ETV Bharat / state

ನಾಳೆಯಿಂದ 3 ದಿನ ಕರ್ನಾಟಕ ವಿಧಾನಸಭೆ ಅಧಿವೇಶನ

ನಾಳೆಯಿಂದ ಮೂರು ದಿನಗಳ ಕಾಲ ಕರ್ನಾಟಕ ವಿಧಾನಸಭೆ ಅಧಿವೇಶನ ನಡೆಯಲಿದೆ.

Vidhana Soudha
ವಿಧಾನಸೌಧ
author img

By

Published : May 21, 2023, 9:41 AM IST

ಬೆಂಗಳೂರು: ಮೇ 22 ರಿಂದ ಮೂರು ದಿನಗಳ ಕಾಲ ವಿಧಾನಸಭೆ ಅಧಿವೇಶನ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದ್ದಾರೆ. ಈ ಸಮಯದಲ್ಲಿ ಹೊಸದಾಗಿ ಚುನಾಯಿತ ಶಾಸಕರು ಪ್ರಮಾಣ ವಚನ ಸ್ವೀಕರಿಸುತ್ತಾರೆ. ನೂತನ ಸಭಾಪತಿ ಆಯ್ಕೆ ಮಾಡಲಾಗುವುದು ಎಂದು ಅವರು ತಿಳಿಸಿದರು.

ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಸರಿಯಾಗಿ ಒಂದು ವಾರದ ನಂತರ ಸಿದ್ದರಾಮಯ್ಯ 2ನೇ ಅವಧಿಗೆ ಮುಖ್ಯಮಂತ್ರಿಯಾಗಿ, ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಉಪ ಮುಖ್ಯಮಂತ್ರಿಯಾಗಿ ಹಾಗೂ 8 ಮಂದಿ ಶಾಸಕರು ಸಚಿವರಾಗಿ ಶನಿವಾರ (ಮೇ 20) ಪ್ರಮಾಣ ವಚನ ಸ್ವೀಕರಿಸಿದರು.

ಇದನ್ನೂ ಓದಿ: ಎರಡನೇ ಬಾರಿಗೆ ರಾಜ್ಯದ ಗದ್ದುಗೆ ಏರಿದ ಅಹಿಂದಾ ರಾಜಕಾರಣಿ: ಪಂಚ ಭರವಸೆ ಈಡೇರಿಸುವತ್ತ ಕಾಂಗ್ರೆಸ್​ ನೂತನ ಸಿಎಂ ಚಿತ್ತ..

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬಳಿಕ ವಿಧಾನಸೌಧಕ್ಕೆ ಆಗಮಿಸಿದ ಸಿಎಂ ಸಿದ್ದರಾಮಯ್ಯ ಮೊದಲ ಸಚಿವ ಸಂಪುಟ ಸಭೆ ನಡೆಸಿದರು. ಇದಾದ ನಂತರ ಸುದ್ದಿಗೋಷ್ಠಿ ನಡೆಸಿ ಸೋಮವಾರದಿಂದ ವಿಶೇಷ ಅಧಿವೇಶನ ನಡೆಸುವ ಕುರಿತು ಮಾಹಿತಿ ನೀಡಿದರು. "ಶಾಸಕರಿಗೆ ಪ್ರಮಾಣ ವಚನ ಬೋಧಿಸಲು ನಾವು ಸೋಮವಾರ, ಮಂಗಳವಾರ ಮತ್ತು ಬುಧವಾರ ಮೂರು ದಿನಗಳ ಕಾಲ ವಿಧಾನಸಭೆಯ ಅಧಿವೇಶನವನ್ನು ಕರೆಯುತ್ತಿದ್ದೇವೆ. ಮೇ 24ರ ಮೊದಲು ಹೊಸ ವಿಧಾನಸಭೆಯನ್ನು ರಚಿಸಬೇಕು. ಹಾಗಾಗಿ ನಾವು ರಾಜ್ಯಪಾಲರಿಗೆ ಮನವಿ ಮಾಡುತ್ತಿದ್ದೇವೆ. ಹಿರಿಯ ಶಾಸಕ ಆರ್.ವಿ. ದೇಶಪಾಂಡೆ ಅವರನ್ನು ಹಂಗಾಮಿ ಸ್ಪೀಕರ್ ಮಾಡಲು ವಿನಂತಿಸಲಾಗಿದೆ. ಅಧಿವೇಶನದಲ್ಲಿ ನೂತನ ಸ್ಪೀಕರ್ ಆಯ್ಕೆ ನಡೆಯಲಿದೆ" ಎಂದು ತಿಳಿಸಿದರು. ಮುಂದಿನ ವಾರದಲ್ಲೇ ಮತ್ತೊಂದು ಸಚಿವ ಸಂಪುಟ ಸಭೆ ಕರೆದು ಐದು ಗ್ಯಾರಂಟಿಗಳ ಬಗ್ಗೆ ಚರ್ಚಿಸಿ ಜಾರಿ ಬಗ್ಗೆ ತಿಳಿಸಲಾಗುವುದು ಎಂದು ಇದೇ ವೇಳೆ ಹೇಳಿದರು.

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಂಪುಟ ಸಭೆಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಡಾ.ಜಿ.ಪರಮೇಶ್ವರ್​, ಕೆ.ಹೆಚ್​.ಮುನಿಯಪ್ಪ, ಕೆ.ಜೆ.ಜಾರ್ಜ್, ಎಂ.ಬಿ.ಪಾಟೀಲ್, ಸತೀಶ್ ಜಾರಕಿಹೊಳಿ, ರಾಮಲಿಂಗಾ ರೆಡ್ಡಿ, ಪ್ರಿಯಾಂಕ್ ಖರ್ಗೆ ಹಾಗೂ ಜಮೀರ್​ ಅಹ್ಮದ್ ಖಾನ್ ಉಪಸ್ಥಿತರಿದ್ದರು.

ಇದನ್ನೂ ಓದಿ: ಸಾಲ ಮಾಡದೇ 'ಪಂಚ ಖಾತರಿ' ಜಾರಿ: ಸಿಎಂ ಸಿದ್ದರಾಮಯ್ಯ ಘೋಷಣೆ

2ನೇ ಬಾರಿಗೆ ಸಿಎಂ ಗದ್ದುಗೆ ಏರಿದ 'ಅಹಿಂದ' ನಾಯಕ: ಹಿಂದುಳಿದ ವರ್ಗಗಳ ನೇತಾರ ಎನಿಸಿಕೊಂಡಿದ್ದ ದೇವರಾಜ್ ಅರಸು ನಂತರ 5 ವರ್ಷ ಪೂರ್ಣಾವಧಿ ಅಧಿಕಾರ ನಡೆಸಿದ ಸಿಎಂ ಎಸಿಕೊಂಡಿರುವ ಸಿದ್ದರಾಮಯ್ಯ ಇದೀಗ ಎರಡನೇ ಬಾರಿಗೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಪಡೆದಿದ್ದಾರೆ. 2013ರಲ್ಲಿ 5 ವರ್ಷ ಆಳ್ವಿಕೆ ಮಾಡಿದ ನಂತರ ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್​ ಮತ್ತೆ ಪೂರ್ಣಬಹುಮತ ಪಡೆದಿದ್ದು, ಸಿದ್ದರಾಮಯ್ಯ ಅವರಿಗೆ ರಾಜ್ಯದ ಸಾರಥ್ಯ ವಹಿಸಲಾಗಿದೆ. 13 ಬಾರಿ ಬಜೆಟ್​ ಮಂಡಿಸಿರುವ ಅನುಭವ ಸಿದ್ದರಾಮಯ್ಯ ಅವರದ್ದು.

ಇದನ್ನೂ ಓದಿ: ಸಿಎಂ ಪದಗ್ರಹಣ: ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿಯಿಂದ ಕಾಂಗ್ರೆಸ್​ನ ಐದು ಗ್ಯಾರಂಟಿಗಳ ಘೋಷಣೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.