ಬೆಂಗಳೂರು : ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ಧತಿ ಕುರಿತು ಸರ್ಕಾರಕ್ಕೆ ಕನ್ನಡ ಪರ ಸಂಘಟನೆಗಳು ನೀಡಿದ್ದ ಡೆಡ್‌ಲೈನ್ ಮುಕ್ತಾಯಗೊಂಡಿದೆ. ಡಿ. 5ಕ್ಕೆ ಕರ್ನಾಟಕ ಬಂದ್ ಮಾಡೋದು ಬಹುತೇಕ ಖಚಿತವಾಗಿದೆ.
ನವೆಂಬರ್ 30ರೊಳಗೆ ಮರಾಠ ಅಭಿವೃದ್ಧಿ ಪ್ರಾಧಿಕಾರ ರದ್ದು ಮಾಡಬೇಕು ಅಂತಾ ಕನ್ನಡ ಪರ ಸಂಘಟನೆಗಳು ಸರ್ಕಾರಕ್ಕೆ ಡೆಡ್‌ಲೈನ್ ನೀಡಿದ್ದವು. ಡೆಡ್‌ಲೈನ್ ನಿನ್ನೆಗೆ ಮುಕ್ತಾಯಗೊಂಡಿದೆ. ಈ ಹಿನ್ನೆಲೆಯಲ್ಲಿ ಶನಿವಾರ ಕರ್ನಾಟಕ ಬಂದ್ ಮಾಡಲು ಕನ್ನಡ ಪರ ಸಂಘಟನೆಗಳು ಮುಂದಾಗಿವೆ.
ಬಂದ್ಗೆ ಈಗಾಗಲೇ 1 ಸಾವಿರಕ್ಕೂ ಹೆಚ್ಚು ಕನ್ನಡ ಪರ ಸಂಘಟನೆಗಳ ಜೊತೆಗೆ ಆಟೋ, ಟ್ಯಾಕ್ಸಿ, ಓಲಾ, ಊಬರ್ ಸೇರಿ ಹಲವು ಸಂಘಟನೆಗಳು ಬೆಂಬಲ ನೀಡಿವೆ. ಶನಿವಾರ ಸರ್ಕಾರಿ ಬಸ್ಗಳನ್ನು ತಡೆಯಲು ಕನ್ನಡ ಪರ ಸಂಘಟನೆಗಳು ಮುಂದಾಗಿವೆ.
ಜೊತೆಗೆ ರೈಲು, ಮೆಟ್ರೋ ನಿಲ್ದಾಣದ ಕಚೇರಿಗಳಿಗೆ ಮುತ್ತಿಗೆ ಹಾಕಲು ಕನ್ನಡ ಪರ ಸಂಘಟನೆಗಳು ನಿರ್ಧರಿಸಿವೆ. ಬೆಂಗಳೂರಿನ ಟೌನ್ಹಾಲ್ನಿಂದ- ಫ್ರೀಡಂ ಪಾರ್ಕ್‌ವರೆಗೆ ಬೃಹತ್ ಪ್ರತಿಭಟನೆ ರ್ಯಾಲಿ ನಡೆಸಲು ಕನ್ನಡ ಪರ ಸಂಘಟನೆಗಳು ಯೋಜನೆ ರೂಪಿಸಿವೆ.
ಇದನ್ನು ಓದಿ: ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸುಪ್ರೀಂಕೋರ್ಟ್ ಮೆಟ್ಟಿಲೇರುವೆ: ಎಚ್.ವಿಶ್ವನಾಥ್
ಸಾವಿರಾರು ಸಂಖ್ಯೆಯ ಕನ್ನಡಪರ ಹೋರಾಟಗಾರರು ಡಿ. 5ರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲು ಸಿದ್ಧರಾಗಿದ್ದಾರೆ.