ಬೆಂಗಳೂರು: 15 ಕ್ಷೇತ್ರಗಳಿಗೆ ಡಿ.5ರಂದು ನಡೆದ ಉಪಚುನಾವಣೆಯಲ್ಲಿ ಫಲಿತಾಂಶ ಹೊರಬಿದ್ದಿದ್ದು, ಬಿಜೆಪಿ 12, ಕಾಂಗ್ರೆಸ್ 2 ಹಾಗೂ ಪಕ್ಷೇತರ ಒಂದು ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದಾರೆ. ಮೈತ್ರಿ ಸರ್ಕಾರದ ಪತನಕ್ಕೆ ಕಾರಣರಾಗಿದ್ದ ಬಹುತೇಕ ಈ ಉಪಚುನಾವಣೆಯಲ್ಲಿ ಗೆಲುವು ಕಂಡಿದ್ದಾರೆ.
ಅಚ್ಚರಿಯ ಫಲಿತಾಂಶದಲ್ಲಿ ಹುಣಸೂರು ಕ್ಷೇತ್ರದಲ್ಲಿ ಹೆಚ್.ವಿಶ್ವನಾಥ್ ಹಾಗೂ ಹೊಸಕೇಟೆ ಕ್ಷೇತ್ರದಲ್ಲಿ ಎಂಟಿಬಿ ನಾಗರಾಜ್ ಸೋಲುಂಡಿದ್ದಾರೆ. ಕಾಂಗ್ರೆಸ್ 15 ಕ್ಷೇತ್ರಗಳ ಪೈಕಿ ಹುಣಸೂರು ಹಾಗೂ ಶಿವಾಜಿನಗರದಲ್ಲಿ ಮಾತ್ರ ಜಯ ಸಾಧಿಸಿದೆ.
ಜೆಡಿಎಸ್ ಈ ಉಪಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದು, ಮೈತ್ರಿ ಸರ್ಕಾರದಲ್ಲಿ ಸಿಎಂ ಆಗಿದ್ದ ಹೆಚ್.ಡಿ.ಕುಮಾರಸ್ವಾಮಿಗೆ ಮುಖಭಂಗವನ್ನುಂಟು ಮಾಡಿದೆ.