ಬೆಂಗಳೂರು/ಅರಸೀಕೆರೆ: ಕರ್ನಾಟಕ ರಕ್ಷಣಾ ವೇದಿಕೆ ಅಧ್ಯಕ್ಷ ನಾರಾಯಣ ಗೌಡ ಸಹೋದರ ಅರಸೀಕೆರೆ ನಿವಾಸದಲ್ಲಿ ಮಂಗಳವಾರ ಆತ್ಮಹತ್ಯೆಗೆ ಯತ್ನಿಸಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.
ನಾರಾಯಣ ಗೌಡ ಅಣ್ಣ ಪರಮೇಶ್ ಮನೆಯಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಯತ್ನಿಸಿದ್ದು, ಸಾಲಗಾರರ ಕಾಟ ಸಹಿಸಲಾರದೆ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದೆ. ಕೂಡಲೇ ಅರಸಿಕೆರೆಯ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ಬನ್ನೇರುಘಟ್ಟದ ಪೋರ್ಟೀಸ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಇತ್ತೀಚಿನ ಮಾಹಿತಿಯಂತೆ ಫೋರ್ಟಿಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿದ್ದು, ಪರಮೇಶ್ವರ್ ಪರಿಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆಯ ಅಧಿಕಾರಿಗಳು ತಿಳಿಸಿದ್ದಾರೆ.