ಬೆಂಗಳೂರು: ಡಾ. ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ನಾಳೆ ಕರ್ನಾಟಕ ಬಂದ್ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.
ಬಂದ್ನಲ್ಲಿ 600ಕ್ಕೂ ಹೆಚ್ಚು ಕನ್ನಡಪರ ಸಂಘಟನೆಗಳು, ಚಾಲಕರ ಸಂಘಟನೆಗಳು, ರೈತ ಸಂಘಟನೆ, ನೇಕಾರರ ಸಂಘಟನೆ, ಆಟೋ ಚಾಲಕರ ಸಂಘಟನೆ ಸೇರಿದಂತೆ ಹಲವು ಸಂಘಟನೆಗಳಿಂದ ಬಂದ್ಗೆ ಬೆಂಬಲ ನೀಡಿದ್ದು, ಈ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಖಾಕಿ ಕಣ್ಗಾವಲು ಇಡಲಾಗಿದೆ. ಹಾಗೆ ಬೆಂಗಳೂರಿನ ಟೌನ್ ಹಾಲ್, ರೈಲ್ವೆ ನಿಲ್ದಾಣದ ಬಳಿ ಯಾವುದೇ ಪ್ರತಿಭಟನೆಗೆ ಅವಕಾಶ ನೀಡಬಾರದು ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಸೂಚನೆ ನೀಡಿದ್ದಾರೆ.
ಮತ್ತೊಂದೆಡೆ ಸಿಲಿಕಾನ್ ಸಿಟಿಯಲ್ಲಿ ಬಂದ್ ಮಾಡುವವರಿಗೆ ಭಾಸ್ಕರ್ ರಾವ್ ಎಚ್ಚರಿಕೆ ನೀಡಿದ್ದಾರೆ. ಸಿಟಿಯಲ್ಲಿ ಬಂದ್ ಮಾಡುವವರೇ ಅದಕ್ಕೆ ಸಂಪೂರ್ಣ ಜವಾಬ್ದಾರಿ ವಹಿಸಿಕೊಳ್ಳಬೇಕು. ಅಹಿತಕರ ಘಟನೆಗಳಿಗೆ ಅವರೇ ಜವಾಬ್ದಾರರು ಎಂದು ಸೂಚನೆ ನೀಡಿದ್ದಾರೆ. ಯಾವುದೇ ಕಾರಣಕ್ಕೂ ಸಾರ್ವಜನಿಕರಿಗೆ ತೊಂದರೆ ಕೊಡುವಂತಿಲ್ಲ. ಯಾರಿಗೂ ಒತ್ತಾಯ ಪೂರ್ವಕವಾಗಿ ಬಂದ್ನಲ್ಲಿ ಭಾಗಿಯಾಗುವಂತೆ ತಿಳಿಸುವಂತಿಲ್ಲ. ಹಾಗೇನಾದ್ರೂ ಮಾಡಿದ್ರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಖಡಕ್ ವಾರ್ನಿಂಗ್ ನೀಡಿದ್ದಾರೆ.