ETV Bharat / state

ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ಪೂರಕ ಪರೀಕ್ಷಾ ದಿನಾಂಕ ಬದಲಾವಣೆ - ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ

ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿ ಪರಿಷ್ಕರಿಸಿ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

Representative image
ಪ್ರಾತಿನಿಧಿಕ ಚಿತ್ರ
author img

By

Published : May 9, 2023, 2:31 PM IST

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ಪರಿಷ್ಕರಣೆಗೊಂಡಿದೆ. ಮೇ 22 ರಿಂದ ಜೂನ್ 2 ರವರೆಗೆ ನಡೆಯಬೇಕಿದ್ದ ಪೂರಕ ಪರೀಕ್ಷೆಗಳು ಮೇ 23 ರಿಂದ ಜೂನ್ 3 ರವರೆಗೆ ನಡೆಯಲಿವೆ.

ಸಿಇಟಿ ಕನ್ನಡ ಭಾಷಾ ಪರೀಕ್ಷೆಯನ್ನು ಮೇ 22 ರಂದು ನಡೆಸುತ್ತಿದ್ದು ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿ 22ರ ಬದಲಾಗಿ 23 ರಿಂದ ಆರಂಭಿಸಿ ಜೂನ್ 3ಕ್ಕೆ ಮುಗಿಸಲಾಗುತ್ತದೆ. ಪರಿಷ್ಕೃತ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣ www.kseab.karnataka.gov.inನಲ್ಲಿ ವೀಕ್ಷಿಸಬಹುದು ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಇದನ್ನೂ ಓದಿ: ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ದಿನಾಂಕ ಪ್ರಕಟ: ಮೇ 22 ರಿಂದ ಜೂನ್ 2 ರವರೆಗೆ ಪರೀಕ್ಷೆ

ಪರೀಕ್ಷಾ ವೇಳಾಪಟ್ಟಿ ಹೀಗಿದೆ..: ಮೇ 23 ರಂದು ಕನ್ನಡ ಪರೀಕ್ಷೆ ನಡೆಯಲಿದ್ದು,‌ 24 ರಂದು ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಗಣಿತ ವಿಷಯದ ಪರೀಕ್ಷೆ ನಡೆಯಲಿದೆ. 25 ರಂದು ಇಂಗ್ಲಿಷ್, ‌26 ರಂದು ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಿತ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ. 27 ರಂದು ಇತಿಹಾಸ ಮತ್ತು ಸಂಖ್ಯಾಶಾಸ್ತ್ರದ ಪರೀಕ್ಷೆ ನಡೆಯಲಿದೆ. 28 ಭಾನುವಾರ ರಜೆ ಇರಲಿದೆ. 29 ರಂದು ಹಿಂದಿ ಪರೀಕ್ಷೆ ನಡೆಯಲಿದೆ.

ಮೇ. 30 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ. ಮೇ 31 ರಂದು ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ ವಿಷಯದ ಪರೀಕ್ಷೆ ನಡೆಯಲಿದೆ. ಜೂನ್ 1 ರಂದು ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು, ಜೂನ್ 2 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ ವಿಷಯದ ಪರೀಕ್ಷೆ ನಡೆಯಲಿದೆ. ಕಡೆಯ ದಿನವಾದ ಜೂನ್ 3 ರಂದು ಅರ್ಥಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದೆ.

ಪ್ರತಿ ದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದೆ. ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

SSLC ಪೂರಕ ಪರೀಕ್ಷೆ ನೋಂದಣಿಗೆ ದಿನಾಂಕ ನಿಗದಿ: ಮೇ 8ರಂದು ಎಸ್ಎಸ್​ಎಲ್​​ಸಿ ಫಲಿತಾಂಶ ಪ್ರಕಟಗೊಂಡಿದ್ದು, ಉತ್ತರ ಪತ್ರಿಕೆಗಳ ಛಾಯಾಪ್ರತಿ, ಮರುಎಣಿಕೆ, ಮರುಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಲು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ದಿನಾಂಕ ಪ್ರಕಟಿಸಿದೆ. ವಿದ್ಯಾರ್ಥಿಗಳು ತಮ್ಮ ಉತ್ತರ ಪತ್ರಿಕೆಗಳ ಫೋಟೋ ಕಾಪಿ ಪಡೆದುಕೊಳ್ಳಲು ಮೇ 14 ರವರೆಗೆ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಮರು ಎಣಿಕೆ ಹಾಗೂ ಮರು ಮೌಲ್ಯಮಾಪನಕ್ಕೆ ಅರ್ಜಿ ಸಲ್ಲಿಸಲು ಮೇ 15 ರಿಂದ 21 ರವರೆಗೆ ಹಾಗೂ ಪೂರಕ ಪರೀಕ್ಷೆಗೆ ನೋಂದಾಯಿಸಿಕೊಳ್ಳಲು ಮೇ 15 ರವರೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಅಧ್ಯಕ್ಷ ರಾಮಚಂದ್ರನ್ ಮಾಹಿತಿ ನೀಡಿದ್ದರು.

ಇದನ್ನೂ ಓದಿ: SSLC ಮರುಮೌಲ್ಯಮಾಪನ, ಪೂರಕ ಪರೀಕ್ಷೆ ನೋಂದಣಿಗೆ ದಿನಾಂಕ ನಿಗದಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.