ಬೆಂಗಳೂರು: ಕೋವಿಡ್-19 ಅತ್ಯುತ್ತಮ ನಿರ್ವಹಣೆಗಾಗಿ ಇಂಡಿಯಾ ಟುಡೇ ಗ್ರೂಪ್ನ ಹೆಲ್ತ್‌ಗಿರಿ ಪ್ರಶಸ್ತಿ ಕರ್ನಾಟಕದ ಮುಡಿಗೇರಿದ್ದು, ಆರೋಗ್ಯ ಸಚಿವ ಡಾ.ಸುಧಾಕರ್ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಂತಸ ಹಂಚಿಕೊಂಡರು.
ರೇಸ್ ಕೋರ್ಸ್ ರಸ್ತೆಯಲ್ಲಿರುವ ಸಿಎಂ ನಿವಾಸ ರೇಸ್ ವ್ಯೂ ಕಾಟೇಜ್ಗೆ ಆರೋಗ್ಯ ಸಚಿವ ಡಾ.ಸುಧಾಕರ್ ಭೇಟಿ ನೀಡಿದರು. ದಿ ಇಂಡಿಯಾ ಟುಡೇ ಗ್ರೂಪ್ನಿಂದ 'ಕೋವಿಡ್-19 ವಿರುದ್ಧ ಹೋರಾಡುತ್ತಿರುವ ಅತ್ಯುತ್ತಮ ರಾಜ್ಯ' ವಿಭಾಗದಡಿ ಕರ್ನಾಟಕಕ್ಕೆ 'ಇಂಡಿಯಾ ಟುಡೇ ಹೆಲ್ತ್ ಗಿರಿ' ಪ್ರಶಸ್ತಿ ದೊರೆತಿರುವ ಮಾಹಿತಿ ನೀಡಿದರು.
-
ಕೊರೊನಾ ನಿರ್ವಹಣೆಯಲ್ಲಿ ರಾಜ್ಯಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ @BSBommai ಅವರು, ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರಲು ಸಲಹೆ ನೀಡಿದರು.
— Dr Sudhakar K (@mla_sudhakar) October 5, 2021 " class="align-text-top noRightClick twitterSection" data="
ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. pic.twitter.com/uEBetfiG1r
">ಕೊರೊನಾ ನಿರ್ವಹಣೆಯಲ್ಲಿ ರಾಜ್ಯಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ @BSBommai ಅವರು, ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರಲು ಸಲಹೆ ನೀಡಿದರು.
— Dr Sudhakar K (@mla_sudhakar) October 5, 2021
ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. pic.twitter.com/uEBetfiG1rಕೊರೊನಾ ನಿರ್ವಹಣೆಯಲ್ಲಿ ರಾಜ್ಯಕ್ಕೆ ಸಂದಿರುವ ಪ್ರಶಸ್ತಿ ಬಗ್ಗೆ ಹರ್ಷ ವ್ಯಕ್ತಪಡಿಸಿದ ಮುಖ್ಯಮಂತ್ರಿ @BSBommai ಅವರು, ರಾಜ್ಯದ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಸುಧಾರಣೆ ತರಲು ಸಲಹೆ ನೀಡಿದರು.
— Dr Sudhakar K (@mla_sudhakar) October 5, 2021
ರಾಜ್ಯದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಸೇವೆ ಒದಗಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸುವಂತೆ ಸೂಚಿಸಿದರು. pic.twitter.com/uEBetfiG1r
ಕೋವಿಡ್ ಸಮಯದಲ್ಲಿ ಉತ್ತಮವಾಗಿ ಕರ್ತವ್ಯ ನಿರ್ವಹಿಸಿ ಆರೋಗ್ಯ ಇಲಾಖೆ ಪರಿಣಾಮಕಾರಿಯಾಗಿ ಕೆಲಸ ಮಾಡುವಂತೆ ನೋಡಿಕೊಂಡಿದ್ದಕ್ಕೆ ಆರೋಗ್ಯ ಸಚಿವ ಸುಧಾಕರ್ಗೆ ಈ ವೇಳೆ ಸಿಎಂ ಅಭಿನಂದನೆ ಸಲ್ಲಿಸಿದರು.
ಕೇಂದ್ರ ಸರ್ಕಾರ ಲಾಕ್ಡೌನ್ ಘೋಷಿಸುವ ಮುನ್ನವೇ ರಾಜ್ಯದಲ್ಲಿ ಲಾಕ್ಡೌನ್ ಜಾರಿಯಾಗಿತ್ತು. ರಾಜ್ಯದಲ್ಲಿ ಹಿಂದೆ ಏಳೆಂಟು ಸಾವಿರ ಆಕ್ಸಿಜನ್ ಹಾಸಿಗೆಗಳಿದ್ದು, 30 ಸಾವಿರ ಹಾಸಿಗೆಗಳನ್ನು ಅಳವಡಿಸಲಾಗಿದೆ. ಹೋಸದಾಗಿ ವೆಂಟಿಲೇಟರ್ಗಳನ್ನೂ ಅಳವಡಿಸಲಾಗಿದೆ. ದಾಖಲೆಯಂತೆ 4 ಸಾವಿರ ವೈದ್ಯರನ್ನು ನೇಮಿಸಲಾಗಿದೆ.
ಅರೆವೈದ್ಯಕೀಯ, ನರ್ಸ್ ಮೊದಲಾದ ಸಿಬ್ಬಂದಿಯನ್ನು ಅತೀ ಹೆಚ್ಚು ಸಂಖ್ಯೆಯಲ್ಲಿ ನೇಮಕ ಮಾಡಲಾಗಿದೆ. 5T ಕ್ರಮ ಅಳವಡಿಸಿಕೊಂಡು, ತಂತ್ರಜ್ಞಾನ ಬಳಸಿಕೊಂಡು ಕೋವಿಡ್ ನಿಯಂತ್ರಿಸಲಾಗಿದೆ. ಅನೇಕ ಆ್ಯಪ್ಗಳನ್ನು ಬಳಸಿಕೊಳ್ಳಲಾಗಿದೆ. ಈ ಎಲ್ಲಾ ಕ್ರಮಗಳಿಂದ ರಾಜ್ಯಕ್ಕೆ ಈ ಗೌರವ ಬಂದಿದೆ ಎಂದಿದ್ದಾರೆ.
ಇದನ್ನೂ ಓದಿ: ಸರ್ಕಾರಿ ನೌಕರರ ಮೇಲೆ ಶಿಸ್ತು ಕ್ರಮ ಜರುಗಿಸಲು ಕಾಲಮಿತಿ ನಿಗದಿಪಡಿಸಿದ ಸರ್ಕಾರ!