ETV Bharat / state

ಮಕ್ಕಳ ಬಸ್ ಯೋಜನೆ ಪ್ರಾರಂಭಕ್ಕೆ ನಿರ್ಧಾರ: 100 ಕೋಟಿ ಅನುದಾನ - ಮಕ್ಕಳ ಬಸ್ ಯೋಜನೆ ಪ್ರಾರಂಭ

Karnataka Budget 2023: ಶಾಲಾ - ಕಾಲೇಜುಗಳ ಮಕ್ಕಳ ಬಸ್ ಸಮಸ್ಯೆ ನಿವಾರಣೆಗೆ ಕ್ರಮ - 100 ಕೋಟಿ ರೂ. ಅನುದಾನ. ಹೆಚ್ಚುವರಿಯಾಗಿ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲ - ಸಿಎಂ ಬೊಮ್ಮಾಯಿ ಘೋಷಣೆ.

CM Basavaraj Bommai
ಸಿಎಂ ಬೊಮ್ಮಾಯಿ
author img

By

Published : Feb 17, 2023, 12:07 PM IST

ಬೆಂಗಳೂರು: ವಿಶ್ವದಲ್ಲಿಯೇ ತಂತ್ರಜ್ಞಾನದ ಕೇಂದ್ರವಾಗಿ ಗುರುತಿಸಿಕೊಂಡಿರುವ ನಗರ ಬೆಂಗಳೂರು. ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರದಲ್ಲಿ ಸುಗಮ ಸಂಚಾರ, ರಸ್ತೆ, ರಾಜಕಾಲುವೆಗಳ ಅಭಿವೃದ್ಧಿ, ಪ್ರವಾಹ ತಡೆಗಟ್ಟುವುದು, ವೈಜ್ಞಾನಿಕ ಹಾಗೂ ದಕ್ಷ ತ್ಯಾಜ್ಯ ನಿರ್ವಹಣೆ ವ್ಯವಸ್ಥೆ ರೂಪಿಸುವುದರೊಂದಿಗೆ ಜನರ ಬದುಕಿನ ಗುಣಮಟ್ಟ ಹೆಚ್ಚಿಸಲು ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯಗಳಿಗೆ ಸರ್ಕಾರ ಆದ್ಯತೆ ನೀಡಿದೆ.

6 ಸಾವಿರ ಕೋಟಿ ವೆಚ್ಚದ ಕಾಮಗಾರಿ: ಅಮೃತ ನಗರೋತ್ಥಾನ ಯೋಜನೆಯಡಿ ಬೆಂಗಳೂರು ನಗರದಲ್ಲಿ 6 ಸಾವಿರ ಕೋಟಿ ವೆಚ್ಚದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಹೈ ಡೆನ್ಸಿಟಿ ಯೋಜನೆಯಡಿ ಒಟ್ಟು 108 ಕಿ.ಮೀ. ರಸ್ತೆಗಳನ್ನು 273 ಕೋಟಿ ರೂ. ಗಳ ಅಂದಾಜಿನಲ್ಲಿ ತೆಗೆದುಕೊಳ್ಳಲಾಗಿದೆ. ಮಳೆ ನೀರು ಮುಕ್ತವಾಗಿ ಹರಿಯುವುದನ್ನು ಖಚಿತಪಡಿಸಿಕೊಳ್ಳಲು ಹಾಗೂ ಪ್ರವಾಹ ತಪ್ಪಿಸಲು 195 ಕಿ.ಮೀ. ಉದ್ದದ ಚರಂಡಿ ಮತ್ತು ಕಲ್ವರ್ಟ್‌ ಅಭಿವೃದ್ಧಿಗಾಗಿ 1,813 ಕೋಟಿ ರೂ. ಅನುದಾನ ಒದಗಿಸಲಾಗಿದೆ.

ಮಕ್ಕಳ ಬಸ್- 100 ಕೋಟಿ ಅನುದಾನ: ಶಾಲಾ ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕೆ ಮಕ್ಕಳ ಬಸ್​ ಯೋಜನೆ ಆರಂಭಿಸಲಾಗುವುದು. 100 ಕೋಟಿ ರೂ. ವೆಚ್ಚದಲ್ಲಿ ಮಕ್ಕಳ ಬಸ್​ ಯೋಜನೆ ಅನುಷ್ಠಾನಗೊಳ್ಳಲಿದೆ. ಇದರಿಂದ 2 ಲಕ್ಷ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿದೆ. ಅಭಿವೃದ್ದಿ ಆಕಾಂಕ್ಷಿ ತಾಲೂಕೂಗಳಲ್ಲಿ ಶಿಕ್ಷಣ ಆರೋಗ್ಯ ಮತ್ತು ಪೌಷ್ಟಿಕತೆಗೆ 3 ಸಾವಿರ ಕೋಟಿ ರೂ. ಅನುದಾನ ನೀಡಲಾಗುವುದು. ರಾಜ್ಯದ ಎಲ್ಲಾ ಪ್ರೌಢ ಶಾಲಾ ವಿದ್ಯಾರ್ಥಿಗಳ ಉನ್ನತ ಶಿಕ್ಷಣ ದೃಷ್ಟಿಯಿಂದ ಮುಖ್ಯಮಂತ್ರಿ ವಿದ್ಯಾಶಕ್ತಿ ಯೋಜನೆ ಆರಂಭಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಘೋಷಿಸಿದ್ದಾರೆ.

150 ಕೋಟಿ ರೂ. ವೆಚ್ಚದಲ್ಲಿ 75 ಜಂಕ್ಷನ್‌ಗಳ ಅಭಿವೃದ್ಧಿ: ಬೆಂಗಳೂರು ನಗರದ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು, ಹೆಚ್ಚು ಸಂಚಾರ ದಟ್ಟಣೆ ಇರುವ ಪ್ರಮುಖ 75 ಜಂಕ್ಷನ್‌ಗಳನ್ನು 150 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ಇದಕ್ಕೆ ಪೂರಕವಾಗಿ Artificial Intelligenceನ ಬಳಕೆಯೊಂದಿಗೆ ಟ್ರಾಫಿಕ್‌ ಸಿಗ್ನಲ್‌ಗಳ ನಿರ್ವಹಣೆ ಮಾಡುವ ಮೂಲಕ Seamless Signalling ಅನ್ನು ಅಳವಡಿಸಿಕೊಂಡು ಸಂಚಾರ ದಟ್ಟಣೆ ಕಡಿಮೆ ಮಾಡಲಾಗುವುದು. ಕೃತಕ ಬುದ್ದಿಮತ್ತೆ ಬಳಸಿಕೊಂಡು ಸಂಚಾರ ಸಿಗ್ನಲ್​ಗಳ ನಿರ್ವಹಣೆ. ಕಿರು ಬಂದರುಗಳ ಅಭಿವೃದ್ಧಿಗೆ 597 ಕೋಟಿ ವೆಚ್ಚದಲ್ಲಿ 12 ಹೊಸ ಯೋಜನೆಗಳ ಆರಂಭ.

2 ಸಾವಿರ ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ: . ರಾಜ್ಯ ಹೆದ್ದಾರಿ ರಸ್ತೆ ಅಭಿವೃದ್ಧಿ ಯೋಜನೆಯಡಿ 2 ಸಾವಿರ ಕೋಟಿ ವೆಚ್ಚದಲ್ಲಿ ರಸ್ತೆ ನಿರ್ಮಾಣ. ಬಸ್ ಖರೀದಿ- 500 ಕೋಟಿ, ಸಾರಿಗೆ ಇಲಾಖೆ- 8,007 ಕೋಟಿ ರೂ., ನಗರ ಮತ್ತು ಪಟ್ಟಣಗಳಲ್ಲಿ ದಿವಂಗತ ಶಂಕರ್ ನಾಗ್ ಹೆಸರಲ್ಲಿ ಟ್ಯಾಕ್ಸಿ ಮತ್ತು ಆಟೋ ನಿಲ್ದಾಣ ನಿರ್ಮಾಣ ಘೋಷಣೆ.

6 ವಲಯವಾರು ವಿಂಗಡಣೆ: ಆಡಳಿತ ಸುಧಾರಣೆ ಸಾರ್ವಜನಿಕ ಸೇವೆಗಳು, ಸಂಸ್ಕೃತಿ ನೈಸರ್ಗಿಕ ಸಂಪನ್ಮೂಲಗಳ ರಕ್ಷಣೆ, ಬೆಂಗಳೂರು ಸಮಗ್ರ ಅಭಿವೃದ್ಧಿ, ಆರ್ಥಿಕ ಅಭಿವೃದ್ಧಿ, ಸರ್ವೋದಯ ಮತ್ತು ಕ್ಷೇಮಾಭಿವೃದ್ಧಿ, ಕೃಷಿ ಮತ್ತು ಪೂರಕ ಚಟುವಟಿಕೆಗಳಿಗೆ ಆದ್ಯತೆ.

ಇದನ್ನೂ ಓದಿ: ನೀರು ಸಂರಕ್ಷಣೆಗೆ ಜಲನಿಧಿ ಹೊಸ ಯೋಜನೆ: 75 ಕೋಟಿ ರೂ. ಅನುದಾನ ಮೀಸಲು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.