ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇಂದು ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ವಿದ್ಯಾರ್ಥಿಗಳಿಗೆ ವಿಶೇಷ ಉಡುಗೊರೆ ನೀಡಿದ್ದಾರೆ. ಕೆಪಿಎಸ್ಸಿ, ಯುಪಿಎಸ್ಸಿ, ಎಸ್ಎಸ್ಸಿ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗಾಗಿ ಉಚಿತವಾಗಿ ಆನ್ಲೈನ್ ಕೋಚಿಂಗ್ ನೀಡಲಾಗುವುದು ಎಂದು ಘೋಷಿಸಿದರು.
ಬಜೆಟ್ ಮಂಡನೆ ವೇಳೆ ಮಾಹಿತಿ ನೀಡಿರುವ ಸಿಎಂ ರಾಜ್ಯದಲ್ಲಿ ಬ್ಯಾಂಕಿಂಗ್, ರೈಲ್ವೇ, ಸಿಡಿಎಸ್, ನೀಟ್, ಜೆಇಇ ಸೇರಿದಂತೆ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ರಾಜ್ಯ ಸರ್ಕಾರದಿಂದ ಉಚಿತವಾಗಿ ಆನ್ಲೈನ್ ಕೋಚಿಂಗ್ ನೀಡುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಬಜೆಟ್: ರಾಜಧಾನಿ ಬೆಂಗಳೂರು ಮೇಲೆ ಸಿಎಂ ಬೊಮ್ಮಾಯಿ ಕೃಪಾಕಟಾಕ್ಷ
ವಿದ್ಯಾರ್ಥಿ ಮಾರ್ಗದರ್ಶಿನಿ ಎಂಬ ಹೊಸ ಯೋಜನೆಯಡಿ ರಾಜ್ಯದ ವಿದ್ಯಾರ್ಥಿಗಳಿಗೆ ಆನ್ಲೈನ್ ಮೂಲಕ ಉಚಿತ ಕೋಚಿಂಗ್ ನೀಡುವುದಾಗಿ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ಪ್ರಮುಖವಾಗಿ ರಾಜ್ಯದ ಪ್ರತಿವೊಂದು ತಾಲೂಕುಗಳಲ್ಲಿ ನೀಟ್ ಪರೀಕ್ಷೆಗೆ ತರಬೇತಿ ನೀಡುವುದಾಗಿ ತಿಳಿಸಿದ್ದಾರೆ.