ಬೆಂಗಳೂರು: ಸಿ.ಎಂ ಬಸವರಾಜ ಬೊಮ್ಮಾಯಿ ಅವರು 2023-24ನೇ ಸಾಲಿನ ಕರ್ನಾಟಕದ ಬಜೆಟ್ ಮಂಡಿಸಿದ್ದಾರೆ. ಇದು ದೂರದೃಷ್ಟಿಯಿಲ್ಲದ, ಕೃಷಿಕರ ಪರವಿಲ್ಲದ ಬಜೆಟ್. ಈ ಬಜೆಟ್‌ನಲ್ಲಿ ಯಾವುದೇ ತಿರುಳು ಇಲ್ಲ. ಏಕೆಂದರೆ ರೈತರ ಆದಾಯ ಹೆಚ್ಚಿಸುವ ಯಾವುದೇ ಕಾರ್ಯಗಳಿಲ್ಲ ಕೃಷಿ ಉತ್ಪನ್ನಗಳ ಖರೀದಿಗೆ ಆವರ್ತ ನಿಧಿ ಮೀಸಲಿಟ್ಟಿಲ್ಲ ಎಂದು ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅಭಿಪ್ರಾಯಪಟ್ಟಿದ್ದಾರೆ. ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಬಡಗಲಪುರ ನಾಗೇಂದ್ರ, ಶೂನ್ಯ ಬಡ್ಡಿತರದ ಸಾಲದ ಮೊತ್ತವನ್ನು 3 ಲಕ್ಷದಿಂದ 5 ಲಕ್ಷಕ್ಕೆ ಏರಿಸಿರುವುದು ಸ್ವಾಗತಾರ್ಹ. ಆದರೆ, ಇದು ಕರ್ನಾಟಕದಲ್ಲಿರುವ ಶೇ87ರಷ್ಟು ಸಣ್ಣ ಇಳುವಳಿದಾರರಿಗೆ ಇದು ಉಪಯೋಗವಾಗುವುದಿಲ್ಲ ಎಂದು ತಿಳಿದಿದ್ದಾರೆ.
ಕೇವಲ ಶೇ6.5ರಷ್ಟು ನೀರಾವರಿಗೆ ಮೀಸಲು: ಒಟ್ಟು ಬಜೆಟ್ 3.07 ಲಕ್ಷ ಕೋಟಿಯಲ್ಲಿ ನೀರಾವರಿಗೆ ಕೇವಲ 6.5% ಅನ್ನು ಮೀಸಲಿಡಲಾಗಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಲ್ಲಿ 14-15% ವರೆಗೆ ಬಜೆಟ್ ಹಣ ಮೀಸಲಿಡುತ್ತಿವೆ. ಕೃಷಿ ತೋಟಗಾರಿಕೆಗೆ ಕೇವಲ 11% ಮೀಸಲಿಡಲಾಗಿದೆ. ಈ ಅಂಕಿ - ಅಂಶಗಳು ಕೃಷಿಕರ ಪರವಾಗಿಲ್ಲ ಎಂಬುದನ್ನು ಸೂಚಿಸುತ್ತವೆ. ಕೃಷಿಕರು ಸಾಲದ ಹೊರೆಯಿಂದ ಹೊರಬರಲು ಯಾವುದೇ ಕ್ರಮಗಳು ಈ ಬಜೆಟ್‌ನಲ್ಲಿ ಪ್ರಸ್ತಾಪ ಇಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಜನಪರ ಜನಸ್ನೇಹಿ ಮುಂಗಡ ಪತ್ರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಸ್ತುತ ಮಂಡಿಸಿರುವ ಕರ್ನಾಟಕ ಸರ್ಕಾರದ ಮುಂಗಡ ಪತ್ರ ರೈತರು, ಮಹಿಳೆಯರು ಮತ್ತು ಎಲ್ಲಾ ವರ್ಗದ ಜನರ ಹಿತಕಾಯುವ ಜನಪರ ಜನಸ್ನೇಹಿ ಮುಂಗಡಪತ್ರವಾಗಿದ್ದು, ಸಾಮಾಜಿಕ ನ್ಯಾಯ ಒದಗಿಸುವ ಬಿಜೆಪಿ ಬದ್ದತೆಯನ್ನು ಮುಂದುವರೆಸಿದ ಅರ್ಥವ್ಯವಸ್ಥೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುವ ಪ್ರಗತಿಪರ ಮುಂದಾಲೋಚನೆಯ ಬಜೆಟ್ ಆಗಿದೆ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಎಂ ಕಾರಜೋಳ ತಿಳಿಸಿದ್ದಾರೆ.
ಬಜೆಟ್ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ನೀರಾವರಿ ವಲಯಕ್ಕೆ 25,000 ಕೋಟಿ ರೂ. ಅನುದಾನ ನೀಡಿರುವುದು ಮತ್ತು ತನ್ಮೂಲಕ 1.50 ಲಕ್ಷ ಹೆಕ್ಟೇರ್ ನೀರಾವರಿ ಸಾಮರ್ಥ್ಯ ಸೃಜಿಸಲು ಅನುವು ಮಾಡಲು ಅನುದಾನ ಒದಗಿಸಲಾಗಿದೆ. ರಾಜ್ಯದ ಎಲ್ಲೆಡೆ ನೀರಾವರಿ ಸೌಲಭ್ಯವನ್ನು ವಿಸ್ತರಿಸಬೇಕು ಎಂಬ ಬಿಜೆಪಿಯ ಬದ್ಧತೆಗೆ ಮುಂಗಡ ಪತ್ರದದಲ್ಲಿ ಪ್ರಸ್ತಾಪಿಸಲಾಗಿದೆ.
ಅಲ್ಲದೇ, ಮಹಿಳೆಯರಿಗೆ ಗೃಹಿಣಿ ಶಕ್ತಿ ಯೋಜನೆ, ವಿದ್ಯಾರ್ಥಿನಿಯರಿಗೆ ಉಚಿತ ಬಸ್ಪಾಸ್ ಸೌಲಭ್ಯ, ನಿರುದ್ಯೋಗಿಗಳಿಗೆ 2,000 ರೂ. ಮಾಶಾಸನ ನೀಡುವ ಯೋಜನೆಗಳು ಕಾರ್ಮಿಕರು ಮತ್ತು ಮಹಿಳಾ ಕಾರ್ಮಿಕರಿಗೆ 500 ರೂ. ಮಾಶಾಸನ, ರೈತರ ಪರವಾಗಿ ʼಭೂ ಸಿರಿ ಯೋಜನೆ, ಕ್ರಮಗಳನ್ನು ಈ ಮುಂಗಡ ಪತ್ರದಲ್ಲಿ ಘೋಷಿಸಲಾಗಿದೆ. ನೇಕಾರರು ಮತ್ತು ಇತರ ಉದ್ಯಮಿಗಳಿಗೆ ಪ್ರೋತ್ಸಾಹ ಧನ ವಿಸ್ತರಿಸುವುದು ಅವರೆಲ್ಲರ ಬದುಕಿನಲ್ಲಿ ಅತ್ಯಂತ ಗುಣಾತ್ಮಕ ಬದಲಾವಣೆಗಳನ್ನು ತರವಲ್ಲ ಬಜೆಟ್ ಪ್ರಮುಖ ಪಾತ್ರ ವಹಿಸಲಿದೆ.
ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಸಿ.ಇ.ಟಿ ಮೂಲಕ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಉಚಿತ ಉನ್ನತ ಶಿಕ್ಷಣ ಒದಗಿಸುವ ಐತಿಹಾಸಿಕ ಕ್ರಾಂತಿಕಾರಕ ಕ್ರಮವು ದೇಶದಲ್ಲಿಯೇ ಮೊಟ್ಟಮೊದಲ ಬಾರಿಗೆ ಉನ್ನತ ಶಿಕ್ಷಣವನ್ನು ಉಚಿತವಾಗಿ ಒದಗಿಸುವ ಮೊದಲ ರಾಜ್ಯ ಸರ್ಕಾರವಾಗಿದೆ. ವಿದ್ಯಾದಾನವನ್ನು ಕಲ್ಪನೆಯನ್ನು ನೈಜ ರೂಪದಲ್ಲಿ ಅನ್ವರ್ಥಕಗೊಳಿಸಲಾಗಿದೆ.
ನಗರ ಮತ್ತು ಗ್ರಾಮೀಣ ಪ್ರದೇಶಗಳಿಗೆ ಬೆಂಗಳೂರು ಮತ್ತು ಇತರ ದೊಡ್ಡ ನಗರಗಳಿಗೆ ತಾರತಮ್ಯ ರಹಿತವಾದ ಅಭಿವೃದ್ಧಿ ಚಟುವಟಿಕೆಗಳಿಗೆ ಅನುವು ಮಾಡಿಕೊಡಲಾಗಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಬಡವರ ಮಕ್ಕಳಿಗೆ ನಿಗಮಗಳ ಮೂಲಕ ಸ್ವಯಂ ಉದ್ಯೋಗ ಸೃಷ್ಟಿಗೆ ಹೆಚ್ಚಿನ ಅನುದಾನ ಒದಗಿಸಿರುವುದು ಉದ್ಯೋಗ ಸೃಷ್ಟಿಗೆ ಅನುಕೂಲ ಕಲ್ಪಿಸಿದೆ.
ಪ್ರಸ್ತು ಬೊಮ್ಮಾಯಿ ಮಂಡಿಸಿರುವ ಬಜೆಟ್ ಅನುಷ್ಟಾನದಿಂದ ಉದ್ಯೋಗ ಸೃಷ್ಟಿ ಸಮಾನತೆಯ ಕಲ್ಪನೆಗಳನ್ನು ನೈಜ ರೂಪದಲ್ಲಿಯ ಅನುಷ್ಟಾನ ಜನರ ಬದುಕಿನಲ್ಲಿ ಗುಣಾತ್ಮಕವಾದ ಬದಲಾವಣೆ ಮತ್ತು ಸಮಗ್ರ ಅಭಿವೃದ್ಧಿಯ ಚಿಂತನೆಗಳನ್ನು ಸಮರ್ಪಕವಾಗಿ ಹಾಗೂ ಪರಿಣಾಮಕಾರಿಯಾಗಿ ಚಿಕಿತ್ಸಕ ಬುದ್ದಿಯಿಂದ ವಿನ್ಯಾಸಗೊಳಿಸಿರುವ 2023-24ನೇ ಸಾಲಿನ ದೂರದೃಷ್ಟಿ ಮುಂಗಡ ಪತ್ರ ಮಂಸಿದ್ದಾರೆ ಎಂದು ಅವರು ಮುಖ್ಯ ಂತ್ರಿಗಳಿಗೆ ಅಭಿನಂದನ ಸಲ್ಲಿಸಿದ್ದಾರೆ.
ಇದನ್ನೂ ಓದಿ: ಅಂಗನವಾಡಿ, ಆಶಾ ಕಾರ್ಯಕರ್ತೆಯರಿಗೆ ಸಿಹಿ ಸುದ್ದಿ: ಗೃಹಿಣಿ ಶಕ್ತಿ ಯೋಜನೆ 500 ಸಹಾಯಧನ