ETV Bharat / state

ಕರ್ನಾಟಕ ವಿಧಾನಸಭಾ ಚುನಾವಣೆ 2023: '5ಬಿ' ಕಾರ್ಯತಂತ್ರ ರೂಪಿಸಿದ ಬಿಜೆಪಿ - etv bharat kannada

2018 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿನ ಸಾಧನೆಯನ್ನು ಉತ್ತಮಗೊಳಿಸಲು ಬಿಜೆಪಿ ಐದು ಜಿಲ್ಲೆಗಳತ್ತ ಗಮನ ಹರಿಸಲಿದೆ ಎಂದು ಈಟಿವಿ ಭಾರತ್‌ನ ಅನಾಮಿಕಾ ರತ್ನಾ ವರದಿ ಮಾಡಿದ್ದಾರೆ.

BJP top brass working on Five Bs
BJP top brass working on Five Bs
author img

By

Published : Feb 21, 2023, 1:40 PM IST

ನವದೆಹಲಿ: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯ ಕೇಂದ್ರ ನಾಯಕತ್ವವು 'ಐದು ಬಿ' ಗಳ (Five Bs) ಮೇಲೆ ತನ್ನ ಗಮನ ಕೇಂದ್ರೀಕರಿಸಿದೆ. ಬಾಗಲಕೋಟೆ, ಬೆಳಗಾವಿ, ಬಳ್ಳಾರಿ ಮತ್ತು ಬೀದರ್ ಜಿಲ್ಲೆಗಳು ಮತ್ತು ಬೆಂಗಳೂರು ಗ್ರಾಮಾಂತರ ಮತ್ತು ಬೆಂಗಳೂರು ನಗರ ಜಿಲ್ಲೆ ಇವೇ ಆ ಐದು ಬಿ ಗಳಾಗಿವೆ. 2018 ರ ವಿಧಾನಸಭಾ ಚುನಾವಣೆಯಲ್ಲಿ ಈ ಜಿಲ್ಲೆಗಳಲ್ಲಿ ಬಿಜೆಪಿಯ ಸಾಧನೆ ಅಷ್ಟೊಂದು ಉತ್ತಮವಾಗಿರಲಿಲ್ಲ.

ಪ್ರಧಾನ ಮಂತ್ರಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಪಕ್ಷದ ಪ್ರಚಾರಕ್ಕಾಗಿ ಮೇಲಿಂದ ಮೇಲೆ ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಮೂಲಗಳ ಪ್ರಕಾರ, ನವದೆಹಲಿಯಲ್ಲಿನ ಪಕ್ಷದ ವರಿಷ್ಠರು ಕರ್ನಾಟಕದಾದ್ಯಂತ ಹರಡಿರುವ ಈ ಆರು ಜಿಲ್ಲೆಗಳಲ್ಲಿ ತನ್ನ ಸ್ಥಾನವನ್ನು ಭದ್ರಪಡಿಸಿಕೊಳ್ಳಲು ಕಾರ್ಯತಂತ್ರ ರೂಪಿಸುವಲ್ಲಿ ನಿರತರಾಗಿದ್ದಾರೆ. ಇದರ ಮೂಲಕವೇ ಮತ್ತೆ ಅಧಿಕಾರ ಹಿಡಿಯಬಹುದು ಎಂಬ ಲೆಕ್ಕಾಚಾರ ಬಿಜೆಪಿಯದ್ದಾಗಿದೆ ಎನ್ನಲಾಗಿದೆ.

ಆರು ಜಿಲ್ಲೆಗಳ ಪೈಕಿ ಬಾಗಲಕೋಟೆ ಮತ್ತು ಬೆಳಗಾವಿ ಹೊರತುಪಡಿಸಿದರೆ ಇತರ ಜಿಲ್ಲೆಗಳಲ್ಲಿ ಬಿಜೆಪಿಯ ಸಾಧನೆ ಕಳಪೆಯಾಗಿತ್ತು. 2018 ರಲ್ಲಿ ಬೆಂಗಳೂರು ಗ್ರಾಮಾಂತರ ಮತ್ತು ನಗರ ಪ್ರದೇಶಗಳೆರಡರಲ್ಲೂ ಪಕ್ಷವು 32 ರಲ್ಲಿ ಕೇವಲ 11 ಸ್ಥಾನಗಳನ್ನು ಗೆದ್ದಿದೆ. ನಾಲ್ಕು ಸ್ಥಾನಗಳನ್ನು ಹೊಂದಿರುವ ಬೆಂಗಳೂರು ಗ್ರಾಮಾಂತರದಲ್ಲಿ ತನ್ನ ಖಾತೆ ತೆರೆಯಲು ವಿಫಲವಾಗಿದೆ.

ಬಳ್ಳಾರಿ ಜಿಲ್ಲೆಯ ಒಂಬತ್ತು ಸ್ಥಾನಗಳ ಪೈಕಿ ಕೇವಲ ಮೂರು ಮತ್ತು ಬೀದರ್‌ನ ಆರರಲ್ಲಿ ಒಂದನ್ನು ಮಾತ್ರ ಭಾರತೀಯ ಜನತಾ ಪಕ್ಷ ಗೆದ್ದಿದೆ. ಬಾಗಲಕೋಟೆಯಲ್ಲಿ ಏಳರಲ್ಲಿ ಐದು ಸ್ಥಾನಗಳನ್ನು ಆಗ ಬಿಜೆಪಿ ಗಳಿಸಿತ್ತು. ಬೆಳಗಾವಿಯಲ್ಲಿ 18 ರಲ್ಲಿ 13 ಸ್ಥಾನಗಳನ್ನು ಜಯಿಸಿತ್ತು. ಈ ಆರು ಜಿಲ್ಲೆಗಳಲ್ಲಿ ತನ್ನ ಸ್ಥಾನಗಳನ್ನು ಹೆಚ್ಚಿಸಲು ಬಿಜೆಪಿಯ ವರಿಷ್ಠರು ಕಾರ್ಯತಂತ್ರ ರೂಪಿಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇದು ಅಂತಿಮವಾಗಿ ಪಕ್ಷವು ಅಧಿಕಾರದಲ್ಲಿ ಉಳಿಯಲು ಸಹಾಯ ಮಾಡುತ್ತದೆ ಎನ್ನಲಾಗಿದೆ.

ನಾವು 2023 ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲು ಕೆಲಸ ಮಾಡುತ್ತಿದ್ದೇವೆ. ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ರಾಜ್ಯದಲ್ಲಿ ಪ್ರವಾಸ ಮಾಡುತ್ತಿದ್ದಾರೆ ಮತ್ತು ಮೂರು ದಿನಗಳ ಕಾಲ ಅಲ್ಲಿಯೇ ಇರುತ್ತಾರೆ. ಈ ಸಂದರ್ಭದಲ್ಲಿ ಅವರು ಪ್ರಮುಖ ರಾಜಕೀಯ ನಾಯಕರನ್ನು ಭೇಟಿಯಾಗಲಿದ್ದಾರೆ ಎಂದು ಪಕ್ಷಕ್ಕೆ ನಿಕಟವಾಗಿರುವ ಮೂಲಗಳು ಈಟಿವಿ ಭಾರತ್​ಗೆ ತಿಳಿಸಿವೆ.

ಸಾರ್ವಜನಿಕರೊಂದಿಗೆ ಸಂಪರ್ಕ ಹಾಗೂ ಸಂವಾದ ನಡೆಸಲಿರುವ ನಡ್ಡಾ ಅವರು ವಿವಿಧ ಕ್ಷೇತ್ರಗಳ ಮತದಾರರು, ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರೊಂದಿಗೆ ಚರ್ಚೆ ನಡೆಸಲಿದ್ದಾರೆ. ಮತದಾರರಿಂದ ಪ್ರತ್ಯಕ್ಷವಾಗಿ ಅಭಿಪ್ರಾಯಗಳನ್ನು ಕೇಳಲಿದ್ದಾರೆ. 2023ರಲ್ಲಿ ಕರ್ನಾಟಕ ಹೊರತುಪಡಿಸಿ ಇನ್ನೂ ಕೆಲ ರಾಜ್ಯಗಳ ಚುನಾವಣೆ ನಡೆಯಲಿರುವುದರಿಂದ ಮತ್ತು 2024ರಲ್ಲಿ ಲೋಕಸಭೆ ಚುನಾವಣೆ ಇರುವುದರಿಂದ 2023ನೇ ವರ್ಷ ಬಿಜೆಪಿಗೆ ಬಹಳ ಮಹತ್ವದ ವರ್ಷವಾಗಿದೆ.

ಹೀಗಾಗಿ ಈಗ 2023ರಲ್ಲಿ ನಡೆಯಲಿರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಮುಂದಿನ ಚುನಾವಣೆಗಳ ದೃಷ್ಟಿಯಿಂದ ಬಿಜೆಪಿಗೆ ನಿರ್ಣಾಯಕವಾಗಿದೆ ಎಂಬುದು ವಿಶ್ಲೇಷಕರ ಅಭಿಪ್ರಾಯವಾಗಿದೆ.

ಇದನ್ನೂ ಓದಿ: ಬಿಜೆಪಿ ಸರ್ಕಾರದ ಅಕ್ರಮದ ಕುರಿತು ಚು.ಆಯೋಗಕ್ಕೆ ದೂರು: ಪ್ರಿಯಾಂಕ್​ ಖರ್ಗೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.