ETV Bharat / state

ದೆಹಲಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಅತ್ಯಾಧುನಿಕ ಮಾದರಿಯಲ್ಲಿ ಕರ್ನಾಟಕ ಭವನ: ಕಾರಜೋಳ

author img

By

Published : Sep 19, 2020, 1:45 AM IST

ನವದೆಹಲಿಯಲ್ಲಿ ಗುಜರಾತ್ ಭವನ ಮತ್ತು ಮಹಾರಾಷ್ಟ್ರ ಭವನಕ್ಕೆ ಭೇಟಿ ನೀಡಿ, ಆ ಭವನಗಳ ವಿನ್ಯಾಸ, ತಂತ್ರಜ್ಞಾನ, ಗುಣಮಟ್ಟ, ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ಅವರು ಮಾತನಾಡಿದರು.

Karnataka Bhavan in dehli
Karnataka Bhavan in dehli

ಬೆಂಗಳೂರು: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ 120 ಕೋಟಿ ರೂ. ವೆಚ್ಚದಲ್ಲಿ ಕರ್ನಾಟಕ ಭವನ 1 ಕಾವೇರಿ ಅತಿಥಿ ಗೃಹವನ್ನು ನಿರ್ಮಿಸಲು ನಿರ್ಧರಿಸಲಾಗಿದ್ದು, ಅತ್ಯಾಧುನಿಕ ಮಾದರಿಯಲ್ಲಿ ಇದರ ನಿರ್ಮಾಣವಾಗಲಿದೆ ಎಂದು ಡಿಸಿಎಂ ಗೋವಿಂದ್​ ಕಾರಜೋಳ ಮಾಹಿತಿ ನೀಡಿದರು.

ಗುಜರಾತ್ ಭವನ ಮತ್ತು ಮಹಾರಾಷ್ಟ್ರ ಭವನಗಳ ವಿನ್ಯಾಸ ಮಾದರಿಗಳನ್ನು ಅಳವಡಿಸಿಕೊಂಡು ಅತ್ಯಾಧುನಿಕ ಮಾದರಿಯಲ್ಲಿ ಈ ಭವನ ನಿರ್ಮಿಸಲಾಗುವುದು ಎಂದು ಡಿಸಿಎಂ ಗೋವಿಂದ ಎಂ ಕಾರಜೋಳ ತಿಳಿಸಿದರು.

Karnataka Bhavan in dehli
ಕಾರಜೋಳ

ನವದೆಹಲಿಯಲ್ಲಿ ಗುಜರಾತ್ ಭವನ ಮತ್ತು ಮಹಾರಾಷ್ಟ್ರ ಭವನಕ್ಕೆ ಭೇಟಿ ನೀಡಿ, ಆ ಭವನಗಳ ವಿನ್ಯಾಸ, ತಂತ್ರಜ್ಞಾನ, ಗುಣಮಟ್ಟ, ಸೌಲಭ್ಯಗಳನ್ನು ಪರಿಶೀಲಿಸಿದ ನಂತರ ಮಾತನಾಡಿದ ಅವರು, ದೆಹಲಿಯಲ್ಲಿರುವ ವಿವಿಧ ರಾಜ್ಯಗಳ ಭವನಗಳಲ್ಲಿ ಈ ಎರಡು ಭವನಗಳು ಅತ್ಯುತ್ತಮವಾಗಿವೆ. ಆ ಭವನಗಳ ಅಧಿಕಾರಿಗಳೊಂದಿಗೆ ಈ ಕುರಿತು ಚರ್ಚಿಸಲಾಗಿದೆ. ಭವನಗಳ ವಿನ್ಯಾಸ, ತಂತ್ರಜ್ಞಾನ, ಸೌಲಭ್ಯಗಳ ಮಾದರಿಗಳನ್ನು ಅಳವಡಿಸಿಕೊಂಡು ಕರ್ನಾಟಕ ಭವನದ ಕಾವೇರಿ ಅತಿಥಿ ಗೃಹವನ್ನು ಅತ್ಯುತ್ತಮ ವಿನ್ಯಾಸ ಹಾಗೂ‌ ಗುಣಮಟ್ಟದೊಂದಿಗೆ ನಿಗಧಿತ ಅವಧಿಯೊಳಗೆ ಪೂರ್ಣಗೊಳಿಸಲಾಗುವುದು ಎಂದರು.

ಕಾಮಗಾರಿಯ ವಿನ್ಯಾಸ ಹಾಗೂ ಗುಣಮಟ್ಟದ ಮೇಲೆ ತೀವ್ರ ನಿಗಾವಹಿಸಿ, ನಿರಂತರ ಮೇಲ್ವಿಚಾರಣೆವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿರುವುದಾಗಿ ಡಿಸಿಎಂ ಇದೇ ವೇಳೆ ತಿಳಿಸಿದ್ದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.