುರುತಿಸಲಾಗಿದ್ದು, ಅದರಲ್ಲಿ 32 ಆಸ್ತಿಗಳನ್ನು ಜಪ್ತಿ ಮಾಡಲಾಗಿದೆ. ಒಟ್ಟಾರೆ 250 ಕೋಟಿ ರೂ.ಮೊತ್ತದ ಆಸ್ತಿ ಜಪ್ತಿಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದಲ್ಲಿ ಏಕೆ ಈವರೆಗೆ ಮುಟ್ಟುಗೋಲು ಆದೇಶದ ಅಧಿಸೂಚನೆ ಹೊರಡಿಸಿಲ್ಲ ಎಂದು ಪ್ರಶ್ನಿಸಿತು. ಅಲ್ಲದೇ, ಠೇವಣಿದಾರರ ಹಿತಾಸಕ್ತಿ ಕಾಪಾಡಲು ಸರ್ಕಾರ ಮುಂದಾಗಬೇಕು. ಸಕ್ಷಮ ಪ್ರಾಧಿಕಾರವು ಯಾವುದೇ ನೆಪ ಹೇಳದೆ ಕೆಲಸ‌ ಮಾಡಬೇಕು ಎಂದು ತಾಕೀತು ಮಾಡಿತು. ಪ್ರಕರಣದ ಸಂಬಂಧ ಜರುಗಿಸಿದ ಕ್ರಮಗಳ ಕುರಿತು ಆಗಸ್ಟ್. 19ರಂದು ವರದಿ ಸಲ್ಲಿಸಬೇಕು ಎಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

ಪ್ರಕರಣದ ಹಿನ್ನೆಲೆ:

ಸೊಸೈಟಿಯು ತನ್ನ ಸದಸ್ಯರು ಮತ್ತು ಸಾರ್ವಜನಿಕರಿಂದ 2019ರ ಮಾರ್ಚ್​ವರೆಗೂ ಒಟ್ಟು 642.31 ಕೋಟಿ ರೂ. ಠೇವಣಿ ಸಂಗ್ರಹಿಸಿದ್ದು, ಕೆಲ ಕಂಪನಿಗಳಿ 416 ಕೋಟಿ ರೂ. ಸಾಲ ನೀಡಿದೆ. ಆದರೆ, ಕೊಟ್ಟಿರುವ ಸಾಲ ವಸೂಲಿಗೆ ಯಾವುದೇ ಕ್ರಮಗಳನ್ನು ಕೈಗೊಂಡಿಲ್ಲ, ಜತೆಗೆ ಆಡಳಿತ ಮಂಡಳಿ ಸದಸ್ಯರು ಅಕ್ರಮದಲ್ಲಿ ಭಾಗಿಯಾಗಿದ್ದು, ಇಡೀ ವಹಿವಾಟಿನ ಬಗ್ಗೆ ಫೊರೆನ್ಸಿಕ್ ಆಡಿಟ್ ಆಗಬೇಕೆಂದು ಅರ್ಜಿದಾರರು ಕೋರಿದ್ದಾರೆ.

Last Updated : Aug 6, 2020, 9:22 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.