ETV Bharat / state

ಸೋಮವಾರ ಸಚಿವ ಸಂಪುಟ ಸಭೆ : ಮಹತ್ವದ ವಿಷಯಗಳ ಚರ್ಚೆ - ವಿಧಾನಸೌಧದ ಸಚಿವ ಸಂಪುಟ ಸಭೆ

ವಿಧಾನಸೌಧದಲ್ಲಿ ಸೋಮವಾರ ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ.

Cabinet Meeting on December 7th
ಸೋಮವಾರ ಸಚಿವ ಸಂಪುಟ ಸಭೆ
author img

By

Published : Dec 5, 2020, 2:28 AM IST

ಬೆಂಗಳೂರು: ಅಧಿವೇಶನದಲ್ಲಿ ಮಂಡಿಸಬೇಕಾದ ವಿಧೇಯಕಗಳು, ಸರ್ಕಾರದಲ್ಲಿನ ಗೊಂದಲ, ಪ್ರತಿಪಕ್ಷದ ಆರೋಪಗಳಿಗೆ ತಿರುಗೇಟು ಸೇರಿದಂತೆ ಇತರೆ ವಿಚಾರಗಳ ಕುರಿತು ಚರ್ಚಿಸಿ ತೀರ್ಮಾನ ಕೈಗೊಳ್ಳುವ ಉದ್ದೇಶದಿಂದ ಡಿಸೆಂಬರ್ 7 ರಂದು ಸಚಿವ ಸಂಪುಟ ಸಭೆ ಕರೆಯಲಾಗಿದೆ.

ಸೋಮವಾರ ಸಂಜೆ 6 ಗಂಟೆಗೆ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಡಿಸೆಂಬರ್ 7 ರಿಂದ ಅಧಿವೇಶನ ಪ್ರಾರಂಭವಾಗಲಿದ್ದು, ಮೊದಲನೇ ದಿನದಂದು ಸಂತಾಪ ಸೂಚಕ ನಿರ್ಣಯ ಕೈಗೊಂಡು ಸದನವನ್ನು ಮುಂದೂಡುವ ಸಾಧ್ಯತೆ ಇದೆ. ಹೀಗಾಗಿ ಮಂಗಳವಾರದಿಂದ ಸದನದಲ್ಲಿ ನಡೆಯುವ ಕಾರ್ಯಕಲಾಪದಲ್ಲಿ ಭಾಗಿಯಾಗುವುದು, ಪ್ರತಿಪಕ್ಷ ಕಾಂಗ್ರೆಸ್, ಜೆಡಿಎಸ್ ಆರೋಪಗಳಿಗೆ ತಿರುಗೇಟು ನೀಡುವ ಕುರಿತು ಚರ್ಚೆ ನಡೆಯಲಿದೆ.

ಸಚಿವ ಸಂಪುಟ ವಿಸ್ತರಣೆ ಸಂಬಂಧ ಸರ್ಕಾರದಲ್ಲಿ ಹಲವು ಗೊಂದಲಗಳು ಮೂಡಿರುವುದು, ಸ್ವಪಕ್ಷದವರಿಂದಲೇ ಟೀಕೆಗಳನ್ನು ಎದುರಿಸುವಂತಾಗಿದೆ. ಈ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆ ಇದೆ. ಗೋಹತ್ಯೆ ನಿಷೇಧ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಆಸಕ್ತಿಹೊಂದಿದ್ದು, ಇದರ ಸಾಧಕ-ಬಾಧಕ ಕುರಿತು ಸಮಾಲೋಚನೆ ನಡೆಸಲಾಗುತ್ತದೆ. ಇದಲ್ಲದೆ, ಕಳೆದ ಬಾರಿ ಅಧಿವೇಶನದಲ್ಲಿ ಸರ್ಕಾರದಿಂದ ಸ್ವೀಕರಿಸಿ ಮಂಡನೆಗೆ ಬಾಕಿ ಇರುವ ವಿಧೇಯಕಗಳನ್ನು ಸಹ ಸದನದಲ್ಲಿ ಮಂಡಿಸಲಾಗುತ್ತದೆ. ಈ ಬಗ್ಗೆಯೂ ಚರ್ಚೆಗಳು ನಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.