ಬೆಂಗಳೂರು: ರೈತ ಸಂಘಟನೆಗಳು ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆ ಸೆ.28 ರಂದು ಬೆಂಗಳೂರು ವಿವಿ ಪರೀಕ್ಷೆಗಳನ್ನು ಮುಂದೂಡಲಾಗಿದೆ.
ಸೆ.25 ಹಾಗೂ ಸೆ.28ರಂದು ನಡೆಯಬೇಕಾದ ಪರೀಕ್ಷೆಗಳನ್ನು ಮುಂದೂಡಿದ್ದು, ಸೆ.26ರಂದು ನಡೆಯುವ ಪರೀಕ್ಷೆ ವೇಳಾಪಟ್ಟಿಯಂತೆ ನಡೆಯಲಿದೆ. ರಾಷ್ಟ್ರೀಯ ಹೆದ್ದಾರಿಗಳು ಬಂದ್ ಆಗಲಿರುವ ಕಾರಣ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪರೀಕ್ಷೆಗಳನ್ನು ಬೆಂಗಳೂರು ವಿವಿ ಮುಂದೂಡಿದೆ.
ಈ ಬಗ್ಗೆ ಬೆಂಗಳೂರು ವಿವಿ ಮೌಲ್ಯ ಮಾಪನ ಕುಲಸಚಿವ ದೇವರಾಜ್ ಮಾಹಿತಿ ನೀಡಿದ್ದಾರೆ.