ETV Bharat / state

ಬಿಜೆಪಿ ಅಭಿಪ್ರಾಯ ಸಂಗ್ರಹ ಸಭೆ: ಹಾವೇರಿ, ಬೆಳಗಾವಿ ಕ್ಷೇತ್ರಗಳ ಬಗ್ಗೆ ಮಹತ್ವದ ಚರ್ಚೆ - ವಿಧಾನ ಸಭೆ ಚುನಾವಣೆ 2023

ಬೆಂಗಳೂರು ಹೊರವಲಯದಲ್ಲಿ ನಡೆದ ಬಿಜೆಪಿ ಅಭ್ಯರ್ಥಿಗಳ ಆಯ್ಕೆಗೆ ನಡೆದ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಹೈ ಪ್ರೊಫೈಲ್ ಜಿಲ್ಲೆಗಳಾದ ಹಾವೇರಿ ಹಾಗೂ ಬೆಳಗಾವಿಯಲ್ಲಿನ ಕ್ಷೇತ್ರಗಳ ಬಗ್ಗೆ ಚರ್ಚಿಸಲಾಗಿದೆ.

BJP candidate selection process
ಬಿಜೆಪಿ ಅಭಿಪ್ರಾಯ ಸಂಗ್ರಹ ಸಭೆ
author img

By

Published : Apr 2, 2023, 7:52 AM IST

ಬೆಂಗಳೂರು: ನಗರದ ಹೊರವಲಯದ ರೆಸಾರ್ಟ್​‌ನಲ್ಲಿ ಶನಿವಾರ ನಡೆದ ಮೊದಲ ದಿನದ ಅಭ್ಯರ್ಥಿಗಳ ಆಯ್ಕೆ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಪ್ರಮುಖವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತವರು ಜಿಲ್ಲೆ ಹಾವೇರಿ ಹಾಗೂ ರಮೇಶ್ ಜಾರಕಿಹೊಳಿ ತವರು ಜಿಲ್ಲೆ ಬೆಳಗಾವಿ ಕ್ಷೇತ್ರಗಳ ಬಗ್ಗೆ ಸಮಾಲೋಚನೆ ನಡೆಯಿತು. ಸಿಎಂ ಕ್ಷೇತ್ರ ಇರುವ ಹಾವೇರಿ ಜಿಲ್ಲೆಯ ಆರು ಕ್ಷೇತ್ರಗಳ ಬಗ್ಗೆ ಜಿಲ್ಲಾ ಕೋರ್ ಕಮಿಟಿ ಸದಸ್ಯರು ತಮ್ಮ ಅಭಿಪ್ರಾಯ ತಿಳಿಸಿದರು. ಶಿಗ್ಗಾಂವಿಯಲ್ಲಿ ಬೊಮ್ಮಾಯಿ ಅವರನ್ನೇ ಕಣಕ್ಕಿಳಿಸುವಂತೆ ಅವರು ಹೇಳಿದ್ದಾರೆ. ಹಿರೇಕೆರೂರು ಕ್ಷೇತ್ರದಲ್ಲಿ ಬಿ.ಸಿ.ಪಾಟೀಲ್, ಬ್ಯಾಡಗಿ ಕ್ಷೇತ್ರದಲ್ಲಿ ವಿರೂಪಾಕ್ಷಪ್ಪ ಪರ ಒಲವು ವ್ಯಕ್ತವಾಯಿತು.

ಹಾವೇರಿ ಕ್ಷೇತ್ರದ ಶಾಸಕ ನೆಹರು ಓಲೇಕಾರ್​​ಗೆ ಟಿಕೆಟ್ ಕೊಡದಂತೆ ಅಭಿಪ್ರಾಯ ವ್ಯಕ್ತವಾಗಿದೆ. ಓಲೇಕಾರ್ ಅವರು ನಕಲಿ ಬಿಲ್ ಸೃಷ್ಟಿ ಪ್ರಕರಣದಲ್ಲಿ ಅಪರಾಧಿ. ಎರಡು ವರ್ಷ ಜೈಲು ಶಿಕ್ಷೆಗೆ ಒಳಗಾಗಿದ್ದಾರೆ. ಬೇರೆ ಸಮರ್ಥ ಅಭ್ಯರ್ಥಿಗೆ ಟಿಕೆಟ್ ಕೊಡುವಂತೆ ಒತ್ತಾಯಿಸಲಾಗಿದೆ.

ರಾಣೆಬೆನ್ನೂರಿನಲ್ಲಿ ಪರಿಷತ್ ಸದಸ್ಯ ಆರ್.ಶಂಕರ್ ಪರ ಒಲವಿಲ್ಲ ಎನ್ನಲಾಗಿದೆ. ಜಿಲ್ಲಾ ಕೋರ್ ಕಮಿಟಿ ಸದಸ್ಯರು ಆರ್.ಶಂಕರ್ ಗೆಲುವಿನ ಬಗ್ಗೆ ಅನುಮಾನಿಸಿದ್ದಾರೆ. ರಾಣೆಬೆನ್ನೂರು ಕ್ಷೇತ್ರದಲ್ಲಿ ಹಾಲಿ ಶಾಸಕ ಅರುಣ್ ಕುಮಾರ್ ಪೂಜಾರ್ ಪರ 50:50 ಒಮ್ಮತವಿದೆ. ಹಾನಗಲ್ ಕ್ಷೇತ್ರದಲ್ಲಿ ದಿವಂಗತ ಸಿ.ಎಂ.ಉದಾಸಿ ಕುಟುಂಬದವರಿಗೆ ಟಿಕೆಟ್ ಕೊಡುವಂತೆ ಹಲವು ಕೋರ್ ಕಮಿಟಿ ಸದಸ್ಯರು ತಿಳಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಾಹುಕಾರ್ ಪಟ್ಟು: ಶನಿವಾರ ಬೆಳಗಾವಿ ನಗರ, ಗ್ರಾಮಾಂತರ ಜಿಲ್ಲೆಗಳ ಅಭ್ಯರ್ಥಿಗಳ ಆಯ್ಕೆ ಸಂಬಂಧ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹಿಸಲಾಯಿತು. ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡುವಂತೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಒತ್ತಾಯಿಸಿದರು. ಅಥಣಿಯಲ್ಲಿ ಬೆಂಬಲಿಗ ಹಾಲಿ ಶಾಸಕ ಮಹೇಶ್ ಕುಮಟಳ್ಳಿಗೆ ಟಿಕೆಟ್ ಕೊಡಬೇಕೆಂದು ಸಾಹುಕಾರ್ ಪಟ್ಟು ಹಿಡಿದರು. ಲಕ್ಷ್ಮಣ ಸವದಿ ಹೆಸರು ಪ್ರಸ್ತಾಪಿಸದೇ ಬೇರೆ ಯಾರಿಗೂ ಟಿಕೆಟ್ ಕೊಡದಂತೆ ಒತ್ತಾಯ ಮಾಡಿದರು.

ಬೆಳಗಾವಿ ಗ್ರಾಮಾಂತರ ಕ್ಷೇತ್ರದಲ್ಲಿ ತಮ್ಮ ಆಪ್ತ ನಾಗೇಶ ಮನ್ನೋಳ್ಕರ್​ಗೆ ಟಿಕೆಟ್ ಕೊಡುವಂತೆ ರಮೇಶ್ ಜಾರಕಿಹೊಳಿ‌ ಒತ್ತಾಯಿಸಿದ್ದಾರೆ ಎನ್ನಲಾಗುತ್ತಿದೆ. ಲಕ್ಷ್ಮಿ‌ ಹೆಬ್ಬಾಳ್ಕರ್ ಸೋಲಿಸುವ ಹೊಣೆ ನನ್ನದು. ನಾನು ಹೇಳಿದವರಿಗೆ ಟಿಕೆಟ್ ಕೊಡಿ ಅಂತಾ ಸಾಹುಕಾರ್ ಮನವಿ ಮಾಡಿದ್ದಾರೆ. ಕಾಗವಾಡದಲ್ಲಿ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ನೀಡುವಂತೆ ಮನವಿ ಮಾಡಿದ್ದಾರೆ ಎಂಬ ಮಾಹಿತಿ ಇದೆ.

ಶ್ರೀರಾಮುಲು ಪರ ಬ್ಯಾಟಿಂಗ್: ಬಳ್ಳಾರಿ ಜಿಲ್ಲಾ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹ ಸಭೆಯಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ಸಚಿವ ಶ್ರೀರಾಮುಲುಗೆ‌ ಟಿಕೆಟ್ ನೀಡುವ ಪರ ಒಲವು ತೋರಿದ್ದಾರೆ ಎನ್ನಲಾಗಿದೆ. ಈ ಬಾರಿ ಶ್ರೀರಾಮುಲು ಮೊಳಕಾಲ್ಮೂರು ಕ್ಷೇತ್ರ ತೊರೆದು ಬಳ್ಳಾರಿ ಗ್ರಾಮಾಂತರ ಕ್ಷೇತ್ರದಲ್ಲಿ ನಿಲ್ಲುವ ಇಂಗಿತ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಕಸರತ್ತು: ಒಟ್ಟು 20 ಜಿಲ್ಲೆಗಳ ಕೋರ್ ಕಮಿಟಿ ಸದಸ್ಯರ ಅಭಿಪ್ರಾಯ ಸಂಗ್ರಹ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.