ಬೆಂಗಳೂರು: ನೂತನ ಸಿಎಂ ಆಗಿ ಪದಗ್ರಹಣ ಮಾಡಿರುವ ಬಸವರಾಜ ಬೊಮ್ಮಾಯಿ ಮೊದಲ ದಿನವೇ ಅನೇಕ ಹೊಸ ಘೋಷಣೆಗಳನ್ನು ಮಾಡಿದ್ದಾರೆ. ಪ್ರಮುಖವಾಗಿ ರೈತರ ಮಕ್ಕಳ ಉನ್ನತ ಶಿಕ್ಷಣಕ್ಕೆ 1,000 ಕೋಟಿ ರೂ. ವಿದ್ಯಾರ್ಥಿ ವೇತನ ಯೋಜನೆ ಜಾರಿಗೊಳಿಸಿದ್ದಾರೆ.
- ಉನ್ನತ ಶಿಕ್ಷಣಕ್ಕೆ 1,000 ಕೋಟಿ ರೂ. ವಿದ್ಯಾರ್ಥಿ ವೇತನ ಯೋಜನೆ
ಅನ್ನದಾತರ ಮಕ್ಕಳು ಕಲಿಕೆಯಿಂದ ವಂಚಿತರಾಗಬಾರದು. ಹೀಗಾಗಿ ಶಿಷ್ಯವೇತನ ಜಾರಿ ಮಾಡಲಾಗುವುದು ಎಂದು ಅವರು ಹೇಳಿದರು.
- ಸಂಧ್ಯಾ ಸುರಕ್ಷಾ, ವಿಧವಾ ವೇತನ, ಅಂಗವಿಕಲ ವೇತನದಲ್ಲಿ ಹೆಚ್ಚಳ
ಇದೇ ವೇಳೆ ಸಂಧ್ಯಾ ಸುರಕ್ಷಾ ಯೋಜನೆಯನ್ನು 1 ಸಾವಿರ ರೂ.ನಿಂದ 1,200 ರೂ.ಗೆ ಹೆಚ್ಚಳ, ವಿಧವಾ ವೇತನ 600 ರೂ. ಇದ್ದು, ಇದೀಗ 800 ರೂ.ಗೆ ಏರಿಕೆ ಮಾಡಲಾಗಿದೆ. ಅಂಗವಿಕಲ ವೇತನ 600 ರೂ.ರಿಂದ 800 ರೂ.ಗೆ ಏರಿಕೆ ಆಗಲಿದೆ ಎಂದು ತಿಳಿಸಿದರು.
ಇದನ್ನೂ ಓದಿ: ನಾನು ರಬ್ಬರ್ ಸ್ಟಾಂಪ್ ಆಗಿರಲ್ಲ, ಆಡಳಿತಾತ್ಮಕ ಸ್ಟಾಂಪ್ ಆಗುತ್ತೇನೆ: ಸಿಎಂ ಬೊಮ್ಮಾಯಿ
ನನ್ನ ಆಡಳಿತದಲ್ಲಿ ರೈತರು ಹಾಗೂ ಬಡವರ ಮಕ್ಕಳ ಏಳಿಗೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ನೂತನ ಸಿಎಂ ತಿಳಿಸಿದರು.