ETV Bharat / state

ಬಡವರಿಗೆ 438 ನಮ್ಮ ಕ್ಲಿನಿಕ್ ತೆರೆಯಲಿರುವ ಸರ್ಕಾರ: ಕಾಯಿಲೆಗೆ ಯಾವೆಲ್ಲ ಚಿಕಿತ್ಸೆ ಲಭ್ಯ ಇಲ್ಲಿದೆ ಮಾಹಿತಿ! - 12 ರೀತಿಯ ಆರೋಗ್ಯ ಸೇವೆಗಳು ಲಭ್ಯ

ನಮ್ಮ ಕ್ಲಿನಿಕ್‌ಗಳಿಂದ ಬಡತನ ರೇಖೆಗಿಂತ ಕೆಳಗಿರುವ ಕಡುಬಡವರಿಗೆ ಆರೋಗ್ಯ ಸೇವೆ ಸಿಗಲಿದೆ. 10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳು ರಾಜ್ಯದ ವಿವಿಧ ನಗರಗಳಲ್ಲಿ ಆರಂಭವಾಗಲಿವೆ.

govt our clinic plan
ಸರ್ಕಾರದ ನಮ್ಮ ಕ್ಲಿನಿಕ್ ಯೋಜನೆ
author img

By

Published : Dec 13, 2022, 7:26 PM IST

ಬೆಂಗಳೂರು: ಬಡವರಿಗೆ ಸುಲಭವಾಗಿ ಚಿಕಿತ್ಸೆ ಸಿಗುವಂತೆ ರಾಜ್ಯ ಸರ್ಕಾರ "ನಮ್ಮ ಕ್ಲಿನಿಕ್" ಆರಂಭಿಸುತ್ತಿದೆ. ಬಡತನ ರೇಖೆಗಿಂತ ಕೆಳಗಿರುವ ಜನರು, ಗುಡಿಸಲುಗಳಲ್ಲಿ ವಾಸಿಸುವ ಕಡು ಬಡವರಿಗಾಗಿ ಈ ಯೋಜನೆ ರೂಪಿಸಲಾಗಿದೆ. ಪ್ರಾಥಮಿಕ ಆರೋಗ್ಯ ಕೇಂದ್ರದಂತೆ ಇದು ಕಾರ್ಯ ನಿರ್ವಹಿಸಲಿದೆ.

ನಗರದಲ್ಲಿ ಪ್ರತಿ ವಾರ್ಡ್‌ನಲ್ಲಿ ಒಂದು ಕ್ಲಿನಿಕ್‌ ಆರಂಭವಾಗುವುದರಿಂದ ಜನರಿಗೆ ಆರೋಗ್ಯ ಹಾಗೂ ಸರ್ಕಾರಿ ಆರೋಗ್ಯ ಕಾರ್ಯಕ್ರಮ ಬಗ್ಗೆ ಜಾಗೃತಿ ಹೆಚ್ಚಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಜನಸಂಖ್ಯೆಗೆ ಅನುಗುಣ ಪ್ರಾಥಮಿಕ ಆರೋಗ್ಯ ಕೇಂದ್ರಗಳಿವೆ. ಆದರೆ, ನಗರ ಪ್ರದೇಶಗಳಲ್ಲಿ ಇದು ಕಡಿಮೆ ಇದೆ. ಹೀಗಾಗಿ ಈ ಯೋಜನೆ ಆರಂಭಿಸಲಾಗಿದೆ. ರಾಜ್ಯ ಹಾಗೂ ಕೇಂದ್ರ ಸರ್ಕಾರ ಸಂಪೂರ್ಣ ಆರ್ಥಿಕ ಸಹಕಾರ ನೀಡಿದೆ. ಹೆಚ್ಚು ಜನರು ಬಂದು ಆರೋಗ್ಯ ತಪಾಸಣೆ, ಚಿಕಿತ್ಸೆ ಸೇವೆ ಪಡೆಯಬೇಕು.

ರಾಜ್ಯಾದ್ಯಂತ ನಮ್ಮ ಕ್ಲಿನಿಕ್​: ರಾಜ್ಯದಲ್ಲಿ ಒಟ್ಟು 438 ನಮ್ಮ ಕ್ಲಿನಿಕ್‌ಗಳನ್ನು ಆರಂಭಿಸಲು ಸರ್ಕಾರ ಯೋಜನೆ ರೂಪಿಸಿದೆ. ಜನವರಿ ಅಂತ್ಯಕ್ಕೆ ಎಲ್ಲವೂ ಕಾರ್ಯನಿರ್ವಹಿಸಲಿವೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿ ಒಟ್ಟು 243 ನಮ್ಮ ಕ್ಲಿನಿಕ್‌ಗಳು ಕಾರ್ಯಚರಣೆ ಮಾಡಲಿದ್ದು, ಜನವರಿ ಎರಡನೇ ವಾರದೊಳಗೆ ಇವುಗಳು ಜನ ಸೇವೆಗೆ ಲಭ್ಯವಾಗುವಂತೆ ಕೆಲಸ ನಡೆಯುತ್ತಿದೆ. ಕನಿಷ್ಠ 150 ಕ್ಲಿನಿಕ್‌ಗಳು ಜನರ ಸೇವೆಗೆ ಲಭ್ಯವಿರುವುದು ಖಚಿತವಾಗಿದೆ.

ಸರ್ಕಾರಿ ಕಟ್ಟಡಗಳಲ್ಲಿ ಹಾಗೂ ಬಾಡಿಗೆ ಕಟ್ಟಡಗಳಲ್ಲಿ 1,000-1,200 ಚದರ ಅಡಿ ವಿಸ್ತೀರ್ಣದ ಜಾಗದಲ್ಲಿ ಕ್ಲಿನಿಕ್‌ ರೂಪಿಸಲಾಗುತ್ತಿದೆ. ಪ್ರತಿ ವರ್ಷ ಸಿಬ್ಬಂದಿಗಾಗಿ 138 ಕೋಟಿ ರೂ. ವೆಚ್ಚವಾಗಲಿದೆ. ನಾನ್‌ ರಿಕರಿಂಗ್‌ 17.52 ಕೋಟಿ ರೂ. ಸೇರಿ ಒಟ್ಟು 155 ಕೋಟಿ ರೂ. ಇದಕ್ಕಾಗಿ ವೆಚ್ಚವಾಗಲಿದೆ. ಯೋಗ, ಪ್ರಾಣಾಯಾಮ, ಧ್ಯಾನ, ಆಹಾರ ಪದ್ಧತಿ ಮೊದಲಾದವು ಕುರಿತು ಕ್ಲಿನಿಕ್‌ ಮೂಲಕ ಜಾಗೃತಿ ಮೂಡಿಸುವುದು ನಮ್ಮ ಕ್ಲಿನಿಕ್​​​​ನ ಉದ್ದೇಶವಾಗಿದೆ.

ಯಾರಿಗೆಲ್ಲಾಆರೋಗ್ಯ ಸೇವೆ : ಈ ಕ್ಲಿನಿಕ್‌ಗಳಿಂದ ದುರ್ಬಲ ವರ್ಗದವರಿಗೆ, ಶ್ರಮಿಕರಿಗೆ, ಕೂಲಿ ಕಾರ್ಮಿಕರು ಸೇರಿದಂತೆ ಹಲವರಿಗೆ ಆರೋಗ್ಯ ಸೇವೆ ಸಿಗಲಿದೆ. 10 ರಿಂದ 20 ಸಾವಿರ ಜನಸಂಖ್ಯೆಗೆ ಒಂದರಂತೆ ನಮ್ಮ ಕ್ಲಿನಿಕ್‌ಗಳು ಆರಂಭವಾಗಲಿದೆ.

ಯಾವೆವು ಚಿಕಿತ್ಸೆ ಲಭ್ಯ? : ನಮ್ಮ ಕ್ಲಿನಿಕ್‌ಗಳಲ್ಲಿ 12 ರೀತಿಯ ಆರೋಗ್ಯ ಸೇವೆಗಳು ಲಭ್ಯ ಇರಲಿವೆ. ತಲಾ ಒಬ್ಬ ವೈದ್ಯಾಧಿಕಾರಿ, ನರ್ಸಿಂಗ್‌ ಸ್ಟಾಫ್‌, ಪ್ರಯೋಗಾಲಯ ತಂತ್ರಜ್ಞ, ಡಿ ದರ್ಜೆ ನೌಕರರು ಇರಲಿದ್ದಾರೆ. ಗರ್ಭಿಣಿ ಮತ್ತು ಜನನ ಸಮಯದ ಆರೈಕೆ, ನವಜಾತ ಶಿಶುವಿನ ಸಮಗ್ರ ಆರೈಕೆ, ಬಾಲ್ಯ ಮತ್ತು ಹದಿಹರೆಯದವರಿಗೆ ಸೇವೆಗಳು, ಸಾರ್ವತ್ರಿಕ ಲಸಿಕಾಕರಣದ ಸೇವೆಗಳು, ಕುಟುಂಬ ಕಲ್ಯಾಣ ಗರ್ಭ ನಿರೋಧಕ ಸೇವೆಗಳು, ಸಾಂಕ್ರಾಮಿಕ ರೋಗಗಳ ನಿರ್ವಹಣೆ, ಸಾಮಾನ್ಯ ಮತ್ತು ಸಣ್ಣ ಪ್ರಮಾಣದ ಕಾಯಿಲೆಗಳಿಗೆ ಸೇವೆ ಸಿಗಲಿವೆ.

ಮಧುಮೇಹ, ರಕ್ತದೊತ್ತಡಕ್ಕೆ ಚಿಕಿತ್ಸೆ, ಸಕ್ಕರೆ ಕಾಯಿಲೆ, ದೀರ್ಘಾವಧಿ ಕಾಯಿಲೆಗಳು, ಬಾಯಿ, ಸ್ತನ ಮತ್ತು ಗರ್ಭಕೋಶದ ಕ್ಯಾನ್ಸರ್‌, ಬಾಯಿಯ ಆರೋಗ್ಯ ಸಮಸ್ಯೆಗಳು ಮತ್ತು ಸೇವೆಗಳು, ಕಣ್ಣಿನ ತಪಾಸಣೆ, ಮಾನಸಿಕ ಆರೋಗ್ಯ ಸಂಬಂಧಿಸಿದ ಚಿಕಿತ್ಸೆ ಲಭ್ಯವಿರಲಿದೆ. ವೃದ್ಧಾಪ್ಯ ಆರೈಕೆ, ಪ್ರಯೋಗಾಲಯ ಸೇವೆ, ತುರ್ತು ವೈದ್ಯಕೀಯ ಸೇವೆಗಳು, ಮಾಸಿಕ ಆರೋಗ್ಯ ತಪಾಸಣೆ ಸೇರಿದಂತೆ ಔಷಧಗಳು ಸಂಪೂರ್ಣ ಉಚಿತವಾಗಿರಲಿದೆ.

ಕೆಲಸದ ಸಮಯ: ಸೋಮವಾರದಿಂದ ಶನಿವಾರದವರಗೆ ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 4.30ವರೆಗೂ ಸೇವೆ ಲಭ್ಯ ಇರಲಿದ್ದು, ಭಾನುವಾರ ರಜೆ ಇರುತ್ತದೆ. 14 ಪ್ರಯೋಗ ಶಾಲಾ ಪರೀಕ್ಷೆಗಳು ಇಲ್ಲಿ ಲಭ್ಯವಿದೆ. ಟೆಲಿ ಕನ್ಸಲ್ಟೇಷನ್‌ ಸರ್ವೀಸಸ್‌, ಕ್ಷೇಮ ಚಟುವಟಿಕೆಗಳು ಕೂಡ ಉಚಿತವಾಗಿವೆ. ಸೋಮವಾರದಿಂದ ಶನಿವಾರದವರೆಗೆ ಬೆಳಗ್ಗೆ 9 ರಿಂದ ಸಂಜೆ 4.30ರ ತನಕ ಈ ಸೇವೆ ಲಭ್ಯವಿದ್ದು, ಭಾನುವಾರ ರಜೆ ಇರಲಿದೆ.

ಎಲ್ಲಿ, ಎಷ್ಟು ಕ್ಲಿನಿಕ್‌ಗಳು ಸ್ಥಾಪನೆ ?: ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲು ಯೋಜನೆ ರೂಪಿಸಲಾಗಿದೆ. ಯಾವ ಜಿಲ್ಲೆಯಲ್ಲಿ ಎಷ್ಟು ಕ್ಲಿನಿಕ್​​ಗಳು ಎಂಬ ಮಾಹಿತಿ ಇಲ್ಲಿದೆ. ಬಾಗಲಕೋಟೆ 18, ಬಳ್ಳಾರಿ 11, ವಿಜಯನಗರ 6, ಬೆಳಗಾವಿ 21, ಬೆಂಗಳೂರು ಗ್ರಾಮಾಂತರ 9, ಬೀದರ್‌ 6, ಚಾಮರಾಜನಗರ 3, ಚಿಕ್ಕಬಳ್ಳಾಪುರ 3, ಚಿಕ್ಕಮಗಳೂರು 4, ಚಿತ್ರದುರ್ಗ 1, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 6, ಗದಗ 11, ಹಾಸನ 5, ಹಾವೇರಿ 5, ಕಲಬುರಗಿ 11, ಕೊಡಗು 1, ಕೋಲಾರ 3, ಕೊಪ್ಪಳ 3, ಮಂಡ್ಯ 4, ಮೈಸೂರು 6, ರಾಯಚೂರು 8, ರಾಮನಗರ 3, ತುಮಕೂರು 10, ಉಡುಪಿ 10, ಉತ್ತರ ಕನ್ನಡ 10, ವಿಜಯಪುರ 10, ಯಾದಗಿರಿ 3, ಬೆಂಗಳೂರು (ಬಿಬಿಎಂಪಿ ವ್ಯಾಪ್ತಿಯಲ್ಲಿ) 243 ನಮ್ಮ ಕ್ಲಿನಿಕ್ ಗಳನ್ನು ಆರಂಭಿಸಲಾಗುತ್ತದೆ.

ನಮ್ಮ ಕ್ಲಿನಿಕ್ ಸಿಎಂ ಚಾಲನೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಡಿ.14) ನಮ್ಮ ಕ್ಲಿನಿಕ್ ಗಳನ್ನು ಉದ್ಘಾಟಿಸುವರು. ಆರಂಭದಲ್ಲಿ 114 ಕ್ಲಿನಿಕ್‌ಗಳು ಏಕ ಕಾಲಕ್ಕೆ, ಏಕ ಸಮಯದಲ್ಲಿ ಲೋಕಾರ್ಪಣೆಯಾಗಲಿದೆ. ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಮಯದಲ್ಲಿ 100ಕ್ಕೂ ಹೆಚ್ಚು ಕ್ಲಿನಿಕ್‌ಗಳು ಉದ್ಘಾಟನೆ ಆಗುತ್ತಿರುವುದು ದಾಖಲೆಯಾಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಡಾ ಕೆ ಸುಧಾಕರ್ ತಿಳಿಸಿದ್ದಾರೆ.

ಇದನ್ನೂ ಓದಿ:ಟೀಕೆಗೆ ಅಳುಕಲ್ಲ- ಅಂಜಲ್ಲ; ಆತ್ಮಸಾಕ್ಷಿ, ಸತ್ಯದ ಪರ ಅಧಿಕಾರ: ಸಿಎಂ ಬಸವರಾಜ ಬೊಮ್ಮಾಯಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.