ETV Bharat / state

ಸಂಪುಟ ಸಭೆ : ಬಹುತೇಕ ಮಾರ್ಚ್​​ 4ಕ್ಕೆ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್, ಕೆಎಎಸ್ ವೈವಾ ಅಂಕ ಕಡಿತ ತಿದ್ದುಪಡಿ ನಿಯಮಕ್ಕೆ ಅಸ್ತು

ಸಂಪುಟ ಸಭೆಯಲ್ಲಿ ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್‌ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು, 2022ಕ್ಕೆ ಅನುಮೋದನೆ ನೀಡಲಾಗಿದೆ. ಇದರ ಮೂಲಕ ಕೆಪಿಎಸ್​ಸಿ ವ್ಯಕ್ತಿತ್ವ ಪರೀಕ್ಷೆ (ವೈವಾ)ದಲ್ಲಿನ ಈಗಿರುವ 50 ಅಂಕವನ್ನು 25ಕ್ಕೆ ಕಡಿತಗೊಳಿಸುವ ನಿಟ್ಟಿನಲ್ಲಿ ನಿಯಮಕ್ಕೆ ತಿದ್ದುಪಡಿ ತರಲಾಗುತ್ತದೆ.‌.

karnataka-budget-2022-23-may-presented-on-march-4
ಬಹುತೇಕ ಮಾರ್ಚ್​​ 4ಕ್ಕೆ ಬಜೆಟ್ ಮಂಡನೆಗೆ ಮುಹೂರ್ತ ಫಿಕ್ಸ್
author img

By

Published : Feb 18, 2022, 4:59 PM IST

ಬೆಂಗಳೂರು : ರಾಜ್ಯ ಬಜೆಟ್ ಅಧಿವೇಶನದ ಬಗ್ಗೆ ಸಂಪುಟ ಸಭೆಯಲ್ಲಿ ಚರ್ಚೆಯಾಗಿದೆ. ಮಾರ್ಚ್ 4 ಅಥವಾ ಮಾರ್ಚ್ 7ಕ್ಕೆ ಬಜೆಟ್ ಸೆಷನ್ ಪ್ರಾರಂಭಿಸುವ ಬಗ್ಗೆ ಸಮಾಲೋಚನೆ ನಡೆದಿದೆ.

ಆದರೆ, ದಿನಾಂಕವನ್ನು ಅಂತಿಮಗೊಳಿಸಿಲ್ಲ. ಬಹುತೇಕ ಮಾರ್ಚ್ 4ರಂದು ಬಜೆಟ್ ಅಧಿವೇಶನ ಪ್ರಾರಂಭವಾಗಲಿದೆ. ಅಂದೇ ಸಿಎಂ ಬೊಮ್ಮಾಯಿ ತಮ್ಮ ಚೊಚ್ಚಲ ಬಜೆಟ್ ಮಂಡಿಸುವ ಸಾಧ್ಯತೆ ಇದೆ.

ಸಿಎಂ ಬೊಮ್ಮಾಯಿ ಬಜೆಟ್ ದಿನಾಂಕ ಘೋಷಣೆ ಮಾಡಲು ನಿರಾಕರಿಸಿದರು. ಸಂಪುಟ ಸಭೆ ಬಳಿಕ ಮಾತನಾಡಿದ ಅವರು, ಎಲ್ಲಾ ಇಲಾಖೆಗಳ ಬಜೆಟ್ ಸಭೆ ಕರೆದಿದ್ದೇನೆ. ಪ್ರಮುಖ ಸಂಘ-ಸಂಸ್ಥೆಗಳ ಜೊತೆ ಚರ್ಚೆ ಮಾಡಬೇಕು. ಬಳಿಕ ದಿನಾಂಕ ನಿರ್ಧಾರ ಮಾಡುತ್ತೇವೆ ಎಂದಷ್ಟೇ ತಿಳಿಸಿದರು.

ಸಂಪುಟ ಸಭೆಯಲ್ಲಿ ಕರ್ನಾಟಕ ಗೆಜೆಟೆಡ್ ಪ್ರೊಬೆಷನರ್‌ (ಸ್ಪರ್ಧಾತ್ಮಕ ಪರೀಕ್ಷೆಗಳ ಮೂಲಕ ನೇಮಕಾತಿ) (ತಿದ್ದುಪಡಿ) ನಿಯಮಗಳು, 2022ಕ್ಕೆ ಅನುಮೋದನೆ ನೀಡಲಾಗಿದೆ. ಇದರ ಮೂಲಕ ಕೆಪಿಎಸ್​ಸಿ ವ್ಯಕ್ತಿತ್ವ ಪರೀಕ್ಷೆ (ವೈವಾ)ದಲ್ಲಿನ ಈಗಿರುವ 50 ಅಂಕವನ್ನು 25ಕ್ಕೆ ಕಡಿತಗೊಳಿಸುವ ನಿಟ್ಟಿನಲ್ಲಿ ನಿಯಮಕ್ಕೆ ತಿದ್ದುಪಡಿ ತರಲಾಗುತ್ತದೆ.‌

ಪ್ರಮುಖ ಸಂಪುಟ ತೀರ್ಮಾನಗಳೇನು?

  1. ಕರ್ನಾಟಕ ರಾಜ್ಯದಲ್ಲಿ 2021-22ನೇ ಸಾಲಿನಿಂದ ಪ್ರಧಾನಮಂತ್ರಿ ಕೃಷಿ ಸಿಂಚಯಿ ಯೋಜನೆ-ಜಲಾನಯನ ಅಭಿವೃದ್ಧಿ ಘಟಕ 2.0 ಯೋಜನೆಯನ್ನು ಅನುಷ್ಠಾನಗೊಳಿಸಲು ಅನುಮೋದನೆ
  2. ಕರ್ನಾಟಕ ಲೋಕಸೇವಾ ಆಯೋಗದಲ್ಲಿ ಖಾಲಿ ಇರುವ ಸದಸ್ಯರ ಸ್ಥಾನಗಳನ್ನು ಭರ್ತಿ ಮಾಡಲು ತೀರ್ಮಾನ
  3. ಕರ್ನಾಟಕ ಸಿವಿಲ್ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) (1ನೇ ತಿದ್ದುಪಡಿ) ನಿಯಮಗಳು, 2022ಕ್ಕೆ ಅನುಮೋದನೆ
  4. ಕರ್ನಾಟಕ ಸುವಿಲ್ ಸೇವೆಗಳು (ನೇರ ನೇಮಕಾತಿ) (ಸಾಮಾನ್ಯ) (2ನೇ ತಿದ್ದುಪಡಿ) ನಿಯಮಗಳು, 2022 ಅನುಮೋದನೆ
  5. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಜಿಲ್ಲಾಸ್ಪತ್ರೆ, ತಾಲೂಕು ಮಟ್ಟದ ಆಸ್ಪತ್ರೆ ಮತ್ತು ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮೆಡಿಕಲ್ ಗ್ಯಾಸ್ ಪೈಪ್‌ಲೈನ್ ಅಳವಡಿಸುವ ಕಾಮಗಾರಿ ಹಾಗೂ ಸಂಬಂಧಿಸಿದ ಸಿವಿಲ್ ಮತ್ತು ವಿದ್ಯುತ್ ಕಾಮಗಾರಿಗಳ ರೂ. 222.41 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
  6. ಮೈಸೂರಿನ ಸಾಂಕ್ರಾಮಿಕ ರೋಗಗಳ ಆಸ್ಪತ್ರೆಯ ಆವರಣದಲ್ಲಿ ಕೈಗೊಂಡಿರುವ ಮೈಸೂರು ಜಿಲ್ಲಾ ಆಸ್ಪತ್ರೆ ನಿರ್ಮಾಣ ಕಾಮಗಾರಿಯ ರೂ. 96.66 ಕೋಟಿಗಳ ಪರಿಷ್ಕೃತ ಅಂದಾಜು ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ
  7. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ಜಕ್ರಿಬೆಟ್ಟು ಎಂಬಲ್ಲಿ ನೇತ್ರಾವತಿ ನದಿಗೆ ಅಡ್ಡಲಾಗಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯ ರೂ. 135.00 ಕೋಟಿ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ
  8. ಬೆಂಗಳೂರು ದಕ್ಷಿಣ ತಾಲೂಕು ಬೆಂಗಳೂರು ಮೈಸೂರು ರಾಷ್ಟ್ರೀಯ ಹೆದ್ದಾರಿ-275ರಿಂದ ಕಂಬಿಪುರ ಕಾರುಬೆಲೆ ಜಿಲ್ಲಾ ಮುಖ್ಯ ರಸ್ತೆಗೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಕಾಮಗಾರಿಯ ರೂ. 13.88 ಕೋಟಿಗಳ ಪರಿಷ್ಕೃತ ಅಂದಾಜು ಪಟ್ಟಿ (ಭೂಸ್ವಾಧೀನ ವೆಚ್ಚ ಸೇರಿ)ಗೆ ಅನುಮೋದನೆ
  9. ಬೆಂಗಳೂರು ಪೂರ್ವ ತಾಲೂಕು, ವರ್ತೂರು ಹೋಬಳಿ, ಮುನ್ನೇಕೊಳಾಲು ಗ್ರಾಮದ ಸ.ನಂ. 41ರಲ್ಲಿ 4-00 ಎಕರೆ ಜಮೀನನ್ನು ಶ್ರೀ ಕಂಚಿ ಕಾಮಕೋಟಿ ಮೆಡಿಕಲ್ ಟ್ರಸ್ಟ್​ಗೆ ಮಂಜೂರು
  10. ರಾಯಚೂರು ತಾಲೂಕಿನ ಬಿಚ್ಚಾಲಿ ಗ್ರಾಮದ ಸರ್ವೆ ನಂ. 35/*/* ವಿಸ್ತೀರ್ಣ 01-02 ಎಕರೆ ಮತ್ತು ಸರ್ವೆ ನಂ. 37/*/* ವಿಸ್ತೀರ್ಣ 01-31 ಎಕರೆ ಒಟ್ಟು 02-33 ಎಕರೆ ಸರ್ಕಾರಿ ಜಮೀನನ್ನು ಶ್ರೀ ರಾಘವೇಂದ್ರ ಸ್ವಾಮಿ ಮಠ, ನಂಜನಗೂಡು, ಮಂತ್ರಾಲಯ ಕ್ಯಾಂಪ್​ಗೆ ಮಂಜೂರು
  11. ಕರ್ನಾಟಕ ಸಾಮಾನ್ಯ ಸೇವೆ (ಅಭಿವೃದ್ಧಿ ಶಾಖೆ ಮತ್ತು ಸ್ಥಳೀಯ ಆಡಳಿತ ಶಾಖೆ) (ವೃಂದ ಮತ್ತು ನೇಮಕಾತಿ) (ತಿದ್ದುಪಡಿ) ನಿಯಮಗಳು, 2021ಕ್ಕೆ ಅನುಮೋದನೆ
  12. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಮಲ್ಲಪ್ಪನಹಳ್ಳಿ ಮತ್ತು ಇತರೆ 19 ಜನವಸತಿಗಳಿಗೆ ಜಲ್ ಜೀವನ್ ಮಿಷನ್ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 10.74 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ
  13. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಿಕ್ಯೂಡ್ ಮತ್ತು ಇತರೆ 7 ಗ್ರಾಮಗಳಿಗೆ (17 ಜನವಸತಿಗಳು) ಜಲ್ ಜೀವನ್ ಮಿಷನ್ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 35 ಕೋಟಿಗಳ ಮೊತ್ತದ ಯೋಜನೆಯನ್ನು ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡುವುದು
  14. ಹಾಸನ ಜಿಲ್ಲೆಯ ಹೊಳೆನರಸೀಪುರ ತಾಲೂಕಿನ ಆನೆಕನ್ನಂಬಾಡಿ ಮತ್ತು ಇತರೆ 55 ಜನವಸತಿಗಳಿಗೆ ಜಲ್ ಜೀವನ್ ಮಿಷನ್ ಯೋಜನೆ ಅಡಿ ಬಹುಗ್ರಾಮ ಕುಡಿಯುವ ನೀರು ಸರಬರಾಜಿನ ರೂ. 30.23 ಕೋಟಿಗಳ ಮೊತ್ತದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ
  15. ಕರ್ನಾಟಕ ರಾಜ್ಯ ಸಮಾಜ ಕಲ್ಯಾಣ ಇಲಾಖೆ (ಪರಿಶಿಷ್ಟ ಜಾತಿ ಕಲ್ಯಾಣ) ಸೇವೆಗಳು (ವೃಂದ ಮತ್ತು ನೇಮಕಾತಿ) ನಿಯಮಗಳು, 2022ಗೆ ಅನುಮೋದನೆ
  16. ನಂದಿ ಬೆಟ್ಟದಲ್ಲಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಯೋಜನೆಯ ವಿನ್ಯಾಸ, ನಿರ್ಮಾಣ, ಹಣಕಾಸು, ಕಾರ್ಯಾಚರಣೆ ಮತ್ತು ವರ್ಗಾವಣೆ (DBFOT) ಆಧಾರದ ಮೇಲೆ ರೂ. 93.40 ಕೋಟಿಗಳ ಅಂದಾಜು ವೆಚ್ಚದ ಪ್ರಯಾಣಿಕರ ರೋಪ್ ವೇಗಳ ಅಭಿವೃದ್ಧಿ ಮತ್ತು ಕಾರ್ಯಾಚರಣೆಗಾಗಿ ಖಾಸಗಿ ಪಾಲುದಾರರ ಆಯ್ಕೆಗೆ ಟೆಂಡರ್​​ ಆಹ್ವಾನಿಸಲು ಆಡಳಿತಾತ್ಮಕ ಅನುಮೋದನೆ
  17. ಮಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿನ 60 ವಾರ್ಡ್‌ಗಳಲ್ಲಿ ಪ್ರಾಥಮಿಕ ಕಸ ಸಂಗ್ರಹಣೆ ಮತ್ತು ಸಾಗಾಣಿಕೆ ಕಾರ್ಯವನ್ನು ನಿರ್ವಹಿಸುತ್ತಿರುವ ಮೆ| ಆಂಟೋನಿ ವೇಸ್ಟ್ ಹ್ಯಾಂಡಲಿಂಗ್ ಸೆಲ್ ಪ್ರೈ ಲಿಮಿಟೆಡ್, ಮುಂಬೈ ಇವರ ಗುತ್ತಿಗೆ ಅವಧಿಯನ್ನು ವಿಸ್ತರಿಸಲು ತೀರ್ಮಾನ
  18. ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಹೂವಿನ ಹಡಗಲಿ ಪಟ್ಟಣದ ಸ.ನಂ. 269/ಎ2ಬಿರಲ್ಲಿನ 0.50 ಎಕರೆ ಜಮೀನನ್ನು ತಾಲೂಕು ಕುರುಬರ ಸಂಘದ ಅಧ್ಯಕ್ಷರ ಹೆಸರಿಗೆ ಮಂಜೂರು ಮಾಡಿ ಖಾತೆ ಮಾಡಲು ಅನುಮೋದನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.