ETV Bharat / state

ಇಂದಿನಿಂದ ಬಿಎಸ್​ವೈ ದೆಹಲಿ ಪ್ರವಾಸ... ಸಂಪುಟ ವಿಸ್ತರಣೆ ಸೇರಿ ಪ್ರಮುಖ ವಿಷಯಗಳ ಚರ್ಚೆ!

ರಾಜ್ಯ ಸಂಪುಟ ವಿಸ್ತರಣೆ ಸೇರಿದಂತೆ ನೆರೆ ಪರಿಹಾರ ಮತ್ತಿತರ ಉದ್ದೇಶಕ್ಕಾಗಿ ಬಿಜೆಪಿ ಹೈಕಮಾಂಡ್​ ಭೇಟಿಯಾಗಲು ಇಂದಿನಿಂದ ಬಿಎಸ್​ವೈ ಮೂರು ದಿನಗಳ ನವದೆಹಲಿ ಪ್ರವಾಸ ಕೈಗೊಳ್ಳಲಿದ್ದಾರೆ.

Karnataka CM Yediyurappa
Karnataka CM Yediyurappa
author img

By

Published : Sep 17, 2020, 5:03 AM IST

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆಗೆ ಅನುಮತಿ, ನೆರೆ ಪರಿಹಾರ ಸೇರಿದಂತೆ ಇತರೆ ವಿಷಯಗಳ ಬಗ್ಗೆ ಚರ್ಚೆ ನಡೆಸಲು ಹೈಕಮಾಂಡ್ ಭೇಟಿಗೆ ಮುಂದಾಗಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಇಂದಿನಿಂದ ಮೂರು ದಿನಗಳ ನವದೆಹಲಿ ಪ್ರವಾಸಕ್ಕೆ ತೆರಳುತ್ತಿದ್ದಾರೆ.

ಬೆಳಗ್ಗೆ 7 ಗಂಟೆಗೆ ಹೆಚ್ಎಎಲ್ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ಕಲಬುರಗಿಗೆ ಸಿಎಂ ಪ್ರಯಾಣ ಬೆಳೆಸಲಿದ್ದು, 9 ಗಂಟೆಗೆ ಕಲ್ಯಾಣ ಕರ್ನಾಟಕ ಉತ್ಸವ ದಿನಾಚರಣೆಯ ಧ್ವಜಾರೋಹಣ ನೆರವೇರಿಸಲಿದ್ದಾರೆ. ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಚಾಲನೆ ನೀಡಲಿದ್ದು, ನಂತರ 11 ಗಂಟೆಗೆ ಕಲಬುರಗಿ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನದ ಮೂಲಕ ನವದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ.

ಮಧ್ಯಾಹ್ನ 1.20ಕ್ಕೆ ನವದೆಹಲಿ ವಿಮಾನ ನಿಲ್ದಾಣ ತಲುಪಲಿದ್ದಾರೆ.ಅಲ್ಲಿಂದ ನೇರವಾಗಿ ಕರ್ನಾಟಕ ಭವನಕ್ಕೆ ತೆರಳಲಿದ್ದು, ಕೆಲ ಕಾಲ ವಿಶ್ರಾಂತಿ ಪಡೆದುಕೊಳ್ಳಲಿದ್ದಾರೆ. ನಂತರ ಕೇಂದ್ರದ ಸಚಿವರೊಂದಿಗೆ ಸಭೆ ನಡೆಸಲಿದ್ದಾರೆ.

ನಾಳೆ ರಾತ್ರಿ ಕರ್ನಾಟಕ ಭವನದಲ್ಲೇ ಸಿಎಂ ವಾಸ್ತವ್ಯ ಹೂಡಲಿದ್ದಾರೆ. ಸೆ.18ರಂದು ಬೆಳಗ್ಗೆ 9 ಗಂಟೆಗೆ ಕರ್ನಾಟಕ ಭವನದಲ್ಲಿ ಕಾವೇರಿ ಕಟ್ಟಡ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಿದ್ದಾರೆ. ಮಧ್ಯಾಹ್ನದ ನಂತರ ಕೇಂದ್ರದ ಸಚಿವರೊಂದಿಗೆ ಸಭೆ ನಡೆಸಲಿದ್ದು, ರಾಜ್ಯಕ್ಕೆ ನೆರೆಹಾನಿ ಪರಿಹಾರ ಬಿಡುಗಡೆ ಕುರಿತು ಚರ್ಚೆ ನಡೆಸಲಿದ್ದಾರೆ. ನಷ್ಟದ ಪ್ರಮಾಣವನ್ನು ಸವಿಸ್ತಾರವಾಗಿ ವಿವರಿಸಿ ಹೆಚ್ಚಿನ ಪರಿಹಾರಕ್ಕೆ ಬೇಡಿಕೆ ಸಲ್ಲಿಸಲಿದ್ದಾರೆ. ಅಂದು ರಾತ್ರಿಯೂ ಕರ್ನಾಟಕ ಭವನದಲ್ಲಿಯೇ ಸಿಎಂ ವಾಸ್ತವ್ಯ ಮಾಡಲಿದ್ದಾರೆ.

ಸೆ.19ರಂದು ಕೇಂದ್ರದ ಸಚಿವರೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ. ನಂತರ ಹೈಕಮಾಂಡ್ ನಾಯಕರನ್ನು ಸಿಎಂ ಭೇಟಿಯಾಗಿ, ಸಂಪುಟ ವಿಸ್ತರಣೆ ಕುರಿತು ಮಾತುಕತೆ ನಡೆಸಲಿದ್ದಾರೆ. ಅಧಿವೇಶನಕ್ಕೂ ಮೊದಲೇ ಸಂಪುಟ ವಿಸ್ತರಣೆ ಹಾಗು ಸಚಿವರ ಪಟ್ಟಿಗೆ ಅನುಮತಿ ಪಡೆಯಲಿದ್ದಾರೆ ಎನ್ನಲಾಗಿದೆ.

ದೆಹಲಿ ಭೇಟಿ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ,ಗೃಹ ಸಚಿವ ಅಮಿತ್​ ಶಾ ಹಾಗೂ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರನ್ನ ಭೇಟಿ ಮಾಡುವ ನಿರೀಕ್ಷೆ ಇದೆ. ಆದರೆ ಗೃಹ ಸಚಿವರಿಗೆ ಅನಾರೋಗ್ಯದ ಕಾರಣ ಭೇಟಿಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.