ETV Bharat / state

ಹಿಜಾಬ್​ ಪ್ರಕರಣ: ಆಕ್ಷೇಪಾರ್ಹ ಟ್ವೀಟ್, ಬೆದರಿಕೆ.. ನಟ ಚೇತನ್​, ರಹಮತುಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆಗೆ ಅನುಮತಿ - ಗಿರೀಶ್ ಭಾರದ್ವಾಜ್

Contempt of Court Proceedings in Hijab Issue: ಹಿಜಾಬ್ ವಿವಾದ ಪ್ರಕರಣದಲ್ಲಿ ನಟ ಚೇತನ್ ಕುಮಾರ್ ಹಾಗೂ ತಮಿಳುನಾಡಿನ ತೌಹೀದ್ ಜಮಾತ್ ಅಧ್ಯಕ್ಷ ಆರ್. ರಹಮತುಲ್ಲಾ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಕ್ಕೆ ರಾಜ್ಯ ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ ಅನುಮತಿಸಿದ್ದಾರೆ.

High Court
ಹೈಕೋರ್ಟ್
author img

By

Published : Aug 19, 2023, 8:16 PM IST

ಬೆಂಗಳೂರು: ವಿದ್ಯಾರ್ಥಿನಿಯರ ಹಿಜಾಬ್ ಧರಿಸುವ ವಿಚಾರಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆ ನಡೆಸಿದ್ದ ಹೈಕೋರ್ಟ್​ ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಟ್ವೀಟ್ ಮಾಡಿದ ಆರೋಪ ಸಂಬಂಧ ಕನ್ನಡ ಚಿತ್ರನಟ ಹಾಗೂ ಸಾಮಾಜಿಕ ಹೋರಾಟಗಾರ ಚೇತನ್ ಕುಮಾರ್ ಹಾಗೂ ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದ ಆರೋಪದಲ್ಲಿ ತಮಿಳುನಾಡಿನ ತೌಹೀದ್ ಜಮಾತ್ ಅಧ್ಯಕ್ಷ ಆರ್. ರಹಮತುಲ್ಲಾ ಎಂಬುವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ರಾಜ್ಯ ಅಡ್ವೊಕೇಟ್ ಜನರಲ್ ಕೆ. ಶಶಿಕಿರಣ್ ಶೆಟ್ಟಿ ಅನುಮತಿ ನೀಡಿದ್ದಾರೆ.

ನ್ಯಾಯಾಂಗ ಮತ್ತು ನ್ಯಾಯಮೂರ್ತಿಗಳ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಚೇತನ್, ರಹಮತುಲ್ಲಾ, ಸಿಪಿಐ (ಎಂ) ನಾಯಕ ಸೀತಾರಾಂ ಯೆಚೂರಿ ಹಾಗೂ ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಅಧ್ಯಕ್ಷ ಅತಾವುಲ್ಲಾ ಪುಂಜಾಲಕಟ್ಟೆ ವಿರುದ್ಧ ನ್ಯಾಯಾಂಗ ನಿಂದನೆ ಕಾಯ್ದೆ ಸೆಕ್ಷನ್ 15(1)(ಬಿ) ಅಡಿ ಕ್ರಮಕೈಗೊಳ್ಳಲು ಅನುಮತಿಸುವಂತೆ ಬೆಂಗಳೂರಿನ ನಿವಾಸಿ ಗಿರೀಶ್ ಭಾರದ್ವಾಜ್ ಎಂಬುವರು ಅಡ್ವೊಕೇಟ್ ಜನರಲ್​ ಅವರಿಗೆ ಮನವಿ ಸಲ್ಲಿಸಿದ್ದರು. ಹೀಗಾಗಿ ಎಜಿ ಶಶಿಕಿರಣ್ ತಮ್ಮ ವರದಿ ನೀಡಿದ್ದಾರೆ.

ನ್ಯಾಯಾಂಗ ನಿಂದನೆ ಹೇಗೆ?: ಹೈಕೋರ್ಟ್ ತೀರ್ಪಿಗೆ ಸಂಬಂಧಿಸಿದಂತೆ ನಟ ಚೇತನ್ ಎರಡು ವರ್ಷಗಳ ಹಿಂದೆ, ''ನ್ಯಾಯಮೂರ್ತಿ ಕೃಷ್ಣ ದೀಕ್ಷಿತ್ ಅವರು ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಘಾತಕಾರಿ ಹೇಳಿಕೆ ನೀಡಿದ್ದರು. ಈಗ ಅದೇ ನ್ಯಾಯಮೂರ್ತಿ ಶಾಲೆಗಳಲ್ಲಿ ಹಿಜಾಬ್ ಧರಿಸಬಹುದೇ ಅಥವಾ ಇಲ್ಲವೇ ಎಂಬುದನ್ನು ತೀರ್ಮಾನಿಸಲಿದ್ದಾರೆ. ಅವರಿಗೆ ಅಗತ್ಯವಾದ ಸ್ಪಷ್ಟತೆ ಇದೆಯೇ?'' ಎಂದು ಟ್ವೀಟ್​ ಮಾಡಿದ್ದರು. ಈ ಅಂಶ ದುರುದ್ದೇಶಪೂರಿತ ಮತ್ತು ವ್ಯಾಪ್ತಿ ಮೀರಿದ ಮತ್ತು ವಿವಾದಾತ್ಮಕ ಹೇಳಿಕೆಯಾಗಿದ್ದು, ಇದು ನ್ಯಾಯಮೂರ್ತಿಗಳ ಮೇಲಿನ ನಿಷ್ಟಕ್ಷಪಾತತೆಯ ಮೇಲೆ ಜನರಿಗೆ ಸಂಶಯ ಮೂಡಿಸುವಂತಿದೆ. ಇದು ನ್ಯಾಯಮೂರ್ತಿಗಳು ನ್ಯಾಯಿಕ ಕರ್ತವ್ಯ ನಿಭಾಯಿಸಲು ಮುಜುಗರ ಸನ್ನಿವೇಶ ಸೃಷ್ಟಿಸುತ್ತದೆ. ಹೀಗಾಗಿ, ಚೇತನ್ ಮಾಡಿರುವ ಟ್ವೀಟ್​ ಸೆಕ್ಷನ್ 2(ಸಿ) ಅಡಿ ಕ್ರಿಮಿನಲ್ ನ್ಯಾಯಾಂಗ ನಿಂದನೆಗೆ ಸಮನಾಗಿದೆ. ಈ ನೆಲೆಯಲ್ಲಿ ಚೇತನ್ ವಿರುದ್ಧ ಕ್ರಿಮಿನಲ್ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಅರ್ಜಿದಾರರಿಗೆ ಅನುಮತಿಸಿದ್ದೇನೆ ಎಂದು ಅಡ್ವೊಕೇಟ್ ಜನರಲ್ ತಿಳಿಸಿದ್ದಾರೆ.

ಅಲ್ಲದೇ, ''ಹಿಜಾಬ್ ತೀರ್ಪಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿಗಳು ಕೊಲೆಯಾದರೆ ಅವರ ಸಾವಿಗೆ ಅವರೇ ಜವಾಬ್ದಾರಿ. ಕೇಂದ್ರ ಸಚಿವ ಅಮಿತ್ ಶಾ ಸೂಚನೆಯಂತೆ ಹೈಕೋರ್ಟ್ ತೀರ್ಪು ನೀಡಿದೆ'' ಎಂದು ಮದುರೈನಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ತೌಹೀದ್ ಜಮಾತ್​ನ ರಹಮತುಲ್ಲಾ ನೀಡಿದ್ದ ಹೇಳಿಕೆಯು ನ್ಯಾಯಾಂಗಯ ನಿಂದನೆ ಕಾಯಿದೆ ಸೆಕ್ಷನ್ 2(ಸಿ) ಅಡಿ ನಿಂದನೆಗೆ ಸಮನಾಗಿದೆ. ಈ ರೀತಿಯ ಹೇಳಿಕೆಯ ಮೂಲಕ ಅವರು ನ್ಯಾಯಾಂಗದ ಸ್ವಾತಂತ್ರ್ಯ, ಪ್ರಾಮಾಣಿಕತೆ ಮತ್ತು ನ್ಯಾಯಿಕ ಸಾಮರ್ಥ್ಯ ಹಾಗೂ ನ್ಯಾಯಮೂರ್ತಿಗಳ ನಿಷ್ಪಕ್ಷಪಾತ ನಿಲುವಿನ ಮೇಲೆ ದಾಳಿ ಮಾಡುವುದರ ಜೊತೆಗೆ ನ್ಯಾಯಾಂಗದ ಘನತೆಗೆ ಕುಂದುಂಟು ಮಾಡಿದ್ದಾರೆ ಎಂದು ವಿವರಿಸಲಾಗಿದೆ.

ಯೆಚೂರಿ ಹಾಗೂ ಅತಾವುಲ್ಲಾ ಹೇಳಿಕೆ ನ್ಯಾಯಾಂಗ ನಿಂದನೆ ಅಲ್ಲ: ಇದೇ ವೇಳೆ, ಸಿಪಿಐ (ಎಂ) ನಾಯಕ ಸೀತಾರಾಂ ಯೆಚೂರಿ, ''ಹೆಣ್ಣು ಮಕ್ಕಳಿಗೆ ಸಮಾನ ಅವಕಾಶ ಮತ್ತು ಶಿಕ್ಷಣದ ಹಕ್ಕನ್ನು ನಿರಾಕರಿಸುವ ಇದು ತಾರತಮ್ಯದಿಂದ ಕೂಡಿದ ತೀರ್ಪು. ತಾರತಮ್ಯ ರಹಿತವಾಗಿ ಸಮಾನವಾಗಿ ಹಕ್ಕು ಕಲ್ಪಿಸಿರುವುದರಿಂದ ಕೇರಳ ಮಾನವ ಅಭಿವೃದ್ಧಿಯಲ್ಲಿ ಮುಂದಿದೆ'' ಎಂದು ನೀಡಿರುವ ಹೇಳಕೆಯು ನ್ಯಾಯಾಂಗ ನಿಂದನೆ ಕಾಯ್ದೆ ಅಡಿ ಬರುವುದಿಲ್ಲ. ಜೊತೆಗೆ ಸಿಎಫ್ಐ ನಾಯಕ ಅತಾವುಲ್ಲಾ ಪುಂಜಾಲಕಟ್ಟೆ, ''ನ್ಯಾಯಾಲಯವು ತೀರ್ಪು ನೀಡಿದೆಯೇ ವಿನಃ ನ್ಯಾಯದಾನ ಮಾಡಿಲ್ಲ ಎಂದು ನಮಗನ್ನಿಸುತ್ತಿದೆ. ಧಾರ್ಮಿಕ ಪಠ್ಯವನ್ನು ನ್ಯಾಯಾಂಗ ವ್ಯಾಖ್ಯಾನಿಸುವುದು ಎಚ್ಚರಿಕೆ ಗಂಟೆ'' ಎಂದು ಹೇಳಿಕೆ ನೀಡಿದ್ದರು. ಯೆಚೂರಿ ಮತ್ತು ಅತಾವುಲ್ಲಾ ಅವರು ತೀರ್ಪನ್ನು ವಿಮರ್ಶೆ ಮಾಡಿದ್ದಾರೆ. ಆದರೆ, ನ್ಯಾಯಮೂರ್ತಿಗಳ ಮೇಲೆ ದಾಳಿ ನಡೆಸಿಲ್ಲ. ಹೀಗಾಗಿ, ಅವರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕ್ರಿಯೆ ಆರಂಭಿಸಲು ಕೋರಿರುವ ಅರ್ಜಿಯನ್ನು ವಜಾ ಮಾಡಲಾಗಿದೆ ಎಂದು ಶಶಿಕಿರಣ್ ತಮ್ಮ ವರದಿಯಲ್ಲಿ ವಿವರಿಸಿದ್ದಾರೆ.

ಇದನ್ನೂ ಓದಿ: ಹಿಜಾಬ್ ವಿವಾದ: ನ್ಯಾಯಮೂರ್ತಿಗಳಿಗೆ ಕೊಲೆ ಬೆದರಿಕೆ ಹಾಕಿದವನ ವಿರುದ್ಧ ಕಠಿಣ ಕ್ರಮಕ್ಕೆ ಮುಂದಾದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.