ETV Bharat / state

ದ್ವಿತೀಯ ಪಿಯುಸಿ ಪೂರಕ ಪರೀಕ್ಷಾ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ - ಬೆಂಗಳೂರು

ದ್ವಿತೀಯ ಪಿಯುಸಿ ಪೂರಕ ಫಲಿತಾಂಶ 2023 ಅನ್ನು ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಪ್ರಕಟಿಸಿದೆ. ಪರೀಕ್ಷೆಯನ್ನು ಬರೆದ ವಿದ್ಯಾರ್ಥಿಗಳು ಅಧಿಕೃತ ವೆಬ್‌ಸೈಟ್‌ನಲ್ಲಿ ತಮ್ಮ ನೋಂದಣಿ ಸಂಖ್ಯೆ ಮತ್ತು ವಿಷಯವನ್ನು ನಮೂದಿಸುವ ಮೂಲಕ ತಮ್ಮ ಫಲಿತಾಂಶಗಳನ್ನು ಪರಿಶೀಲಿಸಬಹುದು..

Representative image
ಪ್ರಾತಿನಿಧಿಕ ಚಿತ್ರ
author img

By

Published : Jun 20, 2023, 12:57 PM IST

ಬೆಂಗಳೂರು: ಮೇ ಮತ್ತು ಜೂನ್ ತಿಂಗಳಿನಲ್ಲಿ ನಡೆದಿದ್ದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯ ಫಲಿತಾಂಶವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ. ಪೂರಕ ಪರೀಕ್ಷೆಯಲ್ಲಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಬಾರಿಯ ಪೂರಕ ಪರೀಕ್ಷೆಯಲ್ಲಿ ಶೇ.32 ರಷ್ಟು ಫಲಿತಾಂಶ ಬಂದಿದೆ.

ಒಟ್ಟು 1,58,881 ವಿದ್ಯಾರ್ಥಿಗಳು ಪೂರಕ ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದರು. ಅದರಲ್ಲಿ 1,57,756 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಇದರಲ್ಲಿ 50,478 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು, ಶೇ.32 ರಷ್ಟು ಫಲಿತಾಂಶ ಬಂದಿದೆ. ಸದ್ಯ ಅಧಿಕೃತ ವೆಬ್ ಸೈಟ್ ನಲ್ಲಿ ಫಲಿತಾಂಶ ವೀಕ್ಷಿಸಬಹುದಾಗಿದೆ. ಇಂದು ಮಧ್ಯಾಹ್ನ 3 ಗಂಟೆಗೆ ಫಲಿತಾಂಶವನ್ನು ಕಾಲೇಜುಗಳಲ್ಲಿ ಪ್ರಕಟಿಸಲಾಗುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಫಲಿತಾಂಶ ಪರಿಶೀಲಿಸುವುದು ಹೇಗೆ?:

  • ಹಂತ 1: karresults.nic.in ನಲ್ಲಿ ಅಧಿಕೃತ ವೆಬ್‌ಸೈಟ್‌ಗೆ ಹೋಗಿ
  • ಹಂತ 2: ಮುಖಪುಟದಲ್ಲಿ ಕರ್ನಾಟಕ ಪಿಯುಸಿ ಪೂರಕ ಫಲಿತಾಂಶ 2023 ಗಾಗಿ ಲಭ್ಯವಿರುವ ಲಿಂಕ್ ಅನ್ನು ಕ್ಲಿಕ್ ಮಾಡಿ
  • ಹಂತ 3: ಹೊಸ ವಿಂಡೋ ಕಾಣಿಸಿಕೊಳ್ಳುತ್ತದೆ. ನಿಮ್ಮ ನೋಂದಣಿ ಸಂಖ್ಯೆ ಮತ್ತು ಇತರ ವಿವರಗಳನ್ನು ನಮೂದಿಸಿ
  • ಹಂತ 4: ನಿಮ್ಮ ಕರ್ನಾಟಕ ಪಿಯುಸಿ ಪೂರಕ ಫಲಿತಾಂಶ 2023 ಅನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ
  • ಹಂತ 5: ಭವಿಷ್ಯದ ಉಲ್ಲೇಖಕ್ಕಾಗಿ ಫಲಿತಾಂಶದ ಪ್ರಿಂಟ್‌ಔಟ್ ಅನ್ನು ಡೌನ್‌ಲೋಡ್ ಮಾಡಿ.

ಪರೀಕ್ಷೆಗೆ ಹಾಜರಾದ 95,645 ಬಾಕಲಕರಲ್ಲಿ 28,901 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.30.22ರಷ್ಟು ಫಲಿತಾಂಶ ಬಂದಿದೆ. ಪರೀಕ್ಷೆಗೆ ಹಾಜರಾದ 62,111 ಬಾಲಕಿಯರಲ್ಲಿ 21,577 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು, ಶೇ.34.74ರಷ್ಟು ಫಲಿತಾಂಶ ಪಡೆದಿದ್ದಾರೆ. ನಗರದ ಪ್ರದೇಶದಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 1,24,660 ವಿದ್ಯಾರ್ಥಿಗಳಲ್ಲಿ 40,757 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.32.69ರಷ್ಟು ಫಲಿತಾಂಶ ಬಂದಿದೆ. ಗ್ರಾಮಾಂತರ ಭಾಗಗದಲ್ಲಿ ಪರೀಕ್ಷೆಗೆ ಹಾಜರಾದ 33,096 ವಿದ್ಯಾರ್ಥಿಗಳಲ್ಲಿ 9,721 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.29.37 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗದಲ್ಲಿ ಪರೀಕ್ಷೆ ಬರೆದ 70,952 ವಿದ್ಯಾರ್ಥಿಗಳಲ್ಲಿ 20,318 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.28.64 ರಷ್ಟು ಫಲಿತಾಂಶ ಬಂದಿದೆ. ವಾಣಿಜ್ಯ ವಿಭಾಗದಲ್ಲಿ ಪರೀಕ್ಷೆ ಬರೆದ 52,511 ವಿದ್ಯಾರ್ಥಿಗಳಲ್ಲಿ 16,924 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.32.23 ರಷ್ಟು ಫಲಿತಾಂಶ ಬಂದಿದೆ. ವಿಜ್ಞಾನ ವಿಭಾಗದಲ್ಲಿ ಪರೀಕ್ಷೆ ಬರೆದ 34,293 ವಿದ್ಯಾರ್ಥಿಗಳಲ್ಲಿ 13,236 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶೇ.38.60 ರಷ್ಟು ಫಲಿತಾಂಶ ಬಂದಿದೆ. ಇದರಲ್ಲಿ ಕನ್ನಡ ಮಾಧ್ಯಮದ ವಿದ್ಯಾರ್ಥಿಗಳು ಶೇ.29.54 ಮತ್ತು ಇಂಗ್ಲಿಷ್ ಮಾಧ್ಯಮದ ವಿದ್ಯಾರ್ಥಿಗಳು ಶೇ.35.10ರಷ್ಟು ಉತ್ತೀರ್ಣರಾಗಿದ್ದಾರೆ.

ಇನ್ನು ಹಾಜರಾತಿ ಕೊರತೆಯಿಂದಾಗಿ ಖಾಸಗಿ ಅಭ್ಯರ್ಥಿಗಳಾಗಿ ನೋಂದಾಯಿಸಲಾದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟವಾಗಿದ್ದು, ಹಾಜರಾದ 268 ಬಾಲಕರಲ್ಲಿ 39 ಬಾಲಕರು ಉತ್ತೀರ್ಣರಾಗಿದ್ದು ಶೇ.14.55 ರಷ್ಟು ಫಲಿತಾಂಶ ಬಂದಿದೆ. ಹಾಜರಾದ 45 ವಿದ್ಯಾರ್ಥಿನಿಯರಲ್ಲಿ 10 ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದು ಶೇ.22.22 ರಷ್ಟು ಫಲಿತಾಂಶ ಬಂದಿದೆ. ಒಟ್ಟು 313 ವಿದ್ಯಾರ್ಥಿಗಳಲ್ಲಿ 49 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು, ಶೇ.15.65 ರಷ್ಟು ರಿಸಲ್ಟ್​ ಬಂದಿದೆ.

ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಗಾಗಿ ಇಂದಿನಿಂದ ಜೂನ್ 26 ರವರೆಗೆ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗಿದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿಯನ್ನು ಜೂನ್ 24 ರಿಂದ ಜೂನ್ 28ರವರೆಗೆ ಇಲಾಖೆಯ ಅಂತರ್ಜಾಲದಲ್ಲಿ ಡೌನ್ ಲೋಡ್ ಮಾಡಿಕೊಳ್ಳಬಹುದಾಗಿದೆ. ಸ್ಕ್ಯಾನಿಂಗ್ ಪ್ರತಿ ತೆಗೆದುಕೊಂಡವರಿಗೆ ಮಾತ್ರ ಮರು ಮೌಲ್ಯಮಾಪನ ಹಾಗೂ ಮರು ಎಣಿಕೆಗೆ ಅರ್ಜಿ ಸಲ್ಲಿಸಲು ಅವಕಾಶವಿದೆ. ಜೂನ್ 24 ರಿಂದ ಜೂನ್ 30ರವರೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಸ್ಕ್ಯಾನಿಂಗ್ ಪ್ರತಿ ಪಡೆಯಲು ಒಂದು ವಿಷಯಕ್ಕೆ 530 ಹಾಗೂ ಮರು ಮೌಲ್ಯಮಾಪನಕ್ಕೆ ಪ್ರತಿ ವಿಷಯಕ್ಕೆ 1670 ರೂ.ಗಳ ಶುಲ್ಕ ನಿಗದಿಪಡಿಸಲಾಗಿದೆ.

ಇದನ್ನೂ ಓದಿ: ದ್ವಿತೀಯ PUC ವಿದ್ಯಾರ್ಥಿಗಳ ಗಮನಕ್ಕೆ: ಪೂರಕ ಪರೀಕ್ಷಾ ದಿನಾಂಕ ಬದಲಾವಣೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.