ETV Bharat / state

ಬಂದ್​ ಹಿನ್ನೆಲೆ: 180 ರೌಡಿಶೀಟರ್​ ವಶಕ್ಕೆ ಪಡೆದ ಪೊಲೀಸರು - ಕರ್ನಾಟಕ ಬಂದ್​ ಹಿನ್ನೆಲೆ

ಕನ್ನಡ ಸಂಘಟನೆಗಳು ಇಂದು ಕರ್ನಾಟಕ ಬಂದ್ ಕರೆ ನೀಡಿದ್ದು, ಮುಂಜಾಗ್ರತಾ ಕ್ರಮವಾಗಿ ಪೊಲೀಸರು 180 ರೌಡಿಶೀಟರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ರೌಡಿಶೀಟರ್​ಗಳನ್ನು ವಶಕ್ಕೆ ಪಡೆದ ಪೊಲೀಸ್​
Police seized 180 rowsheeters
author img

By

Published : Feb 13, 2020, 8:10 AM IST

ಬೆಂಗಳೂರು: ಡಾ.ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ಇಂದು ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದಾರೆ.

rowsheeters
ರೌಡಿಶೀಟರ್​ಗಳು

‌ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ನಗರದಲ್ಲಿ ಯಾವುದೇ ಗಲಭೆಗಳಾದಲ್ಲಿ ಅಂತಹವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಆಯಾ ವಿಭಾಗದ ಡಿಸಿಪಿಗಳಿಗೆ ಸೂಚನೆ ನೀಡಿದ್ದು, ಈ ಸಂಬಂಧ ಉತ್ತರ ವಿಭಾಗ ಡಿಸಿಪಿ ಶಶಿಕುಮಾರ್ ಕಾವೇರಿ ಗಲಭೆ ಮತ್ತು ಪಿಎಫ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಬೆಂಗಳೂರು ಉತ್ತರ ವಿಭಾಗದ 180 ರೌಡಿಶೀಟರ್​ಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

ಇಂದು ನಡೆಯುವ ಬಂದ್​ ವೇಳೆ ಈ ಅಸಾಮಿಗಳು ಅಹಿತಕರ ಘಟನೆ ನಡೆಸುವ ಮಾಹಿತಿ ಇದ್ದು, ಹೀಗಾಗಿ ಪೊಲೀಸರು ಕಾರ್ಯ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.