ETV Bharat / state

ಇಡೀ ವರ್ಷ ಕರ್ನಾಟಕ 50ರ ಸಂಭ್ರಮಾಚರಣೆಗೆ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್ - ವಿಧಾನಸೌಧ

ಇಂದು ವಿಧಾನಸೌಧದ ಬ್ಯಾಂಕ್ವೆಟ್​ ಹಾಲ್​ನಲ್ಲಿ 'ಕರ್ನಾಟಕ 50ರ ಸಂಭ್ರಮ' ಕಾರ್ಯಕ್ರಮ ನಡೆಯಿತು.

ಕರ್ನಾಟಕ 50ರ ಸಂಭ್ರಮ ಕಾರ್ಯಕ್ರಮ
ಕರ್ನಾಟಕ 50ರ ಸಂಭ್ರಮ ಕಾರ್ಯಕ್ರಮ
author img

By ETV Bharat Karnataka Team

Published : Oct 17, 2023, 3:30 PM IST

ಬೆಂಗಳೂರು: ಕರ್ನಾಟಕ ರಾಜ್ಯದ ಪಾಲಿಗೆ ಇಂದು ಐತಿಹಾಸಿಕ ದಿನ. ದೇವರು ನಮಗೆ ಎರಡು ಆಯ್ಕೆಗಳನ್ನು ನೀಡಿದ್ದಾನೆ. ಒಂದು ಕೊಟ್ಟು ಹೋಗುವುದು, ಮತ್ತೊಂದು ಬಿಟ್ಟು ಹೋಗುವುದು. ಅದೇ ರೀತಿ ದೇವರಾಜ ಅರಸು ಅವರು 50 ವರ್ಷಗಳ ಹಿಂದೆ ಮೈಸೂರು ರಾಜ್ಯಕ್ಕೆ ‘ಕರ್ನಾಟಕ’ ಎಂಬ ಹೆಸರನ್ನು ಕೊಟ್ಟಿದ್ದಾರೆ. ಅವರನ್ನು ಸ್ಮರಿಸಿ ಇಂದು ಈ ಕಾರ್ಯಕ್ರಮದ ಆಚರಣೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮೈಸೂರು ರಾಜ್ಯಕ್ಕೆ ಕರ್ನಾಟಕ ಎಂದು ಹೆಸರನ್ನು ಇಟ್ಟು ಇಂದಿಗೆ 50 ವರ್ಷ ತುಂಬಿದೆ. ಈ ಅಂಗವಾಗಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​​ನಲ್ಲಿ ಇಂದು ಹಮ್ಮಿಕೊಂಡಿದ್ದ 'ಕರ್ನಾಟಕ 50ರ ಸಂಭ್ರಮದ ಲಾಂಛನ' ಬಿಡುಗಡೆ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಮ್ಮ ಕೊಟ್ಟಿರುವುದು ಜನ್ಮ. ದೇವರು ಕೊಟ್ಟಿರುವುದು ಬುದ್ಧಿ, ಗುರುಗಳು ಕೊಟ್ಟಿರುವುದು ವಿದ್ಯೆ, ಯಾರು ಕೊಡದೇ ನಮಗೆ ಸಿಕ್ಕಿರುವುದು ಕನ್ನಡ ನಾಡು. ಈ ನಾಡಿನಲ್ಲಿ ನಾವು ಉಸಿರಾಡುತ್ತಿದ್ದೇವೆ ಎಂದು ಡಿಸಿಎಂ ಹೇಳಿದರು.

ಬಾಬಾ ಸಾಹೇಬ್ ಅಂಬೇಡ್ಕರ್ ಅವರು ‘ಇತಿಹಾಸ ಮರೆತವನು ಇತಿಹಾಸ ಸೃಷ್ಟಿಸಲಾರ’ ಎಂದು ಹೇಳಿದ್ದಾರೆ. ಇಂದು ದೇಶದಲ್ಲಿ ಅತಿ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಪಡೆದವರು ಕನ್ನಡದವರು ಎಂದು ಹೆಮ್ಮೆಯಿಂದ ಹೇಳಿಕೊಳ್ಳುತ್ತೇವೆ. ಸಿದ್ದರಾಮಯ್ಯ ಅವರ ಸರ್ಕಾರಕ್ಕೆ, ಸಚಿವ ಶಿವರಾಜ ತಂಗಡಗಿ ಅವರ ನೇತತ್ವದಲ್ಲಿ ಈ ಸಂಭ್ರಮಾಚರಣೆ ಮಾಡುವ ಅವಕಾಶ ಸಿಕ್ಕಿರುವುದೇ ನಮ್ಮ ಭಾಗ್ಯ ಎಂದು ಹೇಳಿದರು. ಕನ್ನಡಕ್ಕಾಗಿ ಕೈ ಎತ್ತು ನಿನ್ನ ಕೈ ಕಲ್ಪವೃಕ್ಷವಾಗುವುದು. ಕನ್ನಡಕ್ಕಾಗಿ ಕೊರಳೆತ್ತು ಪಾಂಚಜನ್ಯ ಮೊಳಗುತ್ತದೆ. ಕನ್ನಡಕ್ಕಾಗಿ ಕಿರುಬೆರಳೆತ್ತಿದರೆ, ಅದೇ ಗೋವರ್ದನ ಗಿರಿಯಾಗುತ್ತದೆ ಎಂದು ವಿಶ್ವಮಾನವ ಕುವೆಂಪು ಅವರು ನಮಗೆ ಸಂದೇಶ ನೀಡಿದ್ದಾರೆ ಎಂದರು.

ವರ್ಷವಿಡೀ ಸಂಭ್ರಮಾಚರಣೆ: ಇಡೀ ವರ್ಷ ಈ ಸಂಭ್ರಮಾಚರಣೆ ಮಾಡಬೇಕು ಎಂದು ನಾವು ನಿರ್ಧರಿಸಿದ್ದೇವೆ. ಇದು ಸರ್ಕಾರದ ಕಾರ್ಯಕ್ರಮದ ಜತೆಗೆ ಜನರ ಕಾರ್ಯಕ್ರಮವಾಗಬೇಕು. ಬೆಳಗಾವಿಯಿಂದ ಚಾಮರಾಜನಗರದವರೆಗೂ ಪ್ರತಿ ಹಳ್ಳಿಯಲ್ಲೂ ಯುವ ಪೀಳಿಗೆ ಈ ಸಂಭ್ರಮ ಆಚರಿಸಬೇಕು. ನವೆಂಬರ್ 1ರಿಂದ ಈ ಸಂಭ್ರಮಾಚರಣೆ ಮಾಡಲು ತೀರ್ಮಾನಿಸಲಾಗಿದ್ದು, ನಾವೆಲ್ಲರೂ ಬಹಳ ಸಂತೋಷದಿಂದ ಈ ಕಾರ್ಯಕ್ರಮದಲ್ಲಿ ದೀಪ ಬೆಳಗಿದ್ದೇವೆ ಎಂದು ನುಡಿದರು.

ಈ ಲಾಂಛನ ಮಾಡಿದ ಹುಡುಗನಿಗೆ ಸಚಿವರು 25 ಸಾವಿರ ಬಹುಮಾನ ಮೊತ್ತ ಘೋಷಿಸಿದ್ದಾರೆ. ಆದರೆ, 25 ಸಾವಿರದ ಕಾಲ ಹೋಯಿತು. ಹೀಗಾಗಿ ಪಾಲಿಕೆ ವತಿಯಿಂದ ನಾನು 1 ಲಕ್ಷವನ್ನು ಬಹುಮಾನವಾಗಿ ನೀಡುತ್ತೇನೆ. ಯುವಕರಿಗೆ ನಾವು ಪ್ರೋತ್ಸಾಹ ನೀಡಬೇಕು.‌ ಈ ವರ್ಷ ರಾಜ್ಯಕ್ಕೆ ಉತ್ತಮ ಮಳೆ ಬೆಳೆ ಆಗಿ ಎಲ್ಲರೂ ನೆಮ್ಮದಿಯಾಗಿ ಬದುಕುವಂತಾಗಲಿ ಎಂದು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಎಚ್ ಕೆ ಪಾಟೀಲ್, ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ, ಸಿಎಂ ರಾಜಕೀಯ ಕಾರ್ಯದರ್ಶಿ ಕೆ ಗೋವಿಂದರಾಜ್, ಎಂಎಲ್ಸಿ ನಾಗರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕಿ ಡಾ. ಧರಣೀದೇವಿ ಮಾಲಗತ್ತಿ ಮತ್ತಿತರರು ಭಾಗವಹಿಸಿದ್ದರು.

ಇದನ್ನೂ ಓದಿ: ದಸರಾ ದರ್ಶಿನಿ: ನವರಾತ್ರಿ ಹಿನ್ನೆಲೆ ದೇವಾಲಯ ದರ್ಶನಕ್ಕೆ ಕೆಎಸ್ಆರ್​ಟಿಸಿಯಿಂದ ವಿಶೇಷ ಪ್ಯಾಕೇಜ್​​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.