ETV Bharat / state

ಬಿಡುಗಡೆ ಆದ ಮರುಕ್ಷಣದಲ್ಲೇ ಕರವೇ ನಾರಾಯಣ ಗೌಡ ಮತ್ತೆ ಬಂಧನ - ಬಂಧನ

ಕರವೇ ನಾರಾಯಣ ಗೌಡ ಪರಪ್ಪನ ಅಗ್ರಹಾರದಿಂದ ಬಿಡುಗಡೆಯಾದ ಬಳಿಕ ಮತ್ತೆ ಕುಮಾರಸ್ವಾಮಿ ಲೇಔಟ್ ಪೊಲೀಸರು ಬಂಧಿಸಿದ್ದಾರೆ.

ನಾರಾಯಣ ಗೌಡ ಮತ್ತೆ ಬಂಧನ
ನಾರಾಯಣ ಗೌಡ ಮತ್ತೆ ಬಂಧನ
author img

By ETV Bharat Karnataka Team

Published : Jan 9, 2024, 1:29 PM IST

Updated : Jan 10, 2024, 6:38 AM IST

ಬೆಂಗಳೂರು: ನಾಮಫಲಕಗಳಲ್ಲಿ ಶೇಕಡಾ 60ರಷ್ಟು ಕನ್ನಡ ಬಳಕೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ಟಿ.ಎ. ನಾರಾಯಣ ಗೌಡ ಜಾಮೀನು ಮೇಲೆ ಜೈಲಿನಿಂದ ಬಿಡುಗಡೆಯಾಗುತ್ತಿದ್ದಂತೆಯೇ ಮತ್ತೆ ಅವರನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

ನಾರಾಯಣ ಗೌಡ ಜಾಮೀನಿನ ಮೇಲೆ ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಮಂಗಳವಾರ ಬಿಡುಗಡೆಯಾಗಿದ್ದರು. ಆದರೆ, ಸಾರ್ವಜನಿಕ ಆಸ್ತಿ ಹಾನಿ ಆರೋಪದ ಮೇಲೆ 2017ರಲ್ಲಿ ದಾಖಲಾಗಿದ್ದ ಪ್ರಕರಣವೊಂದರ ಸಂಬಂಧ ನ್ಯಾಯಾಲಯದ ವಿಚಾರಣೆಗೆ ಗೈರಾಗಿದ್ದ ಕಾರಣಕ್ಕೆ ಅವರ ವಿರುದ್ಧ ವಾರಂಟ್‌ ಜಾರಿಯಾಗಿತ್ತು. ಇದರಿಂದ ಜೈಲಿನಿಂದ ಬಿಡುಗಡೆಯಾಗುತ್ತಿದಂತೆಯೇ ನಾರಾಯಣ ಗೌಡ ಅವರನ್ನು ನಗರದ ಕುಮಾರಸ್ವಾಮಿ ಲೇಔಟ್ ಠಾಣೆ ಪೊಲೀಸರು ವಶಕ್ಕೆ ಪಡೆದರು. ನಂತರ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ ನಗರದ 30ನೇ ಎಸಿಎಂಎಂ ಕೋರ್ಟ್‌ಗೆ ಹಾಜರುಪಡಿಸಿದ್ದರು. ಅವರನ್ನು ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

ಇದರಿಂದ ನಾರಾಯಣ ಗೌಡ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ಅದರ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ ಬುಧವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ. ಇದಕ್ಕೂ ಮುನ್ನ ವಿಚಾರಣೆ ವೇಳೆ ನಾರಾಯಣ ಗೌಡ ಪರ ವಕೀಲರು, ಪೊಲೀಸರ ನಿರ್ಲಕ್ಷ್ಯದಿಂದ ವಾರಂಟ್‌ ಜಾರಿಯಾಗಿದೆ. ಅರ್ಜಿದಾರರು ಪ್ರತಿ ದಿನ ಎಲ್ಲರಿಗೂ ಸಿಗುವಂತಹ ವ್ಯಕ್ತಿ. ಅವರು ತಲೆಮರೆಸಿಕೊಂಡು ಹೋಗುವವರಲ್ಲ. ವಾರಂಟ್‌ ಜಾರಿಯಾದ ಬಗ್ಗೆ ಅವರಿಗೆ ಮಾಹಿತಿ ಇಲ್ಲ. ಮಾಹಿತಿ ತಿಳಿದಿದ್ದರೆ ಸ್ವತಃ ಅವರೇ ನ್ಯಾಯಾಲಯಕ್ಕೆ ತಪ್ಪದೇ ಹಾಜರಾಗುತ್ತಿದ್ದರು. ಅವರಿಗೆ ಆರೋಗ್ಯ ಸರಿಯಿಲ್ಲದ ಕಾರಣ ಜಾಮೀನು ಮಂಜೂರು ಮಾಡಬೇಕು ಎಂದು ಕೋರಿದರು.

ಈ ವಾದವನ್ನು ಆಕ್ಷೇಪಿಸಿದ ಸರ್ಕಾರಿ ಅಭಿಯೋಜಕರು, ಅರ್ಜಿದಾರರಿಗೆ 2017ರಲ್ಲಿ ಜಾಮೀನು ದೊರೆತಿದೆ. ಬಳಿಕ ನಿಗದಿತ ದಿನಾಂಕಕ್ಕೆ ಕೋರ್ಟ್‌ಗೆ ಹಾಜರಾಗಬೇಕಿತ್ತು. ಆದರೆ, ಜವಾಬ್ದಾರಿಯುತ ಸ್ಥಾನದಲ್ಲಿರುವ ಅರ್ಜಿದಾರರು ಕೋರ್ಟ್‌ಗೆ ಹಾಜರಾಗದೆ, ಜಾಮೀನು ಷರತ್ತುಗಳನ್ನು ಉಲ್ಲಂಘಿಸಿದ್ದಾರೆ. ಕೋರ್ಟ್‌ ವಿಚಾರಣೆಗೆ ಹಾಜರಾಗಬೇಕೆಂಬ ಅರಿವು ಅವರಿಗೆ ಇರಬೇಕಿತ್ತು. ಆದ್ದರಿಂದ ಜಾಮೀನು ನೀಡಬಾರದು ಎಂದು ಕೋರಿದರು.

ಇದಕ್ಕೆ ಉತ್ತರಿಸಿದ ನಾರಾಯಣಗೌಡ ಪರ ವಕೀಲರು, ಅರ್ಜಿದಾರರು ನ್ಯಾಯಾಲಯಕ್ಕೆ ಬಹಳ ಗೌರವ ಕೊಡುವ ವ್ಯಕ್ತಿ. ದೋಷಾರೋಪಪಟ್ಟಿ ಸಲ್ಲಿಕೆಯಾದ ನಂತರ ನ್ಯಾಯಾಲಯ ನೀಡಿದ್ದ ಸಮನ್ಸ್ ಅನ್ನು ಪೊಲೀಸರು ಅರ್ಜಿದಾರರಿಗೆ ತಲುಪಿಸಿಲ್ಲ. ಇದರಿಂದ ನ್ಯಾಯಾಲಯದ ವಿಚಾರಣೆಗೆ ಹಾಜರಾಗಲು ಸಾಧ್ಯವಾಗಿಲ್ಲ. ಹಾಗಾಗಿ, ಜಾಮೀನು ಮಂಜೂರು ಮಾಡಬೇಕು. ಅದಕ್ಕೆ ನ್ಯಾಯಾಲಯ ವಿಧಿಸುವ ಯಾವುದೇ ಷರತ್ತನ್ನು ತಪ್ಪದೇ ಪಾಲಿಸಲಾಗುವುದು ಎಂದು ಭರವಸೆ ನೀಡಿದರು.

ವಾದ, ಪ್ರತಿವಾದ ಆಲಿಸಿ ವಿಚಾರಣೆ ಪೂರ್ಣಗೊಳಿಸಿದ ನ್ಯಾಯಾಲಯ, ಬುಧವಾರ ತೀರ್ಪು ಪ್ರಕಟಿಸುವುದಾಗಿ ತಿಳಿಸಿದೆ. ಇದೇ ವೇಳೆ ಅನಾರೋಗ್ಯಕ್ಕೆ ಗುರಿಯಾಗಿರುವ ಅರ್ಜಿದಾರರಿಗೆ ಜೈಲಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕಲ್ಪಿಸುವಂತೆ ಪೊಲೀಸರಿಗೆ ಕೋರ್ಟ್​​ ಸೂಚಿಸಿದೆ.

ಇದನ್ನೂ ಓದಿ: ಇಂದು ನಾರಾಯಣ ಗೌಡ ಬಿಡುಗಡೆ ಸಾಧ್ಯತೆ: ಗೌಡರ ಪರ ವಕೀಲ ಕುಮಾರ್​ ಹೇಳಿಕೆ

Last Updated : Jan 10, 2024, 6:38 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.