ETV Bharat / state

ಇಂತಹ ಸದಾರಮೆ ನಾಟಕ ಹೊಸದಲ್ಲ.. HDK ರಾಜಕೀಯ ಜೀವನವೇ ಒಂದು ಡ್ರಾಮಾ, ಅವ್ರ ಕುಟುಂಬವೇ ನಾಟಕ ಕಂಪನಿ : ಬಿಜೆಪಿ ಟ್ವೀಟ್ - ಹೆಚ್​​ಡಿಕೆ ರಾಜಕೀಯ ಜೀವನವೇ ಒಂದು ಡ್ರಾಮ ಅವರ ಕುಟುಂಬವೇ ನಾಟಕ ಕಂಪನಿ ಬಿಜೆಪಿ ಟ್ವೀಟ್

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ ಆದರೆ ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ, ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಹೆಚ್​​ಡಿಕೆ ಅವರ ರಾಜಕೀಯ ವರಸೆ ಎಂದು ಬಿಜೆಪಿ ಟ್ವೀಟ್​​​ನಲ್ಲಿ ಟೀಕಿಸಿದೆ..

ಬಿಜೆಪಿ ಟ್ವೀಟ್
ಬಿಜೆಪಿ ಟ್ವೀಟ್
author img

By

Published : Apr 2, 2022, 5:15 PM IST

ಬೆಂಗಳೂರು : ಕುಮಾರಸ್ವಾಮಿಯ ರಾಜಕೀಯ ಜೀವನವೇ ಒಂದು ಡ್ರಾಮಾ. ಇವರ ಕುಟುಂಬವೇ ದೊಡ್ಡ ಡ್ರಾಮಾ ಕಂಪನಿ ಎಂದು ರಾಜ್ಯ ಬಿಜೆಪಿ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ. ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ, ಹೆಚ್​​ಡಿಕೆ ವಿರುದ್ಧ ಹರಿಹಾಯ್ದಿದೆ.

  • ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ @hd_kumaraswamy ಅವರ ರಾಜಕೀಯ ವರಸೆ.

    ಯಾವ ವಿಚಾರದಲ್ಲಿ ತನ್ನ ಮತಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ.

    ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ "ಪುರುಷಾರ್ಥ" ಅಡಗಿದೆಯೇ?

    — BJP Karnataka (@BJP4Karnataka) April 2, 2022 " class="align-text-top noRightClick twitterSection" data=" ">

ಕುಮಾರಸ್ವಾಮಿಯವರೇ, ಕುರ್ಚಿಗಾಗಿ ಮಾತು ಮುರಿದು ವಚನಭ್ರಷ್ಟ ಎನಿಸಿಕೊಂಡಿದ್ದು ನೆನಪಿದೆಯೇ?. ಉಪಸಭಾಪತಿಯ ಕುರ್ಚಿಗೆ ಗಂಟು ಬಿದ್ದು ಅದು ಸಿಗದಿದ್ದಾಗ ಕಾಂಗ್ರೆಸ್‌ ತ್ಯಜಿಸಿ ಜೆಡಿಎಸ್‌ ಸೇರಿರುವ ವ್ಯಕ್ತಿಯ ಸಮುದಾಯವನ್ನು ಮೆಚ್ಚಿಸಲು ಹೆಚ್‌ಡಿಕೆ ಸರ್ಕಸ್‌ ಮಾಡುತ್ತಿದ್ದಾರೆ. ಇಂತಹ ಸದಾರಮೆ ನಾಟಕ ಕುಮಾರಸ್ವಾಮಿಗೆ ಹೊಸತಲ್ಲ. ಹಿಂದೂ ವಿರೋಧಿ ಜೆಡಿಎಸ್‌ ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ಟ್ವೀಟ್ ಮಾಡಿದೆ.

ಸಾಂದರ್ಭಿಕ ಕೂಸೊಂದು ಹಿಂದುತ್ವದ ಬಗ್ಗೆ ಹಿಂದೂ ಸಂಘಟನೆಗಳಿಗೆ ಪಾಠ ಮಾಡುತ್ತಿದೆ. ಹಿಂದೂ ಸಂಘಟನೆಗಳು ಅವರಂತೆ ಕೇವಲ ತನ್ನ ಕುಟುಂಬದ ಉನ್ನತಿಗಾಗಿ ಕೆಲಸ ಮಾಡುತ್ತಿಲ್ಲ. ಅವರು ಅಧಿಕಾರಕ್ಕಾಗಿ ಕಣ್ಣೀರು ಹಾಕುತ್ತಾರೆ. ಆದರೆ, ಹಿಂದೂ ಸಂಘಟನೆಗಳು ಹಿಂದೂ ಸಮಾಜದ ಕಣ್ಣೀರು ಒರೆಸುವ ಕೆಲಸ ಮಾಡುತ್ತಿವೆ. ಬಾಯಿಗೆ ಬಂದಂತೆ ಮಾತನಾಡುವುದು ಆ ಬಳಿಕ ವಿಷಾದ ವ್ಯಕ್ತಪಡಿಸುವುದು ಸಾಂದರ್ಭಿಕ ಸಿಎಂ ಹೆಚ್​​ಡಿಕೆ ಅವರ ರಾಜಕೀಯ ವರಸೆ ಎಂದು ಟೀಕಿಸಿದೆ.

ಯಾವ ವಿಚಾರದಲ್ಲಿ ತನ್ನ ಮತ ಬ್ಯಾಂಕ್‌ ಗಟ್ಟಿಯಾಗುತ್ತದೋ ಆ ವಿಚಾರವನ್ನು ಗಟ್ಟಿಯಾಗಿ ಹಿಡಿದುಕೊಳ್ಳುವುದು ಇವರ ಜಾಯಮಾನ. ಕುಮಾರಸ್ವಾಮಿ ಅವರೇ, ಗಂಡಸ್ತನದ ಬಗ್ಗೆ ಮಾತನಾಡುವುದರಲ್ಲಿ "ಪುರುಷಾರ್ಥ" ಅಡಗಿದೆಯೇ?. #LuckyDipCM ಕುಮಾರಸ್ವಾಮಿ ಅವರೇ, ಓತಿಕ್ಯಾತಕ್ಕೆ ಬೇಲಿಯ ಗೂಟ ಸಾಕ್ಷಿ ಎಂಬ ಗಾದೆ ಮಾತು ನೆನಪಿಸಿಕೊಳ್ಳಿ. ನಿಮ್ಮ ಜಾತ್ಯಾತೀತ ನಡೆ ಎಂಬುದು ಅವಕಾಶವಾದದ ಪರಿಷ್ಕೃತ ರೂಪ. ಅಧಿಕಾರ ಅನುಭವಿಸಲು ಏನೂ ಬೇಕಾದರೂ ಮಾಡಲು ಸಿದ್ದವಾಗಿರುವವರು ನೀವು. ನಿಮ್ಮಿಂದ ಯಾವ ವ್ಯಕ್ತಿಯೂ, ಯಾವ ಸಂಘಟನೆಯೂ ಪಾಠ ಕಲಿಯಬೇಕಾಗಿಲ್ಲ ಎಂದು ವಾಗ್ದಾಳಿ ನಡೆಸಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.