ಬೆಂಗಳೂರು: ಸಿಎಂ ಆಗಿ ಚೊಚ್ಚಲ ಬಜೆಟ್ ಮಂಡನೆ ಮಾಡುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪಿಯು ಉಪನ್ಯಾಸಕರಿಗೆ ಬಂಪರ್ ಕೊಡುಗೆ ನೀಡಿದ್ದಾರೆ.
- ಪಿಯು ಉಪನ್ಯಾಸಕರಿಗೆ ನೀಡುವ ಗೌರವ ಧನವನ್ನು 32 ಸಾವಿರಕ್ಕೆ ಏರಿಕೆ ಮಾಡುವ ಮೂಲಕ ಸಿಎಂ ಬೊಮ್ಮಾಯಿ ಸಿಹಿ ಸುದ್ದಿಯನ್ನು ನೀಡಿದ್ದಾರೆ.
- ಅಲ್ಲದೇ, ಹೊಸ ರೀತಿಯಲ್ಲಿ 7 ವಿಶ್ವ ವಿದ್ಯಾಲಯಗಳ ಸ್ಥಾಪನೆ ಮಾಡಲು ಸರ್ಕಾರ ನಿರ್ಧರಿಸಿದೆ. ಬೆಳಗಾವಿ, ಬಳ್ಳಾರಿಯಲ್ಲಿ ಹೊಸ ಕೃಷಿ ಕಾಲೇಜು ಸ್ಥಾಪನೆಗೆ ಅನುದಾನ ಮೀಸಲಿಟ್ಟಿದ್ದಾರೆ.
ಕೃಷಿ ವಲಯಕ್ಕೆ 33,700 ಕೋಟಿ ರೂ:
- ಕೃಷಿ ವಲಯಕ್ಕೆ ಬಜೆಟ್ನಲ್ಲಿ 33,700 ಕೋಟಿ ರೂ. ಅನುದಾನವನ್ನು ನೀಡಿದ್ದಾರೆ.
- ಮಹಿಳಾ ಸಬಲೀಕರಣ, ಕ್ಷೇಮಾಭಿವೃದ್ಧಿಗೆ 43,188 ಕೋಟಿ ರೂ., ಹೊಸ ಯೋಜನೆಯಾದ 'ರೈತ ಶಕ್ತಿ ಯೋಜನೆ'ಗೆ 500 ಕೋಟಿ ರೂ., ಪ್ರವಾಹದಿಂದ ಹಾನಿಯಾದ ಕೆರೆಗಳ ಅಭಿವೃದ್ಧಿಗೆ 200 ಕೋಟಿ ರೂ., ಸಂಸ್ಕೃತಿ, ಪರಂಪರೆ ಮತ್ತು ನೈಸರ್ಗಿಕ ಸಂಪನ್ಮೂಲ ಸಂರಕ್ಷಣೆಗೆ 3,102 ಕೋಟಿ ರೂ. ಹಾಗೂ ಆಡಳಿತ ಸುಧಾರಣೆ ಮತ್ತು ಸಾರ್ವಜನಿಕ ಸೇವೆಗೆ 56,710 ಕೋಟಿ ರೂ. ಬಜೆಟ್ನಲ್ಲಿ ಮೀಸಲಿರಿಸಿದ್ದಾರೆ.
ಇದನ್ನೂ ಓದಿ: 2022-23 ನೇ ಸಾಲಿನ ರಾಜ್ಯ ಬಜೆಟ್ ಮುಖ್ಯಾಂಶಗಳ ಮಾಹಿತಿ..