ETV Bharat / state

Karnataka Budget 2023: ವಿವಾಹ ನೋಂದಣಿ ಇನ್ನು ಸುಲಭ.. ಆನ್​ಲೈನ್​ನಲ್ಲೂ ವಿವಾಹ ನೋಂದಣಿಗೆ ಅವಕಾಶ.. - ಮುಖ್ಯಮಂತ್ರಿ ಸಿದ್ದರಾಮಯ್ಯ

ವಿವಾಹ ನೋಂದಣಿಗೆ ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ರಾಜ್ಯ ಸರ್ಕಾರ ಕ್ರಮ ಕೈಗೊಂಡಿದೆ. ಇನ್ಮುಂದೆ ಆನ್​ಲೈನ್​ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಬಜೆಟ್​ನಲ್ಲಿ ಘೋಷಿಸಲಾಗಿದೆ.

Karnataka Budget 2023: online marriage registration
Karnataka Budget 2023: ವಿವಾಹ ನೋಂದಣಿಗೆ ಸಬ್ ರಿಜಿಸ್ಟರ್ ಕಚೇರಿಗೆ ಅಲೆದಾಟ ಬೇಡ.. ಆನ್​ಲೈನ್​ನಲ್ಲೂ ಅವಕಾಶ
author img

By

Published : Jul 7, 2023, 4:39 PM IST

ಬೆಂಗಳೂರು: ರಾಜ್ಯ ಸರ್ಕಾರವು ಇಂದು ಬಹು ನಿರೀಕ್ಷಿತ ಬಜೆಟ್ ಮಂಡಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 14ನೇ ಹಾಗೂ ದಾಖಲೆಯ ಆಯವ್ಯಯ ಮಂಡಿಸಿದ್ದು, ಹಲವು ಯೋಜನೆಗಳ ಪ್ರಸ್ತಾಪ ಮಾಡಿದ್ದಾರೆ. ಇದೇ ವೇಳೆ, ಮದುವೆ ನೋಂದಣಿಯನ್ನು ಸರಳೀಕರಣಗೊಳಿಸುವ ಕ್ರಮವನ್ನೂ ಸಿಎಂ ಪ್ರಕಟಿಸಿದ್ದಾರೆ. ಇನ್ಮುಂದೆ ಆನ್​ಲೈನ್​ ಮೂಲಕ ವಿವಾಹ ನೋಂದಣಿಗೆ ಅವಕಾಶ ಕಲ್ಪಿಸುವ ಬಗ್ಗೆ ಬಜೆಟ್​ನಲ್ಲಿ ಪ್ರಕಟಿಸಲಾಗಿದೆ.

ಈವರೆಗೆ ಉಪ ನೋಂದಣಾಧಿಕಾರಿಗಳ ಕಚೇರಿಯಲ್ಲಿ ಮಾತ್ರ ವಿವಾಹ ನೋಂದಣಿಯನ್ನು ಕೈಗೊಳ್ಳಲಾಗುತ್ತಿತ್ತು. ಆದರೆ, ರಾಜ್ಯ ಸರ್ಕಾರ ಈ ಪ್ರಕ್ರಿಯೆಯನ್ನು ಇನ್ನಷ್ಟು ಸುಗಮಗೊಳಿಸಿದೆ. ಉಪ ನೋಂದಣಾಧಿಕಾರಿಗಳ ಕಚೇರಿಗೆ ಅಲೆದಾಟ ತಪ್ಪಿಸಲು ಕ್ರಮ ಕೈಗೊಂಡಿದೆ. ವಿವಾಹ ನೋಂದಣಿಯನ್ನು ಜನಸ್ನೇಹಿಯಾಗಿಸಲು ಕಾವೇರಿ 2.0 ತಂತ್ರಾಂಶದಲ್ಲಿ ಆನ್‌ಲೈನ್‌ ಮೂಲಕ ನೋಂದಣಿ ಮಾಡಲು ಮತ್ತು ಗ್ರಾಮ ಪಂಚಾಯಿತಿಗಳಲ್ಲಿನ ಬಾಪೂಜಿ ಸೇವಾ ಕೇಂದ್ರ ಹಾಗೂ ಗ್ರಾಮ-1 ಕೇಂದ್ರಗಳಲ್ಲಿಯೂ ಸಹ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ಬಗ್ಗೆ ತಮ್ಮ ಬಜೆಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಅಲ್ಲದೇ, ಬೆಂಗಳೂರಿನಲ್ಲಿರುವ ಉಪ ನೋಂದಣಾಧಿಕಾರಿ ಕಚೇರಿಗಳಲ್ಲಿ ಜನದಟ್ಟಣೆ ಹೆಚ್ಚಾಗಿರುವುದರಿಂದ ಸಾರ್ವಜನಿಕರಿಗೆ ಆಗುತ್ತಿರುವ ಅನಾನುಕೂಲಗಳನ್ನು ಕಡಿಮೆ ಮಾಡಲು ಸಹ ಸರ್ಕಾರ ನಿರ್ಧರಿಸಿದೆ. ಬೆಂಗಳೂರಿನ ಎಂಟು 27 ಕಚೇರಿಗಳಿಗೆ ಮೂಲ ಸೌಲಭ್ಯಗಳನ್ನು ಒದಗಿಸುವ ಮೂಲಕ ಜನಸ್ನೇಹಿ ಕಚೇರಿಗಳನ್ನಾಗಿ ಉನ್ನತೀಕರಣ ಮಾಡುವ ಬಗ್ಗೆ ಪ್ರಕಟಿಸಲಾಗಿದೆ.

ಬೆಂಗಳೂರು ನಗರದಲ್ಲಿ ಹೊಸದಾಗಿ ಐದು ಸಂಚಾರ ಪೊಲೀಸ್‌ ಠಾಣೆಗಳನ್ನು ಮತ್ತು ಆರು ಮಹಿಳಾ ಪೊಲೀಸ್‌ ಠಾಣೆಗಳನ್ನು ಸ್ಥಾಪಿಸಲು ಕ್ರಮ ವಹಿಸಲಾಗಿದೆ. ಎರಡು ಹಂತಗಳಲ್ಲಿ ಒಟ್ಟು 2,454 ಹುದ್ದೆಗಳ ಸೃಜನೆ ಮಾಡುವುದು ಘೋಷಿಸಲಾಗಿದೆ. ಪೊಲೀಸ್‌ ಮೊಬಿಲಿಟಿ ಯೋಜನೆಯಡಿ ಇಲಾಖೆಯಲ್ಲಿನ ಹಳೆಯ ವಾಹನಗಳನ್ನು ಬದಲಾಯಿಸಲು 2023-24ನೇ ಸಾಲಿನಲ್ಲಿ 100 ಕೋಟಿ ರೂ. ಅನುದಾನ ಮೀಸಲಿಡಲು ನಿರ್ಧರಿಸಲಾಗಿದೆ.

ಅಪರಾಧ ತನಿಖಾ ವಿಭಾಗ (CID), ಸೈಬರ್‌ ಅಪರಾಧ ಘಟಕ (CCD) ಮತ್ತು ಸೈಬರ್‌ ಎಕಾನಾಮಿಕ್ಸ್‌ ಮತ್ತು ನಾರ್ಕೋಟಿಕ್ಸ್‌ (CEN) ಪೊಲೀಸ್‌ ಠಾಣೆಗಳ ಘಟಕಗಳ ಉನ್ನತೀಕರಣಕ್ಕೆ 10 ಕೋಟಿ ರೂ. ಅನುದಾನ ಘೋಷಿಸಲಾಗಿದೆ. ಕೆ-ಸೇಫ್‌ ಯೋಜನೆಯಡಿ ಹತ್ತು 3 ಬೇ ಅಗ್ನಿಶಾಮಕ ಠಾಣಾ ಕಟ್ಟಡಗಳ ನಿರ್ಮಾಣವನ್ನು ಹಾಗೂ ಅಗತ್ಯವಿರುವ ಅಗ್ನಿಶಾಮಕ ವಾಹನಗಳನ್ನು ಒದಗಿಸಲು 100 ಕೋಟಿ ರೂ. ನೆರವು ನೀಡುವ ಬಗ್ಗೆ ಬಜೆಟ್​ನಲ್ಲಿ ಪ್ರಕಟಿಸಲಾಗಿದೆ.

ಇದನ್ನೂ ಓದಿ: Karnataka Budget: ಯಾವ ಇಲಾಖೆಗೆ ಎಷ್ಟು ಅನುದಾನ ಹಂಚಿಕೆ; ಇವುಗಳಿಗೆ ಆದಾಯ ಸಂಗ್ರಹ ಹೇಗೆ?

ETV Bharat Logo

Copyright © 2024 Ushodaya Enterprises Pvt. Ltd., All Rights Reserved.