ETV Bharat / state

Karnataka Budget: ಕನಕಪುರಕ್ಕೆ ಮೆಡಿಕಲ್ ಕಾಲೇಜು ಮಂಜೂರು ಮಾಡಿಸಿಕೊಂಡ ಡಿಕೆಶಿ: ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಗೆ ಬಜೆಟ್​ನಲ್ಲಿ ಸಿಕ್ಕಿದ್ದೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 14ನೇ ಬಜೆಟ್​ ಘೋಷಣೆ ಮಾಡಿದ್ದಾರೆ. ಆರೋಗ್ಯ ವಲಯದ ಅಭಿವೃದ್ಧಿಗೆ ವಿವಿಧ ಯೋಜನೆ ಮತ್ತು ಅನುದಾನ ಘೋಷಸಿದ್ದಾರೆ.

karnataka-budget-budget-allocation-to-health-sector
Karnataka Budget : ಆರೋಗ್ಯ ಕ್ಷೇತ್ರಕ್ಕೆ ಸಿಕ್ಕಿದ್ದೇಷ್ಟು ? ಪುನೀತ್​ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಗಟ್ಟಲು 6 ಕೋಟಿ ಅನುದಾನ
author img

By

Published : Jul 7, 2023, 1:59 PM IST

Updated : Jul 7, 2023, 6:41 PM IST

ಬೆಂಗಳೂರು: ಕನಕಪುರ ತಾಲೂಕಿಗೆ ಸರ್ಕಾರಿ ವೈದ್ಯಕೀಯ ಕಾಲೇಜು ಮಂಜೂರು ಮಾಡಿಸಿಕೊಳ್ಳುವಲ್ಲಿ ಡಿಸಿಎಂ ಡಿಕೆ ಶಿವಕುಮಾರ್ ಸಫಲರಾಗಿದ್ದು, ಇಂದಿನ ಬಜೆಟ್​​ನಲ್ಲಿ ವೈದ್ಯಕೀಯ ಕಾಲೇಜು ಘೋಷಣೆಯಾಗಿದೆ. ನಿಮ್ಹಾನ್ಸ್ ನಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆ ಸ್ಥಾಪನೆ, ಗದಗ, ಕೊಪ್ಪಳ, ಕಾರವಾರ, ಕೊಡಗಿನಲ್ಲಿ 450 ಬೆಡ್​​ಗಳ ಆಸ್ಪತ್ರೆ ನಿರ್ಮಾಣ ಸೇರಿದಂತೆ ಹಲವು ಯೋಜನೆ, ಕಾರ್ಯಕ್ರಮ ಘೋಷಣೆಯಾಗಿದೆ.

ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ವತಿಯಿಂದ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನಲ್ಲಿ ಒಂದು ಹೊಸ ವೈದ್ಯಕೀಯ ಕಾಲೇಜನ್ನು ಸ್ಥಾಪನೆ, ಮೈಸೂರು, ಕಲಬುರಗಿ ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ಕಾರ್ಯಾರಂಭ ಮತ್ತು ಸುಟ್ಟ ಗಾಯಗಳ ಘಟಕ ಸ್ಥಾಪನೆಗೆ 155 ಕೋಟಿ ಅನುದಾನ. ನಿಮ್ಹಾನ್ಸ್ (NIMHANS) ಸಂಸ್ಥೆಯ ಆವರಣದಲ್ಲಿ 146 ಕೋಟಿ ರೂ.ಗಳ ವೆಚ್ಚದಲ್ಲಿ ಅಂಗಾಂಗ ಜೋಡಣೆಗೆ ಮೀಸಲಾದ ದೇಶದ ಪ್ರಥಮ ಸಾರ್ವಜನಿಕ ಆಸ್ಪತ್ರೆಯನ್ನು ಸ್ಥಾಪಿಸಲಾಗುವುದು, ಜೊತೆಯಲ್ಲಿ ನಾನ್‌ ಆಲ್ಕೋಹಾಲಿಕ್‌ ಫ್ಯಾಟಿ ಲಿವರ್‌ ಖಾಯಿಲೆಯ (NAFLD) ರೋಗಿಗಳಲ್ಲಿ ಸಿರೋಸಿಸ್‌ ಮತ್ತು ಕ್ಯಾನ್ಸರ್‌ ಪತ್ತೆ ಹಚ್ಚಲು ಒಂದು FibroScan ಅನ್ನು ಒದಗಿಸುವುದಾಗಿ ಬಜೆಟ್​ನಲ್ಲಿ ಘೊಷಿಸಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಅಸ್ತಿತ್ವದಲ್ಲಿರುವ 173 ಡಯಾಲಿಸಿಸ್‌ ಕೇಂದ್ರಗಳನ್ನು 219ಕ್ಕೆ ಹೆಚ್ಚಿಸಲಾಗುವುದು. ಇದಕ್ಕಾಗಿ ಪ್ರಸಕ್ತ ಸಾಲಿನಲ್ಲಿ ಒಟ್ಟು 92 ಕೋಟಿ ರೂ. ಗಳನ್ನು ಒದಗಿಸಲಾಗುವುದು. ಗ್ರಾಮೀಣ ಪ್ರದೇಶಗಳಲ್ಲಿ ಆರೋಗ್ಯ ವ್ಯವಸ್ಥೆಯನ್ನು ಬಲಪಡಿಸಲು ಈಗಾಗಲೇ 23 PHC (Primary health care) ಗಳನ್ನು CHC (Community Health Center) ಗಳಾಗಿ ಮೇಲ್ದರ್ಜೆಗೇರಿಸಲಾಗಿದೆ. ಈ CHC ಗಳನ್ನು ಕಾರ್ಯಗತಗೊಳಿಸಲು ಬೇಕಿರುವ ಅಗತ್ಯ ಉಪಕರಣಗಳು ಮತ್ತು ಮಾನವ ಸಂಪನ್ಮೂಲಗಳನ್ನು ಒದಗಿಸಲು 70 ಕೋಟಿ ರೂ.ಗಳನ್ನು ಒದಗಿಸಲಾಗುವುದು. ರಾಜ್ಯದಲ್ಲಿ ನವಜಾತ ಶಿಶುಗಳು, ಮಕ್ಕಳು, ಹದಿಹರೆಯದವರು, ಗರ್ಭಿಣಿಯರು, ತಾಯಂದಿರು ಮತ್ತು ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ರಕ್ತಹೀನತೆ ಮತ್ತು ಅಪೌಷ್ಟಿಕತೆಯನ್ನು ನಿವಾರಿಸಲು ಸಮಗ್ರವಾದ ಪರೀಕ್ಷೆ, ಚಿಕಿತ್ಸೆ, ಅರಿವು ಮೂಡಿಸುವಿಕೆ ಮತ್ತು ಆರೋಗ್ಯ ಕಾರ್ಯಕರ್ತರ ಸಾಮರ್ಥ್ಯ ಬಲವರ್ಧನೆಗೆ ಕಾರ್ಯಕ್ರಮವನ್ನು ಜಾರಿಗೆ ತರಲಾಗುವುದು. ಇದಕ್ಕಾಗಿ 25 ಕೋಟಿ ರೂ. ಗಳನ್ನು ಒದಗಿಸಲಾಗುವುದು ಎಂದು ಬಜೆಟ್​​ನಲ್ಲಿ ಪ್ರಕಟಿಸಲಾಗಿದೆ.

ರಾಜ್ಯವು ಕಳೆದ ವರ್ಷ ನಿಮ್ಹಾನ್ಸ್‌ ಸಹಯೋಗದೊಂದಿಗೆ ಮೆದುಳಿನ ಆರೋಗ್ಯ ಆರೈಕೆ ಸೇವೆಗಳನ್ನು ಉತ್ತೇಜಿಸಲು ಮೂರು ಜಿಲ್ಲೆಗಳಲ್ಲಿ ʻಬ್ರೈನ್‌ ಹೆಲ್ತ್‌ ಇನಿಶಿಯೇಟಿವ್‌ʼ (Brain Health Initiative) ಎಂಬ ವಿಶಿಷ್ಟ ಯೋಜನೆಯನ್ನು ಕೈಗೆತ್ತಿಕೊಂಡಿತ್ತು. ಯಶಸ್ವಿ ಪ್ರಾಯೋಗಿಕ ಅನುಷ್ಠಾನದ ನಂತರ ಈ ಯೋಜನೆಯನ್ನು ಇಡೀ ರಾಜ್ಯಕ್ಕೆ ಹಬ್‌ ಮತ್ತು ಸ್ಪೋಕ್‌ ಮಾದರಿಯಲ್ಲಿ 25 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು. ʻಆಶಾಕಿರಣʼ ಎಂಬ ಕಾರ್ಯಕ್ರಮದಡಿಯಲ್ಲಿ ಅಭಿಯಾನ ರೂಪದಲ್ಲಿ ಕಣ್ಣಿನ ಶಿಬಿರಗಳು, ಕನ್ನಡಕ ವಿತರಣೆ ಮತ್ತು ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆಗಳ ಚಟುವಟಿಕೆಗಳನ್ನು ಹಂತ ಹಂತವಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ನಡೆಸಲಾಗುವುದು. 2023-24ನೇ ಸಾಲಿನಲ್ಲಿ ಚಿತ್ರದುರ್ಗ, ರಾಯಚೂರು, ಉತ್ತರ ಕನ್ನಡ ಮತ್ತು ಮಂಡ್ಯ ಜಿಲ್ಲೆಗಳಲ್ಲಿ 21 ಕೋಟಿ ರೂ. ವೆಚ್ಚದಲ್ಲಿ ಪ್ರಾರಂಭಿಸಲಾಗುವುದು ಎಂದು ಬಜೆಟ್ ನಲ್ಲಿ ತಿಳಿಸಲಾಗಿದೆ.

ಸಮಾಜದ ದುರ್ಬಲ ವರ್ಗಗಳಲ್ಲಿ ಕ್ಷಯರೋಗವನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆಹಚ್ಚಲು ಸಮುದಾಯ ಆಧಾರಿತ ತಪಾಸಣಾ ಚಟುವಟಿಕೆಗಳನ್ನು ಕೈಗೊಳ್ಳಲಾಗುವುದು. ರಾಜ್ಯದ ಎಂಟು ಜಿಲ್ಲೆಗಳಲ್ಲಿ ಪ್ರಾಯೋಗಿಕವಾಗಿ, ಪ್ರತಿ ಜಿಲ್ಲೆಗೆ ಎರಡರಂತೆ ಕೈಚಾಲಿತ-ಕ್ಷ-ಕಿರಣ (Hand Held X-ray) ಉಪಕರಣವನ್ನು ಒದಗಿಸಲಾಗುವುದು. ಪ್ರತಿ X-ray ಯಂತ್ರಕ್ಕೆ 20 ಲಕ್ಷ ರೂ. ದಂತೆ ಒಟ್ಟು ಮೂರು ಕೋಟಿ ರೂ. ಒದಗಿಸಲಾಗುವುದು. ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಹೊಂದಿರುವ ರೋಗಿಗಳನ್ನು ಪತ್ತೆಹಚ್ಚಲು ಮತ್ತು ಅಗತ್ಯ ಔಷಧಗಳನ್ನು ಅವರ ಮನೆ ಬಾಗಿಲಿಗೆ ತಲುಪಿಸಲು ಪ್ರಾಯೋಗಿಕವಾಗಿ ರಾಜ್ಯದ ನಾಲ್ಕು ವಿಭಾಗಗಳ ಎಂಟು ಜಿಲ್ಲೆಗಳಲ್ಲಿ ಸಮಗ್ರ ತಪಾಸಣೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು ಎಂದು ತಿಳಿಸಲಾಗಿದೆ.

ಕರ್ನಾಟಕ ರತ್ನ ಡಾ.ಪುನೀತ್‌ ರಾಜ್‌ಕುಮಾರ್‌ ಅವರ ಸ್ಮರಣಾರ್ಥವಾಗಿ ಹಠಾತ್ ಹೃದಯ ಸಂಬಂಧಿ ಸಾವುಗಳನ್ನು ತಡೆಗಟ್ಟಲು Automated External Defibrillators (AED) ಗಳನ್ನು ಜಿಲ್ಲಾ ಆಸ್ಪತ್ರೆ ಮತ್ತು ತಾಲೂಕು ಆಸ್ಪತ್ರೆಗಳಲ್ಲಿ ಅಳವಡಿಸಲಾಗುವುದು. ಇದಕ್ಕಾಗಿ ಆರು ಕೋಟಿ ರೂ. ಅನುದಾನ ಒದಗಿಸಲಾಗುವುದು. ರಾಜ್ಯದಲ್ಲಿ 15 ಸಿ.ಟಿ ಸ್ಕ್ಯಾನಿಂಗ್‌ ಮತ್ತು ಆರು ಎಂ.ಆರ್‌.ಐ ಸ್ಕ್ಯಾನಿಂಗ್‌ ಕೇಂದ್ರಗಳನ್ನು ಕೆಲವು ಜಿಲ್ಲಾಸ್ಪತ್ರೆಗಳಲ್ಲಿ ಈಗಾಗಲೇ ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸಿ, ಉಚಿತ ಪ್ರಯೋಗಾಲಯ ಸೇವೆಗಳನ್ನು ನೀಡಲಾಗುತ್ತಿದೆ. ಈ ಸೇವೆಗಳನ್ನು ರಾಜ್ಯದ ಎಲ್ಲಾ ಜಿಲ್ಲಾ ಆಸ್ಪತ್ರೆಗಳಿಗೂ ವಿಸ್ತರಿಸಲಾಗುವುದು. ರಾಜ್ಯವು ಈಗಾಗಲೇ ಮಾಹಿತಿ ತಂತ್ರಜ್ಞಾನದಲ್ಲಿ ಮುಂಚೂಣಿಯಲ್ಲಿರುವಂತೆ ಆರೋಗ್ಯ ತಂತ್ರಜ್ಞಾನದ ಆವಿಷ್ಕಾರಗಳ ಅಳವಡಿಕೆಯಲ್ಲಿಯೂ ಪ್ರಮುಖ ಕೇಂದ್ರವಾಗುವ ಗುರಿ ಹೊಂದಿದೆ. ಈ ನಿಟ್ಟಿನಲ್ಲಿ ಎಂಟು ಕೋಟಿ ರೂ.ಗಳ ವೆಚ್ಚದಲ್ಲಿ ಕರ್ನಾಟಕ ಆರೋಗ್ಯ ತಂತ್ರಜ್ಞಾನ ಪ್ರಯೋಗಾಲಯವನ್ನು ಸ್ಥಾಪಿಸಲಾಗುವುದು.

ರಾಜ್ಯದಲ್ಲಿ ಆಯುಷ್ಮಾನ್‌ ಭಾರತ್‌ ಡಿಜಿಟಲ್‌ ಮಿಷನ್‌ ಯೋಜನೆ ಹಾಗೂ ಆರೋಗ್ಯ ದಾಖಲಾತಿಗಳ ಡಿಜಿಟಲೀಕರಣ ಸೇರಿದಂತೆ ಇಲಾಖೆಯ ಇನ್ನಿತರ ಎಲ್ಲಾ ಅಂತರ್ಜಾಲ ಉಪಕ್ರಮಗಳನ್ನು ಅನುಷ್ಠಾನ ಮಾಡಲು ಕರ್ನಾಟಕ ಡಿಜಿಟಲ್‌ ಹೆಲ್ತ್‌ ಸೊಸೈಟಿಯನ್ನು (Karnataka Digital Health Society) ಸ್ಥಾಪನೆ ಮಾಡಲಾಗುವುದು ಎಂದು ಬಜೆಟ್ ನಲ್ಲಿ ಘೋಷಿಸಲಾಗಿದೆ.

ರಾಜ್ಯದಲ್ಲಿ ಈಗಾಗಲೇ ಆರಂಭಿಸಲಾಗಿರುವ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗಳ ಕಟ್ಟಡ ನಿರ್ಮಾಣ ಕಾಮಗಾರಿಗಳಿಗೆ 450 ಕೋಟಿ ರೂ.ಗಳನ್ನು ಮೀಸಲಿಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಗದಗ, ಕೊಪ್ಪಳ, ಕಾರವಾರ ಮತ್ತು ಕೊಡಗು ಜಿಲ್ಲೆಗಳಲ್ಲಿ 450 ಬೆಡ್‌ ಆಸ್ಪತ್ರೆಗಳ ನಿರ್ಮಾಣ ಕಾರ್ಯವನ್ನು ಆದ್ಯತೆ ಮೇಲೆ ಪೂರ್ಣಗೊಳಿಸಲಾಗುವುದು. ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ (GIMS) 200 ಹಾಸಿಗೆಯ ಹೊಸ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು 70 ಕೋಟಿ ರೂ. ಗಳ ವೆಚ್ಚದಲ್ಲಿ ನಿರ್ಮಿಸಲಾಗುವುದು. ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ವತಿಯಿಂದ ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ, ದಾವಣಗೆರೆ, ದಕ್ಷಿಣ ಕನ್ನಡ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳು, ಸಂಶೋಧನಾ ಕೇಂದ್ರ ಮತ್ತು ಒಳಾಂಗಣ ಕ್ರೀಡಾ ಸೌಲಭ್ಯಗಳನ್ನು ಹಾಗೂ ಕಲಬುರಗಿ ಮತ್ತು ಮೈಸೂರು ಜಿಲ್ಲೆಗಳಲ್ಲಿ ಅಲೈಡ್ ಹೆಲ್ತ್ ಸೈನ್ಸಸ್ (Allied Health Sciences) ಕಾಲೇಜುಗಳನ್ನು ಸ್ಥಾಪಿಸಲಾಗುವುದು. ಮೈಸೂರು ಮತ್ತು ಕಲಬುರಗಿಯಲ್ಲಿ ಟ್ರಾಮಾ ಕೇರ್ ಸೆಂಟರ್‌ಗಳ (Trauma Care Center) ಕಾರ್ಯಾಚರಣೆಗೆ 30 ಕೋಟಿ ರೂ.ಗಳನ್ನು ಒದಗಿಸಲಾಗುವುದು ಎಂದು ತಿಳಿಸಲಾಗಿದೆ.

ಇದನ್ನೂ ಓದಿ: karnataka budget 2023:ಸಿದ್ದರಾಮಯ್ಯ ಬಜೆಟ್​ನಲ್ಲಿ ಪ್ರವಾಸೋದ್ಯಮ ವಲಯಕ್ಕೆ ಸಿಕ್ಕಿದ್ದೇನು? ಇಲ್ಲಿದೆ ವಿವರ

Last Updated : Jul 7, 2023, 6:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.