ETV Bharat / state

ಸಿಎಂ ಸಿದ್ದರಾಮಯ್ಯ ಲೆಕ್ಕ: ಆದಾಯ ಸಂಗ್ರಹಕ್ಕೆ ಹೆಚ್ಚು ಒತ್ತು,ಆದಾಯ ಕೊರತೆಯ ಬಜೆಟ್​...₹85,818 ಕೋಟಿ ಸಾಲದ ಮೊರೆ - ಬಂಡವಾಳ ವೆಚ್ಚಕ್ಕೆ ಕತ್ತರಿ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್​ನಲ್ಲಿ ಗ್ಯಾರಂಟಿ ಹೊರೆ ನೀಗಿಸಲು 85,818 ಕೋಟಿ ಸಾಲದ ಮೊರೆ ಹೋಗಿದ್ದಾರೆ. ಕೇಂದ್ರ ಸರ್ಕಾರದಿಂದ 6,254 ಕೋಟಿ, ಬಹಿರಂಗ ಮಾರುಕಟ್ಟೆ ಮೂಲಕ 78,363 ರೂಪಾಯಿ ಸಾಲ ಮಾಡಲು ಕಾಂಗ್ರೆಸ್​ ಸರ್ಕಾರ ಮುಂದಾಗಿದೆ.

karnataka-bugdet-2023 .. more emphasis on  revenue collection, 85,818 crore loan
ಸಿಎಂ ಸಿದ್ದರಾಮಯ್ಯ ಲೆಕ್ಕ: ಆದಾಯ ಸಂಗ್ರಹಕ್ಕೆ ಹೆಚ್ಚು ಒತ್ತು, 85,818 ಕೋಟಿ ಸಾಲದ ಮೊರೆ
author img

By

Published : Jul 7, 2023, 2:20 PM IST

Updated : Jul 7, 2023, 3:39 PM IST

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಅವರು 3,27,747 ಕೋಟಿ ಗಾತ್ರದ ಬಜೆಟ್ ಮಂಡಿಸಿದ್ದು, ಗ್ಯಾರಂಟಿ ಹೊರೆ ನೀಗಿಸಲು ಹೆಚ್ಚಿನ ಸಾಲದ ಮೊರೆ ಹೋಗಿದೆ. 2023-24 ಸಾಲಿನಲ್ಲಿ 85,818 ಕೋಟಿ ರೂ. ಸಾಲ ಮಾಡಲು ನಿರ್ಧರಿಸಿದೆ. ಬೊಮ್ಮಾಯಿ ಮಂಡಿಸಿದ್ದ ಬಜೆಟ್‌ನಲ್ಲಿ 2023-24ರಲ್ಲಿ ಅಂದಾಜು 77,750 ಕೋಟಿ ಸಾಲ ಮಾಡುವುದಾಗಿ ತಿಳಿಸಿದ್ದರು.‌ ಇದೀಗ ಸಿಎಂ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಪಂಚ ಗ್ಯಾರಂಟಿಯ ಹೊರೆ ನೀಗಿಸಲು ಮತ್ತಷ್ಟು ಸಾಲದ ಮೊರೆ ಹೋಗಿದೆ. 9 ತಿಂಗಳ ಅವಧಿಯ ಬಜೆಟ್‌ನಲ್ಲಿ ಒಟ್ಟು 85,818 ಕೋಟಿ ರೂ. ಮಾಡಲು ಅಂದಾಜಿಸಿದೆ.

2023-24 ಸಾಲಿನಲ್ಲಿ ಕೇಂದ್ರ ಸರ್ಕಾರದಿಂದ 6,254 ಕೋಟಿ ರೂ. ಸಾಲ ಪಡೆಯಲು ಅಂದಾಜಿಸಲಾಗಿದೆ. ಬಹಿರಂಗ ಮಾರುಕಟ್ಟೆ ಮೂಲಕ 78,363 ಕೋಟಿ ರೂ. ಸಾಲ ಮಾಡಲು ಸರ್ಕಾರ ಮುಂದಾಗಿದೆ.

ಅಧಿಕ ಆದಾಯ ಸಂಗ್ರಹದ ಗುರಿ : ಬೊಮ್ಮಾಯಿ ಸರ್ಕಾರ ಮಂಡಿಸಿದ ತಮ್ಮ 2023-24 ಬಜೆಟ್​​ನಲ್ಲಿ ಒಟ್ಟು 2,26,909 ಕೋಟಿ ರೂ‌. ಆದಾಯ ಸಂಗ್ರಹದ ಗುರಿ ನಿಗದಿ ಪಡಿಸಲಾಗಿತ್ತು. ಅದರಂತೆ ವಾಣಿಜ್ಯ ತೆರಿಗೆ ಸಂಗ್ರಹದ ಗುರಿಯನ್ನು 92,000 ಕೋಟಿ ರೂ.ಗೆ ನಿಗದಿ ಪಡಿಸಲಾಗಿತ್ತು. ಇದೀಗ ಕಾಂಗ್ರೆಸ್ ಸರ್ಕಾರ ಹೊಸ ಬಜೆಟ್ ನಲ್ಲಿ 2023-24 ಸಾಲಿನಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ರಾಜಸ್ವ ಸಂಗ್ರಹಣೆ ಗುರಿಯನ್ನು 1,01,000 ಕೋಟಿ ರೂ. ನಿಗದಿ‌ ಮಾಡಿದೆ.

karnataka-bugdet-2023-more-emphasis-on-revenue-collection-85818-crore-loan
ಪ್ರಮುಖ ಆರ್ಥಿಕ ಸೂಚಕಗಳು
sskarnataka-bugdet-2023-more-emphasis-on-revenue-collection-85818-crore-loan
ಪ್ರಮುಖ ಆರ್ಥಿಕ ಸೂಚಕಗಳು (Major Fiscal indicators)

2023-24 ಸಾಲಿನ ಬೊಮ್ಮಾಯಿ ಬಜೆಟ್​ನಲ್ಲಿ 35,000 ಕೋಟಿ ರೂ.‌ ಅಬಕಾರಿ ಆದಾಯ ಸಂಗ್ರಹದ ಗುರಿ ನಿಗದಿ ಮಾಡಲಾಗಿತ್ತು. ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ನಲ್ಲಿ 2023-24 ಸಾಲಿನಲ್ಲಿ ಅಬಕಾರಿ ಇಲಾಖೆಗೆ 36,000 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನಿಗದಿ ಮಾಡಿದೆ.

2023-24 ಸಾಲಿನಲ್ಲಿ ನಿರ್ಗಮಿತ ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ನೋಂದಣಿ ಹಾಗೂ ಮುದ್ರಾಂಕ ಶುಲ್ಕ ರೂಪದಲ್ಲಿ ಸುಮಾರು 19,000 ಕೋಟಿ ರೂ. ಆದಾಯ ಸಂಗ್ರಹದ ಗುರಿ ನಿಗದಿ ಪಡಿಸಿದ್ದರು. ಆದರೆ ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ನಲ್ಲಿ 2023-24 ಸಾಲಿನಲ್ಲಿ ನೋಂದಣಿ ಮತ್ತು ಮುದ್ರಾಂಕ ಶುಲ್ಕ ಮೂಲಕ 25,000 ಕೋಟಿ ರೂ. ಸಂಗ್ರಹ ಗುರಿ ನಿಗದಿ ಮಾಡಿದೆ.

ಕೊರತೆಯನ್ನು ಭರಿಸುವಿಕೆ ( Financing deficit)

2023-24 ಸಾಲಿನಲ್ಲಿ ನಿರ್ಗಮಿತ ಸಿಎಂ ಬೊಮ್ಮಾಯಿ ತಮ್ಮ ಬಜೆಟ್​ನಲ್ಲಿ ಮೋಟಾರು ವಾಹನ ತೆರಿಗೆ ರೂಪದಲ್ಲಿ ಸುಮಾರು 10,500 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನಿಗದಿ ಪಡಿಸಿದ್ದರು. ಇದೀಗ ಕಾಂಗ್ರೆಸ್ ಸರ್ಕಾರ ಬಜೆಟ್​ನಲ್ಲಿ ಮೋಟಾರು ಮತ್ತು ವಾಹನ ತೆರಿಗೆ ಮೂಲಕ 11,500 ಕೋಟಿ ರೂ. ಸಂಗ್ರಹದ ಗುರಿ ನಿಗದಿ ಮಾಡಿದೆ. ಇನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ 9,000 ಕೋಟಿ ರೂ. ರಾಜಸ್ವ ಸಂಗ್ರಹದ ಗುರಿ ನೀಡಿದೆ.

2023-24ನೇ ಸಾಲಿನಲ್ಲಿ ರಾಜಸ್ವ ಜಮೆಗಳು 2,38,410 ಕೋಟಿ ರೂ.ಗಳ ಅಂದಾಜು ಮಾಡಲಾಗಿದೆ. ಇದರಲ್ಲಿ ರಾಜ್ಯದ ಒಟ್ಟು ಸ್ವಂತ ತೆರಿಗೆ ರಾಜಸ್ವವು ಜಿ.ಎಸ್.ಟಿ. ಪರಿಹಾರ ಒಳಗೊಂಡಂತೆ 1,75,653 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ. ತೆರಿಗೆಯೇತರ ರಾಜಸ್ವಗಳಿಂದ 12,500 ಕೋಟಿ ರೂ.ಗಳನ್ನು ಸಂಗ್ರಹಿಸಬಹುದೆಂದು ನಿರೀಕ್ಷಿಸಲಾಗಿದೆ. ಕೇಂದ್ರ ತೆರಿಗೆಯ ಪಾಲಿನ ರೂಪದಲ್ಲಿ 37,252 ಕೋಟಿ ರೂ.ಗಳನ್ನು ಹಾಗೂ 13,005 ಕೋಟಿ ರೂ.ಗಳನ್ನು ಕೇಂದ್ರ ಸರ್ಕಾರದಿಂದ ಸಹಾಯಾನುದಾನ ರೂಪದಲ್ಲಿ ರಾಜ್ಯ ಸರ್ಕಾರ ನಿರೀಕ್ಷಿಸಿದೆ.

ನಿಧಿಯ ಮೂಲಗಳು ಮತ್ತು ಅದರ ಅನ್ವಯ

ಆದಾಯ ಕೊರತೆಯ ಬಜೆಟ್ ಮಂಡನೆ : ಸಿಎಂ ಸಿದ್ದರಾಮಯ್ಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಗ್ಯಾರಂಟಿ ಹೊರೆ ಆದಾಯಕ್ಕಿಂತ ಹೆಚ್ಚಿರುವ ಹಿನ್ನೆಲೆ ಆದಾಯ ಕೊರತೆಯ ಬಜೆಟ್ ಮಂಡಿಸಿದ್ದಾರೆ. ಸುಮಾರು 3,269 ಕೋಟಿ ಆದಾಯ ಕೊರತೆ ಉಂಟಾಗಲಿದೆ.

2023-24 ಸಾಲಿನಲ್ಲಿ ಒಟ್ಟು ಅಂದಾಜು ಜಮೆ 3,24,478 ಕೋಟಿ ರೂ. ಅಂದಾಜು ಮಾಡಲಾಗಿದೆ. ಒಟ್ಟು ವೆಚ್ಚ 3,27,747 ಕೋಟಿ ರೂ. ಅಂದಾಜು ಮಾಡಿದೆ. ಆ ಮೂಲಕ 3,269 ಕೋಟಿ ರೂ. ಆದಾಯ ಕೊರತೆಯ ಬಜೆಟ್ ಮಂಡನೆ ಮಾಡಲಾಗಿದೆ. ನಿರ್ಗಮಿತ ಬಿಜೆಪಿ ಸರ್ಕಾರ 402 ಕೋಟಿಯ ಉಳಿತಾಯದ ಬಜೆಟ್ ಮಂಡಿಸಿದ್ದರು.

ಬಂಡವಾಳ ವೆಚ್ಚಕ್ಕೆ ಕತ್ತರಿ: ಸಿಎಂ ಸಿದ್ದರಾಮಯ್ಯ ತಮ್ಮ ಬಜೆಟ್​ನಲ್ಲಿ ಆಸ್ತಿ ಸೃಜನೆ, ಮೂಲಭೂತ ಅಭಿವೃದ್ಧಿಗಾಗಿನ ವಿನಿಯೋಗಿಸುವ ಬಂಡವಾಳ ವೆಚ್ಚವನ್ನು ಕಡಿತಗೊಳಿಸಿದೆ. ಬೊಮ್ಮಾಯಿ ಸರ್ಕಾರ ತಾವು ಮಂಡಿಸಿದ ಬಜೆಟ್​ನಲ್ಲಿ ಅಂದಾಜು 58,327.84 ಕೋಟಿ ಬಂಡವಾಳ ವೆಚ್ಚವನ್ನು ನಿಗದಿ ಮಾಡಿತ್ತು. ಇದೀಗ ಸಿಎಂ ಸಿದ್ದರಾಮಯ್ಯ ಮಂಡಿಸಿದ ಬಜೆಟ್​ನಲ್ಲಿ ಬಂಡವಾಳ ವೆಚ್ಚಕ್ಕೆ ಕತ್ತರಿ ಹಾಕಿದ್ದಾರೆ. ಅಂದಾಜು 54,374 ಕೋಟಿ ರೂ. ಬಂಡವಾಳ ವೆಚ್ಚ ನಿಗದಿ ಮಾಡಿದ್ದಾರೆ.

  • ನಾವು ಪ್ರಣಾಳಿಕೆಯಲ್ಲಿ ಹಾಗೂ ಚುನಾವಣೆ ಸಂದರ್ಭದಲ್ಲಿ ಮೀನುಗಾರರಿಗೆ ಘೋಷಿಸಿದ ಯೋಜನೆಗಳನ್ನು ಅಕ್ಷರಶಃ ಜಾರಿಗೊಳಿಸುತ್ತಿದ್ದೇವೆ.

    ಮೀನುಗಾರ ಸಮುದಾಯಕ್ಕೆ ನೀಡಿದ ಮಾತನ್ನು ಉಳಿಸಿಕೊಳ್ಳುತ್ತಿದ್ದೇವೆ.#PragatiyaBudget pic.twitter.com/ZX6Gm6qCqG

    — Karnataka Congress (@INCKarnataka) July 7, 2023 " class="align-text-top noRightClick twitterSection" data=" ">

2023-24ನೇ ಸಾಲಿನಲ್ಲಿ ಒಟ್ಟು 2,50,933 ಕೋಟಿ ರೂ.ಗಳ ರಾಜಸ್ವ ವೆಚ್ಚ, 54,374 ಕೋಟಿ ರೂ.ಗಳ ಬಂಡವಾಳ ವೆಚ್ಚ ಹಾಗೂ ಸಾಲದ ಮರುಪಾವತಿ 22,441 ಕೋಟಿ ರೂ.ಗಳ ವೆಚ್ಚವನ್ನು ಒಳಗೊಂಡು, ಒಟ್ಟು ವೆಚ್ಚವು 3,27,747 ಕೋಟಿ ರೂ.ಗಳಾಗುತ್ತದೆಂದು ಅಂದಾಜು ಮಾಡಲಾಗಿದೆ.

ಇದನ್ನೂ ಓದಿ : Karnataka Budget: ಪುನೀತ್​ ಸ್ಮರಣಾರ್ಥ ಹಠಾತ್ ಹೃದಯ ಸಂಬಂಧಿ ಸಾವು ತಡೆಗಟ್ಟಲು ₹6 ಕೋಟಿ ಅನುದಾನ

Last Updated : Jul 7, 2023, 3:39 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.