ಬೆಂಗಳೂರು: ನಾಳೆ ಕರಗ ಆಚರಣೆ ಇಲ್ಲ ಎಂದು ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ತಿಳಿಸಿದೆ.
ಕೊರೊನಾ ವೈರಸ್ ಭೀತಿ ಹಿನ್ನೆಲೆ ಕರಗ ಆಚರಣೆಯೂ ಬೇಡ ಎಂದು ಹೈಕೋರ್ಟ್ ಆದೇಶಿಸಿದ ಹಿನ್ನೆಲೆಯಲ್ಲಿ ಧರ್ಮರಾಯಸ್ವಾಮಿ ದೇವಾಲಯದ ಆಡಳಿತ ಮಂಡಳಿ ಈ ನಿರ್ಧಾರಕ್ಕೆ ಬಂದಿದೆ.
ಈ ಕುರಿತು ಬೆಂಗಳೂರು ಕೇಂದ್ರ ವಿಭಾಗದ ಉಪ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆ ಹೊರಡಿಸಿದ್ದಾರೆ. ಕರಗ ಆಚರಣೆ ನಿರ್ಬಂಧಿಸಲಾಗಿದೆ. ಸಾರ್ವಜನಿಕರು ಆಚರಣೆ, ಮೆರವಣಿಗೆ ಸೇರಿ ಯಾವುದೇ ಬಹಿರಂಗ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ ಎಂದು ಆದೇಶಿಸಿದ್ದಾರೆ.